ಕಲಬುರಗಿ: ಜಿಲ್ಲೆಯ ಕಮಲಾಪೂರ ತಾಲೂಕಿನ 2-ಕಿಣ್ಣಿಸಡಕ್ ಗ್ರಾ.ಪಂ.ಯ 1-ಕಿಣ್ಣಿಸಡಕ್ ಕ್ಷೇತ್ರದ ಮತಗಟ್ಟೆ ಸಂ-7ರಲ್ಲಿ ಮಂಗಳವಾರ ನಡೆದ ಚುನಾವಣೆ ಸಂದರ್ಭದಲ್ಲಿ ಮತಪತ್ರದಲ್ಲಿ ಅಭ್ಯರ್ಥಿಯೋರ್ವರ ಚಿನ್ಹೆ ತಪ್ಪಾಗಿ ಮುದ್ರಿತವಾಗಿ ಮತದಾನ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಡಿ.24 ಕ್ಕೆ ಇಲ್ಲಿ ಮರು ಮತದಾನ ನಡೆಸುವಂತೆ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ಅಭ್ಯರ್ಥಿ ಜೈರಾಜ ಎ ಹಲಗಿ ಅವರ ನಾಮ ಪತ್ರ ಸಲ್ಲಿಸಿದ ನಂತರ ಆಯೋಗ ತುತ್ತೂರಿ ಗುರುತಿನ ಚಿಹ್ನೆ ನೀಡಿತ್ತು. ನಿನ್ನೆ ನಡೆದ ಮೊದಲ ಹಂತದ ಗ್ರಾಮ ಪಂಚಾಯತಿ ಚುನಾವಣೆ ಮತದಾನದ ವೇಳೆಯಲ್ಲಿ ಮತದಾನ ಪತ್ರದಲ್ಲಿ ತುತ್ತೂರಿ ಬದಲು, ಕಹಳೆ ಉದುವ ಮನುಷ್ಯನ ಚಿಹ್ನೆ ಮುದ್ರಿಸಲಾಗಿತ್ತು.
ಇದರಿಂದ ಆಘತಗೊಂಡ ಅಭ್ಯರ್ಥಿ ಮತದಾನಕ್ಕೆ ಅಕ್ಷೇಪ ವ್ಯಕ್ತಪಡಿಸಿ, ಪ್ರಚಾರದಲ್ಲಿ ತುತ್ತೂರಿ ಚಿಹ್ನೆಯ ಹೆಸರಲ್ಲಿ ಪ್ರಚಾರ ಕೈಗೊಂಡಿರುವ ಬಗ್ಗೆ ತಿಳಿಸಿದ ಜೈರಜ ಆಗಿರುವ ಕೋಪಕ್ಕೆ ಅಸಮಧಾನ ವ್ಯಕ್ತಪಡಿಸಿದರು ಎನ್ನಲಾಗಿದೆ.
ಕೇಲಹೊತ್ತು ಮತಕೇಂದ್ರದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ನಂತರ ಚುನಾವಣೆ ಅಧಿಕಾರಿಗಳು ಹಾಗೂ ತಹಶೀಲ್ದಾರ್ ಅವರಿಂದ ಪರಿಶೀಲನೆ ನಂತರ ಮರು ಮತದಾನಕ್ಕೆ ಚುನಾವಣೆ ಆಯೋಗ ಅವಕಾಶ ನೀಡಿದೆ.
ಮರು ಮತದಾನ : ಕಲಬುರಗಿ ಜಿಲ್ಲೆಯ ಕಮಲಾಪೂರ ತಾಲೂಕಿನ 2-ಕಿಣ್ಣಿ ಸಡಕ ಗ್ರಾಮ ಪಂಚಾಯತಿಯ 1-ಕಿಣ್ಣಿ ಸಡಕ ಕ್ಷೇತ್ರಕ್ಕೆ ಅನುಸೂಚಿತ ಜಾತಿ ಮೀಸಲಾತಿಗೆ ಸ್ಪರ್ಧಿಸಿರುವ ಅಭ್ಯರ್ಥಿಯ ಚಿನ್ಹೆ ಬದಲಾವಣೆ ಆಗಿರುವ ಹಿನ್ನೆಲೆಯಲ್ಲಿ 24.12.2020 ರಂದು ಈ ಕ್ಷೇತ್ರಕ್ಕೆ ಮರು ಮತದಾನ ಮಾಡಲು ಪರವಾನಿಗಿ ನೀಡಲು ಕೋರಿ ರಾಜ್ಯ ಚುನಾವಣಾ ಆಯೋಗಕ್ಕೆ ಕೋರಿಕೆ ಸಲ್ಲಿಸಲಾಗಿತ್ತು.
ಇದೇ ಡಿಸೆಂಬರ್ 24 ರಂದು ಮರು ಮತದಾನ ಮಾಡುವಂತೆ ಚುನಾವಣಾ ಆದೇಶ ನೀಡಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮೊದಲನೆ ಹಂತದ ಚುನಾವಣೆಯಲ್ಲಿ ಒಟ್ಟು 141 ಸದಸ್ಯರು ಅವಿರೊಧವಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ 36 ಮತಗಟ್ಟೆಗಳಲ್ಲಿ ಚುನಾವಣೆ ಜರುಗಿರುವುದಿಲ್ಲ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…