ಕಲಬುರಗಿ: ರಸ್ತೆ ಅಪಘಾತಕ್ಕೆ ಕಡಿವಾಣ ಹಾಕಲು ಡಿಸಿ ಸೂಚನೆ

0
52

ಕಲಬುರಗಿ: ಲಾಕ್ ಡೌನ್ ನಂತರ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವಿ.ವಿ. ಜೋತ್ಸ್ನಾ ಸೂಚನೆ ನೀಡಿದರು.

ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Contact Your\'s Advertisement; 9902492681

ಜಿಲ್ಲೆಯಲ್ಲಿರುವ ಬ್ಲಾಕ್ ಸ್ಪಾಟ್‍ಗಳನ್ನು ಗುರುತಿಸಬೇಕು. ಗುರುತಿಸಲ್ಪಟ್ಟ ಸ್ಥಳಗಳಲ್ಲಿ ಅಪಘಾತ ನಿಯಂತ್ರಣ ನಿಟ್ಟಿನಲ್ಲಿ ಪರಿವರ್ತನ ಚಟುವಟಿಕೆಗಳನ್ನು ಹೆಚ್ಚುಗೊಳಿಸಬೇಕು ಎಂದರು.

ರಸ್ತೆ ಅಪಘಾತಕ್ಕೆ ಕಾರಣವಾಗುವ ರಸ್ತೆಗಳಲ್ಲಿನ ದೋಷಗಳನ್ನು ಸರಿಪಡಿಸಲು ಅವಶ್ಯಕ ಸಂಪನ್ಮೂಲಗಳನ್ನೊಳಗೊಂಡ ಕ್ರಿಯಾ ಯೋಜನೆಯನ್ನು 10 ದಿನದೊಳಗಾಗಿ ಸಿದ್ದಪಡಿಸಿ ಸಮಿತಿಗೆ ಸಲ್ಲಿಸಬೇಕೆಂದು ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಮಲ್ಲಿಕಾರ್ಜುನ ಹೆಚ್. ಜೆರಟಗಿ ಅವರಿಗೆ ಡಿ.ಸಿ. ವಿ.ವಿ.ಜ್ಯೋತ್ಸ್ನಾ ಸೂಚಿಸಿದರು.

ರಸ್ತೆ ಅಪಘಾತ ಸಂದರ್ಭದಲ್ಲಿ ಪೊಲೀಸ್ ಮತ್ತು ಆಸ್ಪತ್ರೆಗಳ ದಾಖಲೆಗಳ ಹೊಂದಾಣಿಯು ಸರಿಯಾಗಿರುವಂತೆ ನೋಡಿಕೊಳ್ಳಬೇಕು. ರಸ್ತೆ ಅಪಘಾತಗಳು ಕಡಿಮೆ ಮಾಡುವ ನಿಟ್ಟಿನಲ್ಲಿ ದತ್ತಾಂಶಗಳನ್ನು ಸಂಗ್ರಹಿಸಿ ವಿಶ್ಲೇಷಿಸಿ ಅನುಷ್ಠಾನಕ್ಕೆ ತರಬೇಕು ಹಾಗೂ ಪಾಲುದಾರ ಎಲ್ಲಾ ಇಲಾಖೆಗಳು ರಸ್ತೆ ಅಪಘಾತ ತಡೆಗೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

ಆರ್.ಟಿ.ಓ, ಪಿಡಬ್ಲ್ಯೂಡಿ, ಪೆÇಲೀಸ್ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ಮಾಡಿ, ಎಲ್ಲೆಲ್ಲಿ ಅಪಘಾತ ಸ್ಥಳಗಳಿವೆ ಅಲ್ಲಲ್ಲಿ ಸೂಚನಾ ಫಲಕಗಳು ಮತ್ತು ಹೆದ್ದಾರಿ ಫಲಕಗಳನ್ನು ಅಳವಡಿಸಬೇಕು. ರಸ್ತೆ ಸಂಚಾರದ ಶಿಕ್ಷಣ ನೀಡಲು ರಸ್ತೆ ವಿಭಜಕಗಳು ಮತ್ತು ಸೂಚಕಗಳು ಹಾಕಬೇಕು. ಈ ಕುರಿತು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಯುವ ಜನತೆ ಮತ್ತು ಸಾರ್ವಜನಿಕರಲ್ಲಿ ಹೆಚ್ಚಿನ ರೀತಿಯಲ್ಲಿ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ. ದಾಮೋದರ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 124 ಅಪಘಾತ ಸ್ಥಳಗಳನ್ನು ಗುರುತಿಸಲಾಗಿದೆ. ಇದರಲ್ಲಿ 82 ಅಪಘಾತ ಸ್ಥಳಗಳನ್ನು ಈಗಾಗಲೆ ಜಂಟಿ ಸಮೀಕ್ಷೆ ಮಾಡಿ ಅದನ್ನು ಸರಿಪಡಿಸಲು ಲೊಕೋಪಯೋಗಿ ಇಲಾಖೆಗೆ ವರದಿ ನೀಡಲಾಗಿದ್ದು, ಬ್ಲಾಕ್ ಸ್ಪಾಟ್ ಸರಿಪಡಿಸಲು ಅವರಿಂದ ಅಂದಾಜು ಪಟ್ಟಿ ಬರಬೇಕಿದೆ ಎಂದು ಸಭೆಯ ಗಮನಕ್ಕೆ ತಂದರು.

ಸಭೆಯಲ್ಲಿ ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಡಾ. ಸಿಮಿ ಮರಿಯಮ್ ಜಾರ್ಜ್, ಮಹಾನಗರ ಪಾಲಿಕೆಯ ಆಯುಕ್ತ ಸ್ನೇಹಲ್ ಸುಧಾಕರ್ ಲೋಖಂಡೆ, ಡಿ.ಹೆಚ್.ಓ. ಡಾ.ರಾಜಶೇಖರ್ ಮಾಲಿ ಸೇರಿದಂತೆ ರಸ್ತೆ ಸುರಕ್ಷತಾ ಸಮಿತಿಯ ಸದಸ್ಯರುಗಳಾದ ಇತರೆ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here