ಯಾದಗಿರಿ: ರಾಜ್ಯದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯಕ್ಕಾಗಿ ಇದೇ ತಿಂಗಳು ಜೂನ್ 21 ರಂದು ಯಾದಗಿರಿಗೆ ಆಗಮಿಸಿ ಭೇಟಿ ನೀಡಲಿದ್ದಾರೆ.
ಅಂದು ಸಂಜೆ ಗುರುಮಠಕಲ್ ತಾಲ್ಲೂಕಿನ ಚಂಡರಿಕಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಜನತಾ ದರ್ಶನ ನಡೆಸಿ ಜನರ ಸಮಸ್ಯೆ ಕುಂದುಕೊರತೆಗಳನ್ನು ಆಲಿಸಲಿದ್ದಾರೆ.
ತದನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಬಳಿಕ ಶಾಲಾ ಶಿಕ್ಷಕರು ಮತ್ತು ಮಕ್ಕಳೊಂದಿಗೆ ಊಟ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.