ಕಲಬುರಗಿ: ಜಿಲ್ಲೆಯ ಜಗತ್ ವೃತದಲ್ಲಿ ರೈತ ಸಂಘಟನೆಗಳು ಮತ್ತು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯಿಂದ ಕೇಂದ್ರ ಮತ್ತು ರಾಜ್ಯ ಸರಕಾರ ರೈತ ಹಾಗೂ ಕೃಷಿ ವಿರೋಧಿ ಮಸೂದೆಗಳು ವಾಪಸ್ ಪಡೆಯುಬೇಕೆಂದು ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನಾ ಧರಣಿ ಸತ್ಯಗ್ರಹ ಮೂರನೇ ದಿನಕ್ಕೆ ಕಾಲಿಟ್ಟಿದೆ.
ಈ ಸಂದರ್ಭದಲ್ಲಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ರಾಜ್ಯ ಕಾರ್ಯದರ್ಶಿ ಹೋರಾಟಗಾರ್ತಿ ಕೆ ನೀಲಾ ನೀಲಾ ಅವರು ಪ್ರಧಾನಿ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಉದ್ಯೇಮಿಗಳಾದ ಅಂಬಾನಿ ಹಾಗೂ ಅದಾನಿ ಮುಖಕ್ಕೆ ಕಪ್ಪು ಶಾಹಿ ಹಚ್ಚುವ ಮೂಲಕ ಆಕ್ರೋಶ ವ್ಯಕ್ತಪಡಿಸಿ ರೈತ ಹಾಗೂ ಜನ ವಿರೋಧಿ ಮಸೂದೆಗಳನ್ನು ಕೂಡಲೆ ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು.
ಕೃಷಿ ವಿರೋಧಿ ಕಾಯ್ದೆಗಳು ಜಾರಿಗೊಳಿಸಿ ದೇಶದ ಕೃಷಿ ಕ್ಷೇತ್ರವನ್ನು ಉದ್ಯೇಮಿಗಳಿಗೆ ಅನುಕೂಲ ಕಲ್ಪಿಸಿಕುಡುವಂತಹ ಶಬ್ದಗಳ ಲೇವಡಿಯ ಮೂಲಕ ದೇಶದ ಜನರಿಗೆ ಮಂಕು ಯರಚಲು ಯತ್ನಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಧಿಕ್ಕಾರ ಕೂಗುವ ಮೂಲಕ ಜನ ವಿರೋಧಿ ಕಾನೂನುಗಳನ್ನು ಕೈಬಿಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಅಲ್ತಾಫ್ ಹುಸೇನ ಇನಾಮದಾರ, ಶಿರಾಜ ಶಾಬ್ದಿ, ಅಸಗರ ಹುಸೇನ್, ಶೇಖ ಸೈಫನ್, ಗುಲಾಮ ಶಬ್ಬಿರ ಅವರು ಇಂದು ಉಪವಾಸ ಸತ್ಯಾಗ್ರಹ ಕೈಗೊಂಡರು. ಎಐಡಿಡಬ್ಲ್ಯುಎ ಸಂಘಟನೆಯ ಕೆ.ನೀಲಾ ಸೇರಿದಂತೆ ರೈತಪರ ಸಂಘಟನೆಗಳ ಮುಖಂಡರು ಇದ್ದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…