ಬಿಸಿ ಬಿಸಿ ಸುದ್ದಿ

ಎಚ್.ಡಿ.ಕುಮಾರಸ್ವಾಮಿಯವರ ಹುಟ್ಟು ಹಬ್ಬ: ಜೆಡಿಎಸ್ ಪಕ್ಷದಿಂದ ರೈತರಿಗೆ, ಕಾರ್ಮಿಕರಿಗೆ ಸನ್ಮಾನ

ಶಹಾಬಾದ: ನಗರದ ಜೆಡಿಎಸ್ ಕಚೇರಿಯಲ್ಲಿ ಬುಧವಾರ ಜೆಡಿಎಸ್ ಪಕ್ಷದ ವತಿಯಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಹುಟ್ಟು ಹಬ್ಬದ ನಿಮಿತ್ತ ರೈತರನ್ನು ಹಾಗೂ ಕಾರ್ಮಿಕರನ್ನು ಸನ್ಮಾನಿಸುವ ಮೂಲಕ ವಿಶಿಷ್ಠವಾಗಿ ಆಚರಿಸಲಾಯಿತು.

ಜೆಡಿಎಸ್ ಅಧ್ಯಕ್ಷ ರಾಜ್ ಮಹ್ಮದ್ ರಾಜಾ ಮಾತನಾಡಿ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗಳು ತಮ್ಮ ಅಧಿಕಾರದ ಅವಧಿಯಲ್ಲಿ ಮಾಡಿದ ಜನಪರ ಸೇವೆಗಳು ಇಂದಿಗೂ ಶಾಶ್ವತವಾದುದು.ಅವರು ಚಿಕ್ಕ ವಯಸ್ಸಿನಲ್ಲಿಯೇ ಮುಖ್ಯಮಂತ್ರಿಯಾಗಿ ಅಭಿವೃದ್ಧಿಯೆಂದರೇನು ಎಂದು ಎಲ್ಲರಿಗೂ ತೋರಿಸಿಕೊಟ್ಟವರು.ಅಲ್ಲದೇ ಗ್ರಾಮ ವಾಸ್ತವ್ಯದ ಮೂಲಕ ಮನೆ ಮಾತಾದರು.ಅವರಂತ ಜನಪರವಾದ ಕಾಳಜಿಯುಳ್ಳ, ರೈತರ ಜತೆ ಸಂವಾದ ಮಾಡಿ ರೈತರ ಕಷ್ಟಗಳನ್ನು ಆಲಿಸಿದ ಮೊಟ್ಟ ಮೊದಲ ಮುಖ್ಯಂತ್ರಿ ಎಂದರೆ ಕುಮಾರಸ್ವಾಮಿಯವರು ಎಂದು ಹೇಳಿದರು.

ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಲೋಹಿತ್ ಕಟ್ಟಿ ಮಾತನಾಡಿ,ರಾಜ್ಯ ಮತ್ತು ರಾಷ್ಟ್ರಕ್ಕೆ ಇಂದು ಉನ್ನತವಾದ ವಿಚಾರಗಳನ್ನು ಮತ್ತು ಉದ್ದೇಶಗಳನ್ನು ಹೊಂದಿರುವ ರಾಜಕಾರಣಿಗಳ ಅವಶ್ಯಕತೆಯಿದೆ.ಅಂತಹ ವಿಚಾಧಾರೆ ಹೊಂದಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಅತೀ ಕಿರಿಯ ವಯಸ್ಸಿನಲ್ಲಿಯೇ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿ ರಾಜ್ಯಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ.ಹಲವಾರು ಜನಪ್ರೀಯ ಕಾರ್ಯಕ್ರಮಗಳ ಮೂಲಕ ಇಂದಿಗೂ ಕೂಡ ಜನಮಾನಸದಲ್ಲಿ ಉಳಿದುಕೊಂಡಿದ್ದಾರೆ ಎಂದು ಹೇಳಿದರು.

ಮಲ್ಲಿಕಾರ್ಜುನ ಹಳ್ಳಿ, ವಿಜಯಲಕ್ಷ್ಮೀ ಬಂಗರಗಿ, ಯೂಸೂಫ್ ಸಾಹೇಬ್, ಹೀರಾಲಾಲ್ ಪವಾರ, ಮೆಹಬೂಬ ಗೋಗಿ, ಅಬ್ದುಲ್ ಜಬ್ಬಾರ, ಹನುಮಾನ ಕಾಂಬಳೆ, ವಿಶ್ವನಾಥ ಚಿತ್ತಾಪುರ, ಅಬ್ದುಲ ರಶೀದ, ಬಸವರಾಜ ದಂಡಗುಲಕರ್, ರಾಘವೇಂದ್ರ ಕುಲಕರ್ಣಿ, ರಮೇಶ ಬೆಳಮಗಿ, ಚಂದ್ರಶೇಖರ ಮಾನೆ, ಮೋಹನ ಕುಸಾಳೆ, ಮಹ್ಮದ ಜಾಫರ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

 

emedia line

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

31 mins ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

11 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

11 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

14 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

14 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

14 hours ago