ಶಹಾಬಾದ:ತಾಲೂಕಿನಲ್ಲಿ ಸೋಮವಾರ ನಡೆದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಚುನಾವಣೆಯಲ್ಲಿ ತಾಲೂಕಾ ಘಟಕದ ಅಧ್ಯಕ್ಷರಾಗಿ ಶಿವಪುತ್ರ ಕರಣಿಕ್,ಉಪಾಧ್ಯಕ್ಷರಾಗಿ ಸುಲೋಚನಾ ಜಾಧವ, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ ಸಲಗರ, ಖಜಾಂಚಿಯಾಗಿ ಸಾವಿತ್ರಿ ಪಾಟೀಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ರಮೇಶ ಥಳಂಗೆ, ಸಹಾಯಕ ಚುನಾವಣಾಧಿಕಾರಿ ಹಾಜಪ್ಪ ತಿಳಿಸಿದ್ದಾರೆ.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾ ಪದಾಧಿಕಾರಿಗಳ ನಾಮಪಪತ್ರ ಸಲ್ಲಿಸುವ ಕೊನೆಯ ದಿನವಾದ ರವಿವಾರದಂದು ನಾಲ್ಕು ಜನರ ಸದಸ್ಯರು ಒಂದೊಂದು ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ 4 ಜನರ ಸದಸ್ಯರ ಬಲವನ್ನು ಹೊಂದಿದ್ದು, ಅದರಲ್ಲಿ ಅಧ್ಯಕ್ಷ ಸ್ಥಾನಕ್ಕೆ ಶಿವಪುತ್ರ ಕರಣಿಕ್, ಉಪಾಧ್ಯಕ್ಷ ಸ್ಥಾನಕ್ಕೆ ಸುಲೋಚನಾ ಜಾಧವ, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸಂತೋಷ ಸಲಗರ್, ಖಜಾಂಚಿ ಸ್ಥಾನಕ್ಕೆ ಸಾವಿತ್ರಿ ಪಾಟೀಲ ನಾಮಪತ್ರ ಸಲ್ಲಿಸಿದರು. ನಾಲ್ಕು ಜನ ಕಾರ್ಯಕಾರಿ ಸಮಿತಿ ಸದಸ್ಯರು ಒಂದೊಂದು ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದಲ್ಲದೇ, ಅವರ ವಿರುದ್ಧ ಯಾರು ನಾಮಪತ್ರ ಸಲ್ಲಿಸದ ಕಾರಣ ಇವರೆಲ್ಲರನ್ನೂ ಅವಿರೋಧವಾಗಿ ಆಯ್ಕೆ ಮಾಡಲಾಯಿತು ಎಂದು ಚುನಾವಣಾಧಿಕಾರಿಗಳು ತಿಳಿಸಿದರು.
ವಿಜಯೋತ್ಸವ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾ ಅಧ್ಯಕ್ಷರಾಗಿ ಶಿವಪುತ್ರ ಕರಣಿಕ್,ಉಪಾಧ್ಯಕ್ಷರಾಗಿ ಸುಲೋಚನಾ ಜಾಧವ, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ ಸಲಗರ, ಖಜಾಂಚಿಯಾಗಿ ಸಾವಿತ್ರಿ ಪಾಟೀಲ ಅವಿರೋಧವಾಗಿ ಆಯ್ಕೆಯಾಗಿದಕ್ಕೆ ಅವರ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.