ಕಲಬುರಗಿ: ನಗರದ ವಿವಿಧ ಪ್ರದೇಶಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಚೌಕ್ ಪೊಲೀಸ್ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ 10ಕ್ಕೂ ಹೆಚ್ಚು ಹಿರೋ ಹೊಂಡಾ ಬೈಕ್ ಗಳನ್ನು ವಶ ಪಡಿಸಿಕೊಂಡಿದ್ದಾರೆ.
ನಗರದ ಪಿಎನ್ಟಿ ಕ್ರಾಸ್ ನ ರಘು ಬಾಬು ಕಟ್ಟಿಮನಿ (20) ಹಾಗೂ ಡಾಬರಬಾದ ನಿವಾಸಿ ಉಮಾಕಾಂತ ಸುರೇಶ (20) ಬಂಧಿತ ಬೈಕ್ ಕಳ್ಳರೆಂದು ಗುರುತಿಸಲಾಗಿದೆ. ನಿನ್ನೆ ಜೈಡಿ.ಎ ರೇಔಟ್ ನಲ್ಲಿ ಅನುಮಾನಸ್ಪದವಾಗಿ ಓಡಾಡುತ್ತಿದ್ದಾಗ ಕಾರ್ಯಾಚರಣೆ ನಡೆಸಿ ಆರೋಪಿಗಳಿಂದ 10 ಹಿರೋ ಹೊಂಡಾ 400,000/-ರೂ ಮೌಲ್ಯದ ದ್ವೀಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಪೊಲೀಸ್ ಆಯುಕ್ತರಾದ ಐಪಿಎಸ್ ಎನ್.ಸತೀಶ ಕುಮಾರ್ ರವರ ನಿರ್ದೇಶನದ ಮೇರೆಗೆ ಉಪ ಪೊಲೀಸ್ ಆಯುಕ್ತರಾದ ಐ.ಪಿ.ಎಸ್ ಕಿಶೋರ ಬಾಬು (ಕಾ ಮತ್ತು ಸು) ಹಾಗೂ ಅಪರಾದ ಮತ್ತು ಸಂಚಾರ ವಿಭಾಗ ಉಪ ಪೊಲೀಸ್ ಆಯುಕ್ತರಾದ ಶ್ರೀಕಾಂತ ಕಟ್ಟಿಮನಿ ಮಾರ್ಗದರ್ಶನದಲ್ಲಿ, ಸಹಾಯಕ ಪೊಲೀಸ್ ಆಯುಕ್ತ (ಎ) ಉಪ-ವಿಭಾಗದ ಐಸಿಎಸ್ ಅ೦ಶುಕುಮಾರ ರವರುಗಳ ನೇತೃತ್ವದಲ್ಲಿ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರಾದ.ಸಿದ್ದರಾಮೇಶ್ಚರ ಗಡೇದ ರವರು ಠಾಣೆಯ ಸಿಬ್ಬಂದಗಳಾದ ನಜ್ಜುಮೊದ್ದೀನ್, ದೇವೆಂದ್ರಜಯಭೀಮ. ಮಲ್ಲಿಕಾರ್ಜುನ್. ಪಿರೋಜ್, ಮಬ್ಲಣ್ಣಗೌಡ, ‘ದೊಗೇಶ್. ಮೋಶಿನ್ ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…