ಚುನಾವಣೆ ಯಶಸ್ವಿಯಾಗಿ ನಿರ್ವಹಿಸಲು ತರಬೇತಿ ಅಗತ್ಯ: ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್

0
23

ರಾಯಚೂರು: ಜಿಲ್ಲೆಯಲ್ಲಿ ಘೋಷಣೆಯಾಗಿರುವ ಗ್ರಾಮ ಪಂಚಾಯತ್ ಚುನಾವಣೆಯನ್ನು ಪಾರದರ್ಶಕ ಹಾಗೂ ಯಶಸ್ವಿಯಾಗಿ ನಿರ್ವಹಿಸಲು ತರಬೇತಿಗಳು ಅತ್ಯಂತ ಅವಶ್ಯಕ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ ಅವರು ಅಭಿಪ್ರಾಯಪಟ್ಟರು.

ಅವರು ಡಿ.೧೭ರ ಗುರುವಾರ ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮAದಿರದಲ್ಲಿ ರಾಯಚೂರು ತಾಲೂಕ ಆಡಳಿತ ವತಿಯಿಂದ ಆಯೋಜಿಸಿದ ಗ್ರಾಮ ಪಂಚಾಯತ್ ಚುನಾವಣೆ ೨೦೨೦ರ ಹಿನ್ನಲೆಯ ಪಿಆರ್‌ಓ ಮತ್ತು ಎಪಿಆರ್‌ಓಗಳಿಗೆ ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.

Contact Your\'s Advertisement; 9902492681

ಗ್ರಾಮ ಪಂಚಾಯತ್ ಚುನಾವಣೆ ಜಿಲ್ಲೆಯಲ್ಲಿ ಎರಡು ಹಂತಗಳಲ್ಲಿ ನಡೆಯಲಿದ್ದು, ಒಟ್ಟು ೩೩೦ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಚುನಾವಣಾ ಕರ್ತವ್ಯಗಳ ಕುರಿತು ನುರಿತ ತರಬೇತಿದಾರರು ಪಿಆರ್‌ಓ ಹಾಗೂ ಎಪಿಆರ್‌ಓಗಳಿಗೆ ಚುನಾವಣೆಯಲ್ಲಿ ನಿರ್ವಹಿಸಬೇಕಾದ ಎಲ್ಲಾ ರೀತಿಯ ಕರ್ತವ್ಯಗಳನ್ನು ತಿಳಿಸಿಕೊಡುವರು. ಅವುಗಳನ್ನು ಏಕಾಗ್ರತೆಯಿಂದ ಆಲಿಸಬೇಕು, ಸಮಸ್ಯೆಗಳಿದ್ದರೆ ಬಗೆಹರಿಸಿಕೊಳ್ಳಬೇಕು, ಸಮಗ್ರವಾಗಿ ತಿಳಿದುಕೊಂಡು ಚುನಾವಣೆಯನ್ನು ಯಶಸ್ವಿಗೊಳಿಸಬೇಕು, ತರಬೇತಿಗೆ ಗೈರು ಹಾಜರಾಗುವ ಅಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳಲಾಗುವುದು ಎಂದವರು ಎಚ್ಚರಿಕೆ ನೀಡಿದರು.

ಈ ಚುನಾವಣೆಯನ್ನು ಪಕ್ಷಾತೀತವಾಗಿ ನಡೆಸುವ ಉದ್ದೇಶದಿಂದ ರಾಜ್ಯ ಮತ್ತು ಕೇಂದ್ರ ಚುನಾವಣೆ ಆಯೋಗಗಳು ಸ್ವಾತಂತ್ರö್ಯವಾಗಿ ಕಾರ್ಯ ನಿರ್ವಹಿಸುತ್ತವೆ. ಚುನಾವಣಾ ಆಯೋಗದ ನಿಯಮಾನುಸಾರ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಗ್ರಾಮ ಪಂಚಾಯತ್ ಚುನಾವಣೆ ಅಭ್ಯರ್ಥಿಗಳು ಸ್ಥಳೀಯರು ಆಗಿರುವುದರಿಂದ ಸಣ್ಣ ಪುಟ್ಟ ಲೋಪದೋಷ ಕಂಡು ಬಂದರು ಸಮಸ್ಯೆ ಉಂಟಾಗುವ ಸಾಧ್ಯತೆ ಇರುತ್ತದೆ ಈ ನಿಟ್ಟಿನಲ್ಲಿ ಚುನಾವಣ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಅತ್ಯಂತ ಜಾಗರೂಕರಾಗಿ ಕೆಲಸ ಮಾಡಬೇಕು, ಲೋಪದೋಷಗಳು ಕಂಡುಬAದಲ್ಲಿ ಕೂಡಲೇ ಮೇಲಾಧಿಕಾರಿಗಳ ಗಮನಕ್ಕೆ ತರುವಂತೆ ಸಲಹೆ ನೀಡಿದರು.

ಸಹಾಯಕ ಆಯುಕ್ತ ಸಂತೋಷ್ ಕಾಮಗೌಡ ಪ್ರಾಸ್ತಾವಿಕ ಮಾತನಾಡಿ, ಚುನಾವಣಾ ಕರ್ತವ್ಯ ಎಂದ ತಕ್ಷಣ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಒಂದು ರೀತಿಯ ಭಯ ಶುರುವಾಗುತ್ತೆ. ದೈಹಿಕವಾಗಿ ಮತ್ತು ಮಾನಸಿಕವಾಗಿ ಆತ್ಮವಿಶ್ವಾಸದಿಂದ ಕರ್ತವ್ಯ ನಿರ್ವಹಿಸಿದಾಗ ಮಾತ್ರ ಯಾವುದೇ ಸಮಸ್ಯೆ ಉದ್ಭವಿಸುವುದಿಲ್ಲ. ಮೇಲಾಧಿಕಾರಿಗಳ ಮಾರ್ಗದರ್ಶನ ಮತ್ತು ಸಿಬ್ಬಂದಿಗಳ ಸಹಕಾರದೊಂದಿಗೆ ಗ್ರಾಮ ಪಂಚಾಯತ್ ಚುನಾವಣೆ ಯಶಸ್ವಿಯಾಗಿ ನಿರ್ವಹಿಸುವಂತೆ ತಿಳಿಸಿದರು. ತರಬೇತಿದಾರ ಸದಾಶಿವಪ್ಪ ತರಬೇತಿ ನೀಡಿದರು.

ಅಪರ ಜಿಲ್ಲಾಧಿಕಾರಿ ಕೆ.ಎಚ್. ದುಗುರೇಶ್, ತಹಶೀಲ್ದಾರ್ ಡಾ. ಹಂಪಣ್ಣ ಸಜ್ಜನ್, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ಸೇರಿದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here