ಕಲಬುರಗಿ: ಕುರುಬ ಮತ್ತು ಕಬ್ಬಲಿಗ ಸಮಾಜದ ಕೆಲವರಿಗೆ ಪರಿಶಿಷ್ಟ ಪಂಗಡ ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ನೀಡಲಾಗುತ್ತಿದೆ ಎಂದು ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ಸಂದೀಪ ಪಿ. ಭರಣಿ ಆರೋಪಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ ಅವರು ಕಲಬುರಗಿ ತಾಲೂಕಿನ ಗ್ರೇಡ್-೨ ತಹಶೀಲ್ದಾರ ಕುರುಬ ಮತ್ತು ಕಬ್ಬಲಿಗ ಸಮಾಜದ ಕೆಲವರಿಗೆ ಪರಿಶಿಷ್ಟ ಪಂಗಡ ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ನೀಡುತ್ತಿದ್ದಾರೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಪ್ರಕರಣದ ಕುರಿತು ತನಿಖೆ ನಡೆಸಿ ಕ್ರಮ ಕೈಗೊಂಡು ನೀಡಿರುವ ನಕಲಿ ಎಸ್ಟಿ ಪ್ರಮಾಣ ಪತ್ರಗಳನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿದ್ದಾರೆ.