ಅಲ್ಪಸಂಖ್ಯಾತ ಕಾನೂನು ಪದವೀಧರರಿಗೆ ನ್ಯಾಯಾಧೀಕರಣ ತರಬೇತಿ: ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

0
42

ಕಲಬುರಗಿ.: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2020-21ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗದ ಕಾನೂನು ಪದವಿ ಪಡೆದ ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ವಕೀಲ ವೃತ್ತಿ ತರಬೇತಿಗೆ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಡಿ.28ರ ವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ನಾಲ್ಕು ವರ್ಷದ ಅವಧಿಯ ಈ ತರಬೇತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದೊಳಗೆ 38 ವರ್ಷ ಮೀರದ ಕಲಬುರಗಿ ಜಿಲ್ಲೆಯ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 3.5 ಲಕ್ಷ ರೂ. ಮೀರಿರಬಾರದು. ಪ್ರವರ್ಗ-1ರಡಿ ಬರುವ ಅಭ್ಯರ್ಥಿಗಳಿಗೆ ಆದಾಯದ ಮಿತಿ ಇರುವುದಿಲ್ಲ. ಅಭ್ಯರ್ಥಿಯು ಬಾರ್ ಕೌನ್ಸಿಲ್‍ನಲ್ಲಿ ಹೆಸರು ನೋಂದಾಯಿಸಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ 5 ಸಾವಿರ ರೂ.ನಂತೆ ತರಬೇತಿ ಭತ್ಯ ನೀಡಲಾಗುತ್ತದೆ.

Contact Your\'s Advertisement; 9902492681

ಆಸಕ್ತರು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರ ಕಟ್ಟಡ 1ನೇ ಮಹಡಿ, ಸ್ಟೇಷನ್ ರಸ್ತೆ, ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತ ಕಲಬುರಗಿ ಇಲ್ಲಿಗೆ ಅರ್ಜಿ ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 08472-247260 ಗೆ ಸಂಪರ್ಕಿಸಬಹುದು.

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here