ಕಲಬುರಗಿ: ವಿದ್ಯಾಗಮ ಹಾಗೂ ಆನಲೈನ್ ಶಿಕ್ಷಣದಿಂದ ಶೈಕ್ಷಣಿಕ ಪ್ರಗತಿ ಏನು ವರ್ಕೌಟ ಆಗದು. ಸರಕಾರ ಜನವರಿಯಿಂದ ವಿದ್ಯಾಗಮ ಬದಲಿಗೆ ಶಾಲಾ-ಕಾಲೇಜು ಆರಂಭಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಿಗರ ಬಣ) ದ ಜಿಲ್ಲಾಧ್ಯಕ್ಷರಾದ ಆನಂದ ತೆಗನೂರ ಸರಕಾರಕ್ಕೆ ಅವರು ಮನವಿ ಮಾಡಿದರು.
ಈ ಕುರಿತು ಪ್ರಕಟಣೆ ನೀಡಿದ ಅವರು, ವಿದ್ಯಾಗಮ ಆರಂಭಿಸುವ ಬದಲಿಗೆ ಶಾಲಾ-ಕಾಲೇಜು ಆರಂಭಿಸುವುದೇ ಸೂಕ್ತವಾಗಿದೆ. ಯಾಕೆಂದರೆ ವಿದ್ಯಾಗಮ ಹಾಗೂ ಆನಲೈನ್ ಶಿಕ್ಷಣ ಕೆಲವೇ ವಿದ್ಯಾರ್ಥಿಗಳಿಗೆ ಸೀಮಿತವಾಗಿದ್ದು, ಬಹುತೇಕ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುವ ಸಾಧ್ಯತೆಗಳಿವೆ. ಕೋವಿಡ್ ನಂತರ ಶೈಕ್ಷಣಿಕ ಸ್ಥಿತಿ ಹದಗೆಟ್ಟಿದ್ದು, ಸರಕಾರ ಶಾಲೆ ಆರಂಭಿಸುವ ವಿಚಾರವಾಗಿ ಹಲವು ಹಂತದಲ್ಲಿ ಚರ್ಚಿಸಿದಾಗ್ಯೂ ಒಮ್ಮತದ ತೀರ್ಮಾನ ಸಾಧ್ಯವಾಗಿಲ್ಲ. ಜನರ ಅಭಿಪ್ರಾಯವು ಜನೆವರಿ ಮೊದಲ ವಾರದಲ್ಲಿ ಶೈಕ್ಷಣಿಕ ಕಾರ್ಯ ಚಟುವಟಿಕೆಗಳು ಆರಂಭಗೊಳ್ಳಬೇಕಾಗಿದೆ ಎಂದು ಹೇಳಿದರು.
ಸರಕಾರ ಈ ಕೂಡಲೇ ವಿದ್ಯಾಗಮ ಬದಲಿಗೆ ಶಾಲಾ-ಕಾಲೇಜು ಆರಂಭಿಸಬೇಕು. ಆರಂಭಿಸಿದ ಬಳಿಕ ಏನಾದರೂ ಪರಿಣಾಮ ಕಂಡುಬಂದರೆ ಅದಕ್ಕೆ ಪರಿಹಾರ ಕಂಡುಕೊಂಡರಾಯ್ತು. ಕಾಲೇಜು ಶಿಕ್ಷಣ ಆರಂಭಿಸಿದ ಸಂದರ್ಭಗಳಲ್ಲಿ ಸಾಕಷ್ಟು ವಿರೋಧಗಳು ಕೇಳಿ ಬಂದವು. ಆಗ ಸರ್ಕಾರದ ದಿಟ್ಟ ಕ್ರಮದಿಂದ ಕಾಲೇಜು ಶಿಕ್ಷಣ ಆರಂಭಿಸಲಾಗಿದೆ. ಇದಾಗಿ ತಿಂಗಳಾಯಿತು, ವ್ಯತಿರಿಕ್ತ ಪರಿಣಾಮವಾಯಿತೇ ಎಂದು ಅವರು ಪ್ರಶ್ನಿಸಿದರು ?
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…