ಬಿಸಿ ಬಿಸಿ ಸುದ್ದಿ

ಉದ್ದಿಮೆ ಪರವಾನಗಿ ಹೆಸರಿನಲ್ಲಿ ಕೋಟ್ಯಂತರ ಲೂಟಿ: ಆನಂದ್ ವಾಸುದೇವನ್ ಆಗ್ರಹ

ಬೆಂಗಳೂರು; ಉದ್ದಿಮೆ ಪರವಾನಗಿ ನೀಡುವ ನೆಪದಲ್ಲಿ ನಡೆಯುತ್ತಿರುವ ಸುಲಿಗೆಯನ್ನು ತಪ್ಪಿಸಲು ಆನ್‌ಲೈನ್‌ ಮೂಲಕ ಉದ್ದಿಮೆ ಪರವಾನಗಿ ನೀಡಲಾಗುವುದು ಎಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದ ಆಯುಕ್ತ ಮಂಜುನಾಥ್ ಪ್ರಸಾದ್ ಅವರ ಮಾತು ಸುಳ್ಳಾಗಿದೆ. ಕೋಟ್ಯಂತರ ರೂಪಾಯಿ ಹಣವನ್ನು ಉದ್ದಿಮೆದಾರರಿಂದ ಸುಲಿಗೆ ಮಾಡಲಾಗುತ್ತಿದೆ ಎಂದು ಸಿ.ವಿ.ರಾಮನ್ ನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಆನಂದ್ ವಾಸುದೇವನ್ ಆರೋಪಿಸಿದರು.

ಮಂಗಳವಾರ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿ, ಮೇಲಿನ ಅಧಿಕಾರಿಗಳು ತಮ್ಮ ಕೆಳಗಿನ ಅಧಿಕಾರಿಗಳನ್ನು ರಕ್ಷಿಸುತ್ತಿದ್ದಾರೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವ್ಯವಸ್ಥೆಯನ್ನು ಹಾಳುಗೆಡವಿ, ಉದ್ದಿಮೆದಾರರನ್ನು ಕಚೇರಿಗೆ ಕರೆಸಿ ನವೀಕರಣದ ಹೆಸರಿನಲ್ಲಿ ಹಣ ಕೀಳಲಾಗುತ್ತಿದೆ. ಎಲ್ಲಾ ಮಾಜಿ ಮೇಯರ್‌ಗಳು, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷರುಗಳು, ಮಾಜಿ ಪಾಲಿಕೆ ಸದಸ್ಯರುಗಳು ಸಹ ಈ ಜಾಲದಲ್ಲಿ ಇದ್ದಾರೆ ಎಂದರು.

ಬೆಂಗಳೂರಿನಲ್ಲಿ ಉದ್ದಿಮೆ ತೆರೆಯುವುದು ಇನ್ನು ಸುಲಭ ಎಂದು ಹೇಳಿದ್ದ ಬಿಬಿಎಂಪಿ ಹಿಂಬಾಗಿಲ ಮೂಲಕ ಉದ್ದಿಮೆದಾರರಿಂದ ಹಣ ದೋಚುತ್ತಿದ್ದು, ಪರವಾನಗಿಗೆ ನೀಡುವುದೇ ದಂದೆಯಾಗಿ ಮಾರ್ಪಟ್ಟಿದೆ ಎಂದು ಹೇಳಿದರು. ಕಳೆದ ಮಾರ್ಚ್‌ ತಿಂಗಳಲ್ಲಿ ಪಾಲಿಕೆ ಅಧಿಕಾರಿಗಳೇ ನಡೆಸಿದ ಸಮೀಕ್ಷೆ ಪ್ರಕಾರ, 198 ವಾರ್ಡ್‌ಗಳಲ್ಲಿ ಪರವಾನಗಿ ಪಡೆದು ಅಧಿಕೃತವಾಗಿ 50,383, ಅನಧಿಕೃತವಾಗಿ 59,130 ಉದ್ದಿಮೆಗಳು ನಡೆಯುತ್ತಿವೆ ಎಂದು ಆರೋಗ್ಯ ಅಧಿಕಾರಿಗಳು ವರದಿ ಸಲ್ಲಿಸಿದ್ದರು. ತದನಂತರ ಈ ಸಮೀಕ್ಷೆ ಸಾಕಷ್ಟು ಅನುಮಾನ ಮೂಡಿಸಿದ ಕಾರಣ ಮತ್ತೆ ಮರು ಸಮೀಕ್ಷೆ ನಡೆಸಲಾಯಿತು. ಆಗ 1.28 ಲಕ್ಷ ಅನಧಿಕೃತ, 50,150 ಅಧಿಕೃತ ಒಟ್ಟು 1,79,001 ಉದ್ದಿಮೆಗಳಿರುವುದು ಬೆಳಕಿಗೆ ಬಂದಿತ್ತು. ಅಂದಾಜಿನ ಪ್ರಕಾರ ನಗರದಲ್ಲಿ 5 ಲಕ್ಷ ಪರವಾನಗಿ ಪಡೆಯದ ಉದ್ದಿಮೆಗಳಿದ್ದು ಇವುಗಳಿಂದ ಎಲ್ಲಾ ರೀತಿಯ ಅಧಿಕಾರಿಗಳು ಕೋಟ್ಯಂತರ ರೂ ವಸೂಲಿ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.

ಲಕ್ಷಾಂತರ ಕುಟುಂಬಗಳಿಗೆ ಉದ್ಯೋಗ ನೀಡುತ್ತಿರುವ ಉದ್ದಿಮೆದಾರರಿಗೆ ಕಿರುಕುಳ ತಪ್ಪಿಸಬೇಕು. ನಾಲ್ಕು ವಲಯಗಳಲ್ಲೂ ಒಂದೊಂದು ಉದ್ದಿಮೆ ಪರವಾನಗಿ ನೀಡಲು ಕಚೇರಿ ತೆರಯಬೇಕು ಹಾಗೂ ಆನ್‌ಲೈನ್‌ ವ್ಯವಸ್ಥೆ ಯನ್ನು ಗಟ್ಟಿಗೊಳಿಸಿ ಕಿರುಕುಳ ತಪ್ಪಿಸಬೇಕು, ಹಳೆಯ ದರಗಳನ್ನು ಪರಿಷ್ಕರಿಸಿ ವೈಜ್ಞಾನಿಕ ಶುಲ್ಕ ವಿಧಸಬೇಕು ಎಂದು ಬೇಡಿಕೆಗಳನ್ನು ಇಟ್ಟರು.

emedialine

Recent Posts

ಪೂರ್ವ ಪೀಠಿಕೆ ಓದುವ ಮೂಲಕ ಸಂವಿಧಾನ ದಿನ ಆಚರಣೆ

ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…

35 mins ago

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

12 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

23 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

23 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 day ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 day ago