ಕಲಬುರಗಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ೨೦೧೯-೨೦ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸುತ್ತಿರುವ ಕೆಳಕಂಡ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಚೈತನ್ಯ ಸಹಾಯಧನ ಯೋಜನೆ, ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಕಿರುಸಾಲ ಯೋಜನೆಯಲ್ಲಿ ಸೌಲಭ್ಯ, ಸಂಪ್ರದಾಯಿಕ ಕುಶಲಕರ್ಮಿಗಳು ಮತ್ತು ವೃತ್ತಿ ಕಸಬುದಾರರಿಗೆ ಸಾಲ ಮತ್ತು ಸಹಾಯಧನ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಬಡ್ಡಿರಹಿತ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿಯ ವೈಯಕ್ತಿಕ ಕೊಳವೆ ಬಾವಿ ಯೋಜನೆ ಹಾಗೂ ಸಾಮೂಹಿಕ ನೀರಾವರಿ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿದಾರರು ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೩ಎ ಮತ್ತು ೩ಬಿಗೆ ಸೇರಿದವರಾಗಿರಬೇಕು (ವಿಶ್ವಕರ್ಮ ಮತ್ತು ಇದರ ಉಪ ಸಮುದಾಯಗಳು, ಉಪ್ಪಾರ ಮತ್ತು ಇದರ ಉಪ ಸಮುದಾಯಗಳು, ಅಂಬಿಗ ಮತ್ತು ಇದರ ಉಪ ಸಮುದಾಯಗಳು ಹಾಗೂ ಮತೀಯ ಅಲ್ಪಸಂಖ್ಯಾತರನ್ನು ಹೊರತುಪಡಿಸಿ). ರಾಜ್ಯ ಸರ್ಕಾರದ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ೪೦,೦೦೦ ರೂ.ಗಳು ಹಾಗೂ ಪಟ್ಟಣ ಪ್ರದೇಶದವರಿಗೆ ೫೫,೦೦೦ ರೂ.ಗಳ ಒಳಗಿರಬೇಕು. ಅರ್ಜಿದಾರರ ವಯೋಮಿತಿ ೧೮ ರಿಂದ ೫೫ ವರ್ಷದೊಳಗಿರಬೇಕು.
ನಿಗದಿತ ಅರ್ಜಿ ನಮೂನೆಗಳನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರ ಮತ್ತು ಆಯಾ ತಾಲೂಕಿನ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿ ಹಾಗೂ www.karnataka.gov.in/dbcdc ವೆಬ್‌ಸೈಟಿನಿಂದ 2019ರ ಜುಲೈ 3 ರೊಳಗೆ ಉಚಿತವಾಗಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, 2ನೇ ಮಹಡಿ, ಸಿಟಿ ಸ್ಕ್ವೆರ್ ಬೀಲ್ಡಿಂಗ್, ಬಡೇಪೂರ ೩ನೇ ಕ್ರಾಸ್, ವೀರಶೈವ ಕಲ್ಯಾಣ ಮಂಟಪದ ಎದುರುಗಡೆ, ಖರ್ಗೆ ಪೆಟ್ರೋಲ್ ಬಂಕ್ ಹತ್ತಿರ, ಹಾಗರಗಾ ರಿಂಗ್ ರೋಡ್ ಕಲಬುರಗಿ-585105 ಕಚೇರಿಯಲ್ಲಿ ಅಗತ್ಯ ದಾಖಲಾತಿಗಳೊಂದಿಗೆ 2019ರ ಜುಲೈ 12 ರೊಳಗೆ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಹಾಗೂ ವೆಬ್‌ಸೈಟ್‌ನ್ನು ಹಾಗೂ ದೂರವಾಣಿ ಸಂಖ್ಯೆ 08472-278635ಗೆ ಸಂಪರ್ಕಿಸಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…