ಬಿಸಿ ಬಿಸಿ ಸುದ್ದಿ

ಗ್ರಾಮ ಪಂಚಾಯತಿ ಚುನಾವಣೆ ಶಾಂತಿಯುತ ಯಶಸ್ವಿ: ಶೇ ೭೫ಕ್ಕೂ ಅಧಿಕ ಮತದಾನ

ಸುರಪುರ: ಮೂದಲನೆ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಮತದಾರರು ಬಿರುಸಿನ ಮತದಾನ ಮಾಡವ ಮೂಲಕ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ ಹಾಗೂ ತಾಲೂಕಿನಲ್ಲಿ ಯಾವೂಂದು ಮತಗಟ್ಟೆಯಲ್ಲಿ ಯಾವುದೆ ಗಲಭೆ ಇಲ್ಲದೆ ಶಾಂತಿಯುತವಾಗಿ ಮತದಾನ ಜರುಗಿದೆ. ತಾಲೂಕಿನಲ್ಲಿ ಒಟ್ಟು ಶೇ ೭೫ಕ್ಕೂ ಅಧಿಕ ಪ್ರಮಾಣದ ಮತದಾನವಾಯಿತು.

ತಾಲೂಕಿನ ೨೦ ಗ್ರಾಮ ಪಂಚಾಯತ್‌ಗಳ ೩೨೫ ಸ್ಥಾನಗಳಿಗೆ ೭೬೮ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಬೆಳಗ್ಗೆ ೭ ಗಂಟೆಯಿಂದಲೇ ಮತದಾನವು ಪ್ರಾರಂಬವಾಯಿತು. ಸರಕಾರ ಕೊರೋನಾ ನಿಯಮಾವಳಿ ಅನುಸಾರ ಮತದಾರರು ಸರದಿ ಸಾಲಿನಿಂದಲೇ ಸ್ಯಾನಿಟೈಸ್, ಜ್ವರ ತಪಾಸಣೆ ವ್ಯವಸ್ಥೆ, ದೇಹದ ಉಷ್ಣಾಂಶ ಪರೀಕ್ಷಿಸಿಕೊಂಡು ಮತದಾನಕ್ಕೆ ಅನವು ಮಾಡಿಕೊಡಲಾಗಿತ್ತು.

ಮತದಾನದಲ್ಲಿ ಇಳಿವಯಸ್ಸಿನವರು, ಮಧ್ಯವಯಸ್ಕರು, ೧೮ ವರ್ಷ ಮೇಲ್ಪಟ್ಟ ಯುವ ಸಮುದಾಯ ಪಾಲ್ಗೊಂಡಿತ್ತು. ಮೊದಲಬಾರಿಗೆ ಮತದಾನ ಮಾಡಲು ಬಂದವರು ಸಂಕೋಚದಿಂದಲೇ ಸರದಿ ಸಾಲಿನಲ್ಲಿ ನಿಂತಿದ್ದರು. ಹಿರಿಯರು ಹೇಳುತ್ತಿದ್ದುದ್ದನ್ನು ತದೇಕ ಚಿತ್ತದಿಂದ ಕೇಳುತ್ತಿದ್ದರು. ಗ್ರಾಮದ ಮುಖಂಡರು, ಯುವ ನಾಯಕರು ಮತದಾರರನ್ನು ಕರೆದುಕೊಂಡು ಮತಗಟ್ಟೆ ಕೇಂದ್ರಕ್ಕೆ ಬಿಡುವುದು ಎಲ್ಲೆಡೆ ಸಾಮಾನ್ಯವಾಗಿತ್ತು.

ಉದ್ಯೋಗ ಅರಸಿ ಬೆಂಗಳೂರು, ಮುಂಬೈ ಹೋಗಿದ್ದ ಜನತೆ ಚುನಾವಣೆ ನಿಮಿತ್ಯ ಗ್ರಾಮಗಳಿಗೆ ಬಂದು ತಮ್ಮ ಹಕ್ಕನ್ನು ಚಲಾಯಿಸಿದರು. ಕೆಲವು ಗ್ರಾಮಗಳಿಗೆ ಕಾರು, ಕ್ರೂಸರ್, ಮಿನಿ ಬಸ್‌ಗಳ ವ್ಯವಸ್ಥೆ ಮಾಡಲಾಗಿತ್ತು. ದೂರದೂರುಗಳಿಂದ ಬಂದು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ಕವಡಿಮಟ್ಟಿ ಬಾದ್ಯಾಪುರ ಹೆಮನೂರ ತಳ್ಳಳ್ಳಿ ಸೇರಿ ಕೆಲವು ಗ್ರಾಮಗಳಲ್ಲಿ ಮಾತಿನ ಚಕಮುಕಿ ಬಿರುಸುಗೊಂಡು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಸಣ್ಣಪುಟ್ಟ ಗಲಾಟೆಗಳನ್ನು ಸ್ಥಳೀಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬೇಟಿನಿಡಿ ವಾತವರಣವನ್ನು ತಿಳಿಗೊಳಿಸಿ ಶಾಂತಿಯುತ ಮತದಾನಕ್ಕೆ ಅವಕಾಶಕಲ್ಪಿಸಿದನ್ನು ಬಿಟ್ಟೆರೆ ತಾಲೂಕಿನಾದ್ಯಂತ ಬಹುತೇಕ ಕೇಂದ್ರದಲ್ಲಿ ಶಾಂತಿಯುತವಾಗಿ ಮತದಾನವು ಜರುಗಿತು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

10 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

10 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

12 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

12 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

12 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

12 hours ago