ಯಾನಾಗುಂದಿ ನ್ಯಾಯ ಬೆಲೆ ಅಂಗಡಿ ಸಂಖ್ಯೆ 68 ಅಮಾನತ್ತು

0
133

ಕಲಬುರಗಿ: ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ, ಎತ್ತುವಳಿ ಹಾಗೂ ವಿತರಣೆಗೆ ಸಂಬಂಧಿಸಿದ ಆರೋಪದ ಹಿನ್ನೆಲೆಯಲ್ಲಿ ಸೇಡಂ ತಾಲೂಕಿನ ಯಾನಾಗುಂದಿ ಗ್ರಾಮದ ಗಂಗಾಮಾತಾ ಕೋಲಿ ಸಮಾಜದ ಸಂಘದ ಅಧ್ಯಕ್ಷರ ನ್ಯಾಯಬೆಲೆ ಅಂಗಡಿ ಸಂಖ್ಯೆ 68 ರ ವಿರುದ್ಧ ಪ್ರಾಧಿಕಾರದ ವಿಚಾರಣೆಯನ್ನು ಕಾಯ್ದಿರಿಸಿ ತಕ್ಷಣದಿಂದ ಅಮಾನತ್ತಿನಲ್ಲಿರಿಸಲಾಗಿದೆ ಎಂದು ಕಲಬುರಗಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಿರಿಯ ಉಪನಿರ್ದೇಶಕ ಡಾ.ಕೆ.ರಾಮೇಶ್ವರಪ್ಪ ತಿಳಿಸಿದ್ದಾರೆ.

ಮೇಲ್ಕಂಡ ನ್ಯಾಯ ನೆಲೆ ಅಂಗಡಿ ಸಂಖ್ಯೆ ೬೮ರ ವ್ಯಾಪ್ತಿಗೆ ಬರುವ ಪಡಿತರ ಚೀಟಿದಾರರನ್ನು ಸಮೀಪದ ಬುರಗಪಲ್ಲಿ ಗ್ರಾಮದ ಶ್ರೀ ಸತ್ಯನಾರಾಯರೆಡ್ಡಿ ನ್ಯಾಯಬೆಲೆ ಅಂಗಡಿ ಸಂಖ್ಯೆ 34ಕ್ಕೆ ತಾತ್ಕಾಲಿಕವಾಗಿ ನಿಯೋಜಿಸಲಾಗಿದೆ. ಮುಂದಿನ ಆದೇಶದವರಗೆ ಪಡಿತರ ವಿತರಿಸಲು ಸಹ ಆದೇಶಿಸಲಾಗಿದ್ದು, ಸಂಬಂಧಪಟ್ಟ ಪಡಿತರ ಚೀಟಿದಾರರು ಬುರಗಪಲ್ಲಿ ಗ್ರಾಮದ ಶ್ರೀ ಸತ್ಯನಾರಾಯಣರೆಡ್ಡಿ ನ್ಯಾಯಬೆಲೆ ಅಂಗಡಿ ಸಂಖ್ಯೆ 34 ರಲ್ಲಿ ತಮ್ಮ ಪಡಿತರ ವಸ್ತುಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here