ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ ಸಲ್ಲಿಸಿದ ಮನವಿಗೆ ಸ್ಪಂದಿಸಿದ ಶಾಸಕ ಮತ್ತಿಮಡು

0
304

ಶಹಾಬಾದ:ಆಸ್ತಿ ವರ್ಗಾವಣೆ ಶುಲ್ಕವನ್ನು ಕಡಿತಗೊಳಿಸಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಶನಿವಾರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ ಅವರು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರಿಗೆ ಮನವಿ ಪತ್ರ ಸಲ್ಲಿಸಿ ನಗರಸಭೆಯ ಸಾಮನ್ಯ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದರು.

ಅವರ ಮನವಿಗೆ ಸ್ಪಂದಿಸಿ ಶಾಸಕ ಬಸವರಾಜ ಮತ್ತಿಮಡು ಅವರು ಆಸ್ತಿ ವರ್ಗಾವಣೆ ತೆರಿಗೆಯನ್ನು ಸಾಮನ್ಯ ಸಭೆಯಲ್ಲಿ ಚರ್ಚಿಸಿ ಶೇ.8ರಿಂದ ಶೇ.5ಕ್ಕೆ ಇಳಿಸುವ ಮೂಲಕ ಸರ್ವಸದಸ್ಯರ ಸಮ್ಮುಖದಲ್ಲಿ ನಿರ್ಣಯ ತೆಗೆದುಕೊಂಡು, ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲು ತೀರ್ಮಾನ ತೆಗೆದುಕೊಂಡಿದ್ದಾರೆ.
ಶಹಾಬಾದ ಹೊಸ ತಾಲೂಕಾ ರಚನೆಯಾಗಿದ್ದು, ಆಯುಕ್ತರ ಉಪವಿಭಾಗವನ್ನು ಘೋಷಿಸಿ, ಕಛೇರಿಗಳ ನಿರ್ಮಾಣಕ್ಕೆ ಸ್ಥಳದ ಅಭಾವವಿದೆ.ಅದಕ್ಕಾಗಿ ತಹಸೀಲ್ದಾರರಿಗೆ ಹಾಗೂ ಪೌರಾಯುಕ್ತರಿಗೆ ಒತ್ತುವರಿಯಾದ ಜಾಗವನ್ನು ತೆರವುಗೊಳಿಸಲು ತಾಕೀತು ಮಾಡಿದರು. ನಗರಸಭೆಯ ಪ್ರಸ್ತುತ ಕಟ್ಟಡ ಹಳೆಯದಾಗಿದ್ದು, ಅದನ್ನು ಕೆಕೆಆರಡಿಬಿ ಅನುದಾನದಲ್ಲಿ ಹಳೆಯದನ್ನು ತೆಗೆದು ಹೊಸ ಕಟ್ಟಡ ನಿರ್ಮಾಣ ಮಾಡಬೇಕೆಂದು ಮನವಿಗೆ, ಸದ್ಯದಲ್ಲೇ ಕೆಕೆಆರಡಿಬಿ ಅನುದಾನದಲ್ಲಿ ಹೊಸಕಟ್ಟಡ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.

Contact Your\'s Advertisement; 9902492681

ಅಲ್ಲದೇ ಸಾಮನ್ಯ ಸಭೆಯಲ್ಲಿ ನಗರಸಭೆ ಸದಸ್ಯ ಸೂರ್ಯಕಾಂತ ಕೋಬಾಳ ಅವರು ಬಸವ ಭವನ ನಿರ್ಮಾಣಕ್ಕೆ ಜಾಗ ಮಂಜೂರಾತಿ ಮಾಡಬೇಕೆಂದು ಪ್ರಸ್ತಾಪಿಸಿದಕ್ಕೆ, ಶಾಸಕರು, ನಗರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಒಪ್ಪಿಗೆ ಸೂಚಿಸಿದ್ದು, ಆದಷ್ಟು ಬೇಗನೆ ಸ್ಥಳವನ್ನು ನಿಗದಿಪಡಿಸಿ ನಿರ್ಣಯ ತೆಗೆದುಕೊಳ್ಳಲು ಸೂಚಿಸಿದರು.

ಈ ಸಂದರ್ಭದಲ್ಲಿ ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ, ಉಪಾಧ್ಯಕ್ಷೆ ಸಲೀಮಾಬೇಗಂ, ಸ್ಥಾಯಿ ಸಮಿತಿ ಅಧ್ಯಕ್ಷ ತಿಪ್ಪಣ್ಣ ನಾಟೇಕಾರ, ತಹಸೀಲ್ದಾರ ಸುರೇಶ ವರ್ಮಾ, ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ, ನಗರಸಭೆಯ ಸದಸ್ಯ ಡಾ.ಅಹ್ಮದ್ ಪಟೇಲ್, ಸೂರ್ಯಕಾಂತ ಕೋಬಾಳ ಸೇರಿದಂತೆ ಸರ್ವ ಸದಸ್ಯರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here