ಕಲಬುರಗಿ: ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾಯಿಸಿ ಸ್ಥಳೀಯ ಶಾಸಕರಿಗೆ ಮಂತ್ರಿ ಮಾಡಿ ಉಸ್ತುವಾರಿ ಹೊಣೆ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿ ಡಿಸೆಂಬರ್ 26 ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಕನ್ನಡ ಭೂಮಿ ಜಾಗೃತಿ ಸಮಿತಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಜಿಲ್ಲಾ ಅಧ್ಯಕ್ಷ ಪ್ರಶಾಂತ ತಂಬೂರಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸಾಕಷ್ಟು ಸಮಸ್ಯೆ ಇದ್ದರು ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಈ ಕಡೆ ಮುಖ ಮಾಡಿ ತಿಂಗಳುಗಳೇ ಕಳೆದಿವೆ.ಮಳೆ ಬಂದು ಪ್ರವಾಹ ಸೃಷ್ಟಿಯಾಗಿ ಜನರು ಮನೆ ಮಠ ಕಳೆದುಕೊಂಡಿದ್ದಾರೆ.ಇಲ್ಲಿವರೆಗೂ ಪರಿಹಾರ ಸಿಕ್ಕಿಲ್ಲ.ಭಾರಿ ಮಳೆಯಿಂದ ಬೆಳೆ ಹಾನಿಯಾಗಿ ರೈತರು ಕಂಗಾಲಾಗಿದ್ದಾರೆ.ಆದರೆ ಯಾರೂ ಕೇಳದೆ ಜಿಲ್ಲೆಯಲ್ಲಿ ಅಕ್ಷರಶಃ ಅನಾಥಪ್ರಜ್ಞೆ ಕಾಡುತ್ತಿದೆ.
ಕಾರಣ ಉಸ್ತುವಾರಿ ಸಚಿವರು ಬಾರದೆ ಇರುವುದರಿಂದ.ವಿಭಾಗೀಯ ಕೇಂದ್ರವಾದ ಕಲಬುರಗಿ ಸರ್ಕಾರದಿಂದ ಮತ್ತೋಮ್ಮೆ ನಿರ್ಲಕ್ಷ್ಯ ಕ್ಕೆ ಒಳಗಾಗಿದೆ.ಜಿಲ್ಲೆ ಬಗ್ಗೆ ಕಾಳಜಿ ಇದ್ದರೆ ಕೂಡಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯ್ಯೂರಪ್ಪ ಅವರು ಜಿಲ್ಲಾ ಉಸ್ತುವಾರಿ ಮಂತ್ರಿ ಬದಲಾವಣೆ ಮಾಡಿ ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ನೀಡಿ ಉಸ್ತುವಾರಿ ಮಾಡಬೇಕು ಎಂದು ಆಗ್ರಹಿಸಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.