ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾ ಹಾಗೂ ಪೂಜ್ಯ ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವನವರ ದಿವ್ಯ ಸಾನ್ನಿಧ್ಯದಲ್ಲಿ ಕನ್ನಡ ವಿಭಾಗದ ವತಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿಯ ಹಿನ್ನಲೆಯಲ್ಲಿ ’ಬುಡಕಟ್ಟು ಸಂಸ್ಕೃತಿ’ ವಿಷಯದ ಕುರಿತು ಒಂದು ದಿನದ ರಾಷ್ಟ್ರಮಟ್ಟದ ವಿಚಾರ ಸಂಕಿರಣ (ವೆಬಿನಾರ್) ಡಿ.೧೯ರಂದು ಬೆಳಿಗ್ಗೆ ೧೦ಕ್ಕೆ ಆಯೋಜಿಸಲಾಗಿದೆ.
ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ.ಡಿ.ಬಿ.ನಾಯಕ ವೆಬಿನಾರ್ ಉದ್ಘಾಟಿಸುವರು. ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ ಅತಿಥಿಯಾಗಿ ಆಗಮಿಸಲಿದ್ದಾರೆ. ವಿವಿ ಕುಲಪತಿ ಡಾ. ನಿರಂಜನ್ ವ್ಹಿ. ನಿಷ್ಠಿ ಅಧ್ಯಕ್ಷತೆ ವಹಿಸಲಿದ್ದಾರೆ.
ವಿವಿ ಕುಲಸಚಿವ ಡಾ. ಅನೀಲಕುಮಾರ ಬಿಡವೆ ಆಶಯ ನುಡಿಗಳನ್ನಾಡಲಿದ್ದಾರೆ. ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನ ವಿಭಾಗದ ಡಾ.ಕೆ.ಎಂ.ಮೇತ್ರಿ ’ಕರ್ನಾಟಕದಲ್ಲಿ ಬುಡಕಟ್ಟುಗಳು’ ಎಂಬ ವಿಷಯದ ಬಗ್ಗೆ ಮೊದಲನೆಯ ಗೋಷ್ಠಿಯಲ್ಲಿ ಮಾತನಾಡುವರು.
ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಪೀಠದ ಪ್ರಾಧ್ಯಾಪಕರಾದ ಡಾ. ಟಿ.ಎಂ.ಭಾಸ್ಕರ್ ’ಸುಡುಗಾಡು ಸಿದ್ಧರ ಸಂಸ್ಕೃತಿ’ ಎಂಬ ವಿಷಯದ ಬಗ್ಗೆ ಎರಡನೆಯ ಗೋಷ್ಠಿಯಲ್ಲಿ ವಿಚಾರಮಂಡಿಸಲಿದ್ದಾರೆ.ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ. ಚಲುವರಾಜು ’ಬುಡಕಟ್ಟು ಮಹಾಕಾವ್ಯಗಳು’ ಎಂಬ ವಿಷಯದ ಬಗ್ಗೆ ವಿಚಾರ ಮಂಡಿಸಲಿದ್ದಾರೆ.
ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ. ಗಂಗಾಧರ ದೈವಜ್ಞ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಲಿದ್ದಾರೆ. ವಿವಿಯ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಎಮ್.ಎಸ್. ಪಾಟೀಲ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ. ಸುಮಂಗಲಾ ಎನ್.ರೆಡ್ಡಿ ಮತ್ತು ಡಾ. ಪ್ರಭಾವತಿ ಎಸ್.ಚಿತಕೋಟಿ ಕಾರ್ಯಕ್ರಮದ ಸಂಯೋಜಕರಾಗಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…