ಬಿಸಿ ಬಿಸಿ ಸುದ್ದಿ

ಸಗರದಲ್ಲಿ ಶಾಂತಿಯುತವಾಗಿ ನಡೆದ ಮತದಾನ

ಶಹಾಪುರ : ರಾಜ್ಯದಲ್ಲಿ ನಡೆಯುತ್ತಿರುವ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ತಾಲೂಕಿನ ಸಗರ ಗ್ರಾಮದಲ್ಲಿ ಶಾಂತಿಯುತವಾಗಿ ಮತದಾನ ನಡೆಯಿತು.ಬೆಳಗಿನ ವಿಪರೀತ ಚಳಿ ಲೆಕ್ಕಿಸದೆ ಗ್ರಾಮೀಣ ಭಾಗಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯಿತು ಬೆಳಿಗ್ಗೆ ಸ್ವಲ್ಪ ಮಟ್ಟಿಗೆ ನಿರುತ್ಸಾಹ ಕಂಡು ಬಂದರೂ ಮಧ್ಯಾಹ್ನದ ನಂತರ ತುರುಸಿನಿಂದ ಮತದಾನ ಜರುಗಿತು.ಗ್ರಾಮದ ವಿವಿಧ ವಾರ್ಡ್ಗಳಿಂದ ಜನರನ್ನು ಆಟೋ,ಬೈಕ್,ಇನ್ನಿತರ ವಾಹನಗಳಲ್ಲಿ ಬಂದು ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ಮಧ್ಯಾಹ್ನದ ವರೆಗೆ ಕೆಲವು ಕಡೆ ಕಡಿಮೆ ಪ್ರಮಾಣದ ಮತದಾನ ಆದರೆ ಇನ್ನೂ ಕೆಲವು ಮತಗಟ್ಟೆಗಳಲ್ಲಿ ಹೆಚ್ಚಿನ ಪ್ರಮಾಣದ ಮತದಾನ ನಡೆದಿರುವುದು ವರದಿಯಾಗಿವೆ, ತಂಡೋಪತಂಡವಾಗಿ ಮತದಾನ ಮಾಡಲು ಬಂದಿರುವ ದೃಶ್ಯ ಕಂಡುಬಂತು.ಕೆಲವರ ಹೆಸರುಗಳು ಮತದಾರರ ಪಟ್ಟಿಯಿಂದ ನಾಪತ್ತೆಯಾಗಿರುವುದರಿಂದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಹಾಗೂ ಯಂತ್ರಗಳ ಸಣ್ಣಪುಟ್ಟ ದೋಷಗಳು ಸೇರಿದಂತೆ ಕೆಲವೊಂದು ಅಹಿತಕರ ಘಟನೆಯನ್ನು ಹೊರತುಪಡಿಸಿದರೆ ಮತ್ಯಾವ ತೊಂದರೆಗಳು ಕಂಡು ಬಂದಿರುವುದಿಲ್ಲ.

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಹಿಂಬಾಲಕರು ಹಾಗೂ ಅವರ ಸಂಬಂಧಿಕರು  ಗ್ರಾಮದ ಶತಾಯುಷಿಗಳನ್ನು ಹೊತ್ತು ತಂದು,ಆಟೋ ಬೈಕ್ ಗಳಲ್ಲಿ ಕರೆತಂದು ಮತ ಚಲಾಯಿಸುವಂತೆ ಸಹಕಾರ ನೀಡಿದರು. ಒಟ್ಟು 13 ವಾರ್ಡ್ ಗಳ ಪೈಕಿ ಪ್ರತಿಶತ 78% ಮತದಾನ ಜರುಗಿದೆ. ಎಪ್ಪತ್ತೆಂಟರಷ್ಟು ಚುನಾವಣಾ  ಕಣಕ್ಕಿಳಿದಿರುವ ಸದಸ್ಯರ ಭವಿಷ್ಯ ಇನ್ನು ಮೂರು ನಾಲ್ಕು ದಿನಗಳಲ್ಲಿ ತಿಳಿಯಲಿದೆ ಆದ್ದರಿಂದ ಎಲ್ಲದಕ್ಕೂ ಸಮಯ ಕಾದುನೋಡಬೇಕಿದೆ.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

6 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

17 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

17 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

19 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

19 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

19 hours ago