ಶಹಾಪುರ: ಬಿ.ಎಸ್. ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರಕಾರ ಜನಪರ ಯೋಜನೆಗಳು ಜಾರಿಗೆ ತಂದು ಉತ್ತಮ ಕಾರ್ಯನಿರ್ವಹಿಸುತ್ತಿದೆ ಆದ್ದರಿಂದ ಈ ಬಾರಿ ಜರುಗುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಗೆಲ್ಲಿಸಬೇಕು ಎಂದು ಮಾಜಿ ಶಾಸಕರಾದ ಗುರು ಪಾಟೀಲ್ ಶಿರವಾಳ ಹೇಳಿದರು.
ತಾಲ್ಲೂಕಿನ ಗಂಗನಾಳ ಗ್ರಾಮದಲ್ಲಿ ಹಮ್ಮಿಕೊಂಡಿರುವ ಗ್ರಾಮ ಪಂಚಾಯಿತಿ ಚುನಾವಣೆ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿ ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಒಗ್ಗಟ್ಟು ಪ್ರದರ್ಶಿಸಬೇಕಾಗಿದೆ ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು.
ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಈ ಬಾರಿ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸುವುದರಿಂದ ಯೋಜನೆಗಳು ಮತ್ತಷ್ಟು ಬಡವರಿಗೆ ಅನುಕೂಲವಾಗುವ ರೀತಿಯಲ್ಲಿ ಸರಕಾರ ನೀಡಲಿದೆ ಎಂದು ತಿಳಿದರು.
ಈ ಸಭೆಯಲ್ಲಿ ಬಿಜೆಪಿ ಹಿರಿಯ ಮುಖಂಡರಾದ ಹಾಗೂ ಮಾಜಿ ವಿಧಾನಪರಿಷತ್ ಸದಸ್ಯರಾದ ಅಮಾತೆಪ್ಪ ಕಂದಕೂರ್ ಇದ್ದರು ಈ ಸಂದರ್ಭದಲ್ಲಿ ಹಲವಾರು ಕಾಂಗ್ರೆಸ್ ಮತ್ತು ಜೆಡಿಎಸ್ ತೊರೆದು ಬಿಜೆಪಿ ಪಕ್ಷ ಸೇರ್ಪಡೆಗೊಂಡರು. ಸಿದ್ದಪ್ಪ ಕಿಲಾರಿ,ಶರಣಪ್ಪ,ಮಲ್ಲಪ್ಪ, ಬಸವರಾಜ,ಮಾದೇವಪ್ಪ ದೊರಿ, ಅಳ್ಳಪ್ಪಗೌಡ ಹಾಗೂ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…