ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಡಾ.ಎಂ.ಬಿ.ಕಟ್ಟಿಯವರು ಕನ್ನಡ ಪುಸ್ತಕ ಪ್ರಾಧಿಕಾರದ 2019 ನೇ ಸಾಲಿನ ಪುಸ್ತಕ ಆಯ್ಕೆ ಪರಿಶೀಲನಾ ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಸಗಟು ಖರೀದಿಗೆ ಬಂದ ಪುಸ್ತಗಳನ್ನು ಖರೀದಿಸಲು ಸಮಿತಿಯೊಂದನ್ನು ರಚಿಸಲಾಗಿದ್ದು, ಆ ಪರಿಶೀಲನಾ ಸಮಿತಿಯಲ್ಲಿ ತಾವು ಕೂಡ ಒಬ್ಬ ಸದಸ್ಯರಾಗಿರುತ್ತೀರಿ ಎಂದು ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.