ಬಿಸಿ ಬಿಸಿ ಸುದ್ದಿ

ಇಂದು ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆ: 5490 ಸಿಬ್ಬಂದಿ ನಿಯೋಜನೆ

6 ತಾಲ್ಲೂಕಿನ 126 ಗ್ರಾ.ಪಂ.ನಲ್ಲಿ ಮತದಾನ, 997 ಮತಗಟ್ಟೆ, 5490 ಸಿಬ್ಬಂದಿ ನಿಯೋಜನೆ.

ಕಲಬುರಗಿ: ಗ್ರಾಮ ಪಂಚಾಯಿತಿಯ ಮೊದಲನೇ ಹಂತದ ಚುನಾವಣೆಯ ಮತದಾನವು ಮಂಗಳವಾರ ಡಿಸೆಂಬರ್ 22 ರಂದು ಬೆಳಿಗ್ಗೆ 7 ರಿಂದ ಸಾಯಂಕಾಲ 5 ಗಂಟೆಯವರೆಗೆ ನಡೆಯಲಿದೆ. ಇದಕ್ಕಾಗಿ ಒಟ್ಟು 997 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆÉ. ಚುನಾವಣೆ ಶಾಂತಿಯುತವಾಗಿ ನಡೆಯಲು ಎಲ್ಲಾ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಚುನಾವಣಾಧಿಕಾರಿ ವಿ.ವಿ.ಜ್ಯೋತ್ಸ್ನಾ ತಿಳಿಸಿದ್ದಾರೆ.

ಮೊದಲನೇ ಹಂತದಲ್ಲಿ ಕಲಬುರಗಿ ತಾಲೂಕಿನ 28, ಆಳಂದ ತಾಲೂಕಿನ 36, ಅಫಜಲಪೂರ ತಾಲೂಕಿನ 28, ಕಮಲಾಪೂರ ತಾಲೂಕಿನ 16, ಕಾಳಗಿ ತಾಲೂಕಿನ 14 ಹಾಗೂ ಶಹಾಬಾದ ತಾಲೂಕಿನ 4 ಗ್ರಾಮ ಪಂಚಾಯತಿಗಳು ಸೇರಿದಂತೆ ಒಟ್ಟು 126 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ.

ಗ್ರಾಮ ಪಂಚಾಯಿತಿ ಚುನಾವಣೆಗಾಗಿ 140 ಚುನಾವಣಾಧಿಕಾರಿಗಳು, 140 ಸಹಾಯಕ ಚುನಾವಣಾಧಿಕಾರಿಗಳು ಸೇರಿದಂತ ಒಟ್ಟು 5490 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ಈ ಚುನಾವಣೆಗಾಗಿ 805 ಮೂಲ ಮತಗಟ್ಟೆ, 192 ಆಕ್ಸಲರಿ ಮತಗಟ್ಟೆ ಸೇರಿದಂತೆ ಒಟ್ಟು 997 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ದಿನಾಂಕ: 31-08-2020ರ ಅರ್ಹ ಮತದಾರರ ಪಟ್ಟಿಯಂತೆ ಈ ಚುನಾವಣೆಯಲ್ಲಿ 3,69,935 ಪುರುಷರು, 3,47,635 ಮಹಿಳೆಯರು ಹಾಗೂ 64 ಇತರೆ ಮತದಾರರು ಒಳಗೊಂಡಂತೆ ಒಟ್ಟು 7,17,634 ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ.

ಕಲಬುರಗಿ, ಆಳಂದ, ಅಫಜಲಪುರ, ಕಮಲಾಪುರ, ಕಾಳಗಿ ಹಾಗೂ ಶಹಾಬಾದ ತಾಲೂಕುಗಳ ಒಟ್ಟು 126 ಗ್ರಾಮ ಪಂಚಾಯತಿಗಳ ಒಟ್ಟು 2220 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಬೇಕಾಗಿತ್ತು. ಆದರೆ 1480 ಅಭ್ಯರ್ಥಿಗಳು ಉಮೇದುವಾರಿಕೆ ಹಿಂಪಡೆದಿದ್ದು ಹಾಗೂ 141 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದರಿಂದ ಒಟ್ಟು 2079 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಒಟ್ಟು 5876 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ.

ಕೋವಿಡ್-19 ಸುರಕ್ಷತಾ ಕ್ರಮ: ಕೋವಿಡ್-19 ಹಿನ್ನೆಲೆಯಲ್ಲಿ ಮತದಾನಕ್ಕಾಗಿ ಮತ ಕೇಂದ್ರಕ್ಕೆ ಆಗಮಿಸುವ ಎಲ್ಲಾ ಮತದಾರರು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಕಡ್ಡಾಯವಾಗಿ ಸ್ಯಾನಿಟೈಜರ್ ಬಳಸಬೇಕು ಮತ್ತು ಮಾಸ್ಕ್ ಧರಿಸಬೇಕು. ಮತಗಟ್ಟೆಯಲ್ಲಿ ಮತದಾರರು ಸಾಮಾಜಿಕ ಅಂತರ ಕಾಪಾಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

1 hour ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

2 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

4 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

4 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

4 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

4 hours ago