ಶಹಾಬಾದ: ಕೇಂದ್ರ ಸರಕಾರದ ರೈತ ವಿರೋಧಿ ಮತ್ತು ಕಾರ್ಪೋರೇಟರ ಪರ ನೀತಿಗಳನ್ನು ಧಿಕ್ಕರಿಸಿ ‘ದೆಹಲಿ ಚಲೋ’ ರೈತರ ಹೋರಾಟದಲ್ಲಿ ತಮ್ಮ ಜೀವವನ್ನು ಕಳೆದುಕೊಂಡ ರೈತರಿಗೆ ರೈತ-ಕೃಷಿ ಕಾರ್ಮಿಕ ಸಂಘಟನೆಯಿಂದ ರವಿವಾರ ಶಹಬಾದ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಶ್ರದ್ಧಾಂಜಲಿ ಸಭೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ರೈತ ಕೃಷಿ ಕಾಮರ್ಿಕ ಸಂಘಟನೆ ಮುಖಂಡ ರಾಘವೇಂದ್ರ.ಎಮ್.ಜಿ ಮಾತನಾಡಿ, ಕೇಂದ್ರ ಬಿ.ಜೆ.ಪಿ. ಸರಕಾರದ ರೈತವಿರೋಧಿ, ಕಾರ್ಮಿಕ ವಿರೋಧಿ ಎಪಿಎಂಸಿ ತಿದ್ದುಪಡಿ ಕಾಯ್ದೆ, ಬೆಲೆ ಭರವಸೆ (ಸಶಕ್ತೀಕರಣ ಮತ್ತು ಸುರಕ್ಷೆ) ಕೃಷಿ ಸೇವೆಗಳ ಕಾಯ್ದೆ, ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ ಹಾಗೂ ವಿದ್ಯುತ್ ತಿದ್ದುಪಡಿ ಮಸೂದೆ, ಭೂ ಸ್ವಾಧೀನ ತಿದ್ದುಪಡಿ ಕಾಯ್ದೆಗಳು ಕಾಪೋರೇಟ್ ಮನೆತನಗಳಿಗಾಗಿ ಜಾರಿಗೊಳಿಸುತ್ತಿದೆ.
ಕೊರೆಯುವ ಚಳಿಯಲ್ಲಿ ಕಳೆದ ಇಪ್ಪತ್ತು ದಿನಗಳಿಂದ ಬಿಡಾರ ಹೂಡಿರುವ ಉತ್ತರ ಭಾರತದ ಸುಮಾರು ಎರಡು ಕೋಟಿಗೂ ಅಧಿಕ ರೈತರು ಕೇಂದ್ರ ಸರಕಾರದ ಕರಾಳ ರೈತ ವಿರೋಧಿ ಮಸೂದೆಗಳ ವಿರುದ್ಧ ಧಿರೋದಾತ್ತವಾಗಿ ಹೋರಾಡುತ್ತಿದ್ದಾರೆ. ಈ ಹೋರಾಟವನ್ನು ಮುರಿಯಲು ಒಂದೆಡೆ ಕೇಂದ್ರ ಸರಕಾರವು ಹರಸಾಹಸವನ್ನು ಮಾಡುತ್ತಾ ಎಲ್ಲಾ ಪ್ರಜಾತಾಂತ್ರಿಕ ರೂಢಿಗಳನ್ನು ಮಣ್ಣು ಮಾಡಿ ರೈತರ ಮೇಲೆ ದೌರ್ಜನ್ಯವೆಸುತ್ತಿದ್ದರೆ, ಇನ್ನೊಂದೆಡೆ ಮೊನ್ನೆ ಸುಪ್ರಿಂ ಕೋರ್ಟ ರೈತರ ಹೋರಾಟದ ಕುರಿತು ತನ್ನ ಅನುಕಂಪವನ್ನು ವ್ಯಕ್ತಪಡಿಸಿ ರೈತರ ಹೋರಾಟದ ಹಕ್ಕನ್ನು ಎತ್ತಿಹಿಡಿದಿದೆ.
ಸರಕಾರವು ರೈತ ನಾಯಕರೊಂದಿಗೆ6 – 7 ಸುತ್ತಿನ ಮಾತುಕತೆಯ ನಂತರ ತನ್ನ ಬಂಡವಾಳಶಾಹಿಗಳ ಪರವಾದ ನಿಷ್ಠೆಯನ್ನು ಮುಂದುವರೆಸುತ್ತಾ ರೈತರೊಂದಿಗಿನ ಮೊಂಡುತನವನ್ನು ಪ್ರದರ್ಶಿಸಿದೆ. ಅಲ್ಲದೆ ದೇಶಪ್ರೇಮಿ ರೈತರಿಗೆ ಕಳಂಕ ಹಚ್ಚುವ ಅನೈತಿಕ ಕೆಲಸವನ್ನು ಮಾಡುತ್ತಿದೆ. ಆದರೂ ಧೀರ ರೈತ ಹೋರಾಟಗಾರರು ಸರಕಾರದ ಎಲ್ಲಾ ಪ್ರಯತ್ನಗಳನ್ನು ವಿಫಲಗೊಳಿಸಿ ತಮ್ಮ ಐಕ್ಯತೆಯನ್ನು ಹಾಗೂ ತಮ್ಮ ಪ್ರಬಲ ವಿರೋಧವನ್ನು ಪ್ರದರ್ಶಿಸುತ್ತಿದ್ದಾರೆ.ಈ ಸಂದರ್ಭದಲ್ಲಿ ಹೋರಾಟನಿರತ ರೈತರು ಹಲವಾರು ಆರೋಗ್ಯದ ಕಾರಣಗಳಿಂದ ಹೋರಾಟದ ಮೈದಾನದಲ್ಲಿ ಪ್ರಾಣಕಳೆದುಕೊಂಡಿದ್ದು, ಅವರಿಗೆ ನಮ್ಮ ಸಂಘಟನೆ ತೀವ್ರ ಸಂತಾಪವನ್ನು ಸೂಚಿಸುತ್ತದೆ. ರೈತರ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಬೇಕೆಂದರು.
ಜಗನ್ನಾಥ.ಎಸ್.ಹೆಚ್,ಗುಂಡಮ್ಮ ಮಡಿವಾಳ,ತಿಮ್ಮಯ್ಯ.ಬಿ.ಮಾನೆ, ನೀಲಕಂಠ.ಎಮ್.ಹುಲಿ,ತುಳಜರಾಮ.ಎನ್.ಕೆ, ರಮೇಶ ದೇವಕರ,ರಾಜೇಂದ್ರ ಅತನೂರ, ಪ್ರವೀಣ್, ಕಿರಣ್ ಸೇರಿ ಹಲವಾರು ರೈತರು ಭಾಗವಹಿಸಿದ್ದರು.
ಕಲಬುರಗಿ: ಜಯನಗರ ಬಡಾವಣೆಯ ಹಳೆ ಸಾರ್ವಜನಿಕ ಉದ್ಯಾನವನ ಅಭಿವೃದ್ಧಿಗಾಗಿ ಕಲಬುರಗಿ ಬೀದರ ಜಿಲ್ಲೆಯ ವಿಧಾನ ಪರಿಷತ್ ಸದಸ್ಯರಾದ ಡಾ.ಬಿ.ಜಿ.ಪಾಟೀಲ ಇವರ…
ಕಲಬುರಗಿ: ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಸಂವಿಧಾನ ದಿನ ಆಚರಣೆ ಕಾರ್ಯಕ್ರಮ ವನ್ನು ಸವಿಧಾನ ಪ್ರತಿಯನ್ನು ಓದುವ ಮೂಲಕ ಸವಿಧಾನ ಶಿಲ್ಪಿ…
ಕಲಬುರಗಿ : ಸೇಡಂ ಮತಕ್ಷೇತ್ರದ ವ್ಯಾಪ್ತಿಯ ಕರ್ಚಖೇಡ, ಕಾನಗಡ್ಡ,ಮದನ, ಮುಧೋಳ ಗ್ರಾ.ಪಂನ ಉಪ ಚುನಾಚುನಾವಣೆಯಲ್ಲಿ ಬಿ.ಜೆ.ಪಿ ಬೆಂಬಲಿತ ಅಭ್ಯರ್ಥಿಗಳು ಜಯ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ 75ನೇ ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್…
ಚಿಂಚೋಳಿ: ತಾಲೂಕಿನ ಸಾಲೆಬೀರನಳ್ಳಿ ಗ್ರಾಮದ ನೀವೃತ ಮುಖ್ಯಗುರುಗಳಾದ ಅಲ್ ಹಜ್ ಶಮಶೋದ್ದಿನ ಬೀರಗಿ ಪಟೇಲ್ (86) ಮಂಗಳವಾರ ನಿಧನರಾದರು. ಅವರಿಗೆ…
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…