ತಾಲ್ಲೂಕು ಮಟ್ಟದಲ್ಲಿ ಶಾಸಕರ ನೇತೃತ್ವದಲ್ಲಿ ಬಿರುಸಿನ ಪ್ರಚಾರ

0
79

ಕಲಬುರಗಿ: ಜಿಲ್ಲೆಯಲ್ಲಿ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ಮತದಾನ ಸುಗಮವಾಗಿ ನಡೆದಿದ್ದು, ಜಿಲ್ಲಾಡಳಿತ ಡಿ.27 ರಂದು ನಡೆಯಲಿರುವ ಎರಡನೇ ಹಂತದ ಚುನಾವಣೆಯ ಮತದಾನಕ್ಕಾಗಿ ಸಕಲ ಸಿದ್ಧತೆಯಲ್ಲಿ ತೊಡಗಿದೆ.

ಈ ಹಿನ್ನೆಲೆಯಲ್ಲಿ ಪಕ್ಷದ ಬೆಂಬಲಿತರನ್ನು ಗೆಲ್ಲಿಸಿ ಗ್ರಾಮ ಪಂಚಾಯಿತಿ ತನ್ನೊಶಕ್ಕೆ ಪಡೆಯುವ ಕಸರತುಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ತೊಡಗಿವೆ.

Contact Your\'s Advertisement; 9902492681

ಈ ಹಿನ್ನೆಲೆಯಲ್ಲಿ ನಿನ್ನೆ ಇಲ್ಲಿನ ಗುರುಮಿಠಕಲ್ ಹಾಗೂ ಸೈದಾಪೂರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಚಿತ್ತಾಪುರ ಮತಕ್ಷೇತ್ರದ ಶಾಸಕ, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ಜರುಗಿತು.

ಸಭೆಯಲ್ಲಿ ಮಾತನಾಡಿ ಶಾಸಕ ಖರ್ಗೆ, ಪ್ರಜಾಪ್ರಭುತ್ವದ ಬುನಾದಿಯಾಗಿರುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ, ಉತ್ತಮ ಅಭ್ಯರ್ಥಿಗಳಿಗೆ ಮತ ನೀಡಬೇಕೆಂದು ಮತದಾರರಲ್ಲಿ ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಪಕ್ಷದ ತಾಲ್ಲೂಕು ಮುಖಂಡರು, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರು ಸೇರಿದಂತೆ ಕಾರ್ಯಕರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here