ಕಲಬುರಗಿ: ಕೇಂದ್ರ ಕಾರಾಗೃಹದ ಬಂದಿಗಳಿಗೆ ಏಡ್ಸ್ ಕುರಿತು ಜಾಗೃತಿ

0
29

ಕಲಬುರಗಿ: ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಇತ್ತೀಚೆಗೆ ಕೇಂದ್ರ ಕಾರಾಗೃಹದ ಬಂದಿಗಳಿಗೆ ಏಡ್ಸ್ ಕುರಿತು ಜಾಗೃತಿ ಮತ್ತು ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಿ, ವಿಜೇತರಾದದವರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್‍ನ ಅರುಣಾದೇವಿ ಮಾತನಾಡಿ, ಕಾರಾಗೃಹದ ಬಂದಿಗಳು ಉತ್ತಮ ನಡತೆಯನ್ನು ಕಲಿಯಬೇಕು. ಮುಂದಿನ ದಿನಗಳಲ್ಲಿ ಲೈಯನ್ಸ್ ಕ್ಲಬ್‍ದಿಂದ ಅರಿವು ಕಾರ್ಯಕ್ರಮದ ಜೊತೆಗೆ ಕರಕುಶಲ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಪ್ರಯತ್ನಿಸಲಾಗುವುದು ಎಂದರು.

Contact Your\'s Advertisement; 9902492681

ಕಾರ್ಯಕ್ರಮದ ಅತಿಥಿಯಾಗಿ ಕಲಬುರಗಿ ಐ.ಸಿ.ಟಿ.ಸಿ. ಆಪ್ತ ಸಮಾಲೋಚಕಿ ಸುಗಲಾರಾಣಿ ಮಾತನಾಡಿ, “ಹೆಚ್.ಐ.ವಿ. ಸೋಂಕಿನ ತಡೆಗಾಗಿ ಜಾಗತಿಕ ಒಗ್ಗಟ್ಟು ಹಾಗೂ ಜವಾಬ್ದಾರಿಯ ಹಂಚಿಕೆ” ಈ ವರ್ಷದ ಘೋಷವಾಕ್ಯವಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಕಾರಾಗೃಹದ ಮುಖ್ಯ ಅಧೀಕ್ಷಕ ಪಿ.ಎಸ್. ರಮೇಶ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಹಾಯಕ ಅಧೀಕ್ಷಕ ವಿ. ಕೃಷ್ಣಮೂರ್ತಿ ಹಾಗೂ ವೈದ್ಯಾಧಿಕಾರಿ ಡಾ.ಬಸವರಾಜ್ ಕಿರಣಗಿ ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಗೋಪಾಲಕೃಷ್ಣ ಕುಲಕರ್ಣಿ ಸ್ವಾಗತಿಸಿದರು. ನಾಗರಾಜ ಮುಲಗೆ ಕಾರ್ಯಕ್ರಮ ನಿರೂಪಿಸಿದರು. ಕಾರಾಗೃಹದ ಬಂದಿಗಳಾದ ಮಲ್ಲಿಕಾರ್ಜುನ ಹಾಗೂ ವಿಜಯಮೋಹನ ಸಿಂಗ್ ಸ್ವಾಗತ ಗೀತೆ ಹಾಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here