ಯಾದಗಿರಿ: ಅಂಬೇಡ್ಕರ್ ಭಾವಚಿತ್ರವುಳ್ಳ ನಾಮಫಲಕವನ್ನು ಏಕಾಏಕಿ ತೆಗೆದು ಹಾಕಿರುವ ಘಟನೆ ಯಾದಗಿರಿ ಜಿಲ್ಲೆಯ ನೂತನ ತಾಲೂಕು ಎಚ್. ವಡಗೇರಿಯಲ್ಲಿ ಜರುಗಿದೆ.
ವಡಗೇರಿ ಠಾಣೆಯ ಪೊಲೀಸ್ ಸಿಬ್ಬಂದಿಗಳೇ ಈ ನಾಮಫಲಕ ತೆರವುಗೊಳಿಸಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿಯ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.
ಇದು ಡಾ.ಬಾಬಾ ಸಾಹೇಬ್ ಅಂಬೇಡ್ಕರರಿಗೆ ಮಾಡಿದ ಅವಮಾನ, ನಾಮಫಲಕ ತೆರವುಗೊಳಿಸಿರುವವರನ್ನು ಕೂಡಲೇ ಅಮಾನತು ಮಾಡಬೇಕೆಂದು ಪಟ್ಟು ಹಿಡಿದಿದ್ದಾರೆ.
ಬೆಳಿಗ್ಗೆಯಿಂದ ಇಲ್ಲಿವರೆಗೂ ರಸ್ತೆ ತಡೆ ಮಾಡಿ ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ ಸಾಯಂಕಾಲ ೬ ಗಂಟೆಯಾದರೂ ಪ್ರತಿಭಟನೆಯಿಂದ ಹಿಂದೆ ಸರಿಯಲಿಲ್ಲ.
ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಇಲ್ಲದಿದ್ದರೆ ನಾಳೆ ರಾಜ್ಯ ರಸ್ತೆ ಬಂದ್ ಮಾಡಿ ಯಾದಗಿರಿ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದೆಂದು ದಲಿತ ಸಂಘರ್ಷ ಸಮಿತಿಯ ಮುಖಂಡರಾದ ಶರಣರೆಡ್ಡಿ ಹತ್ತಿಗೂಡುರು ಹೇಳಿದರು.
ಈ ಸಂದರ್ಭದಲ್ಲಿ ಪ್ರಗತಿಪರ ಚಿಂತಕರು, ಬುದ್ಧ, ಬಸವ ಅಂಬೇಡ್ಕರ್ ಅನುಯಾಯಿಗಳು ದಲಿತ ಸಂಘರ್ಷ ಸಮಿತಿಯ ಸರ್ವ ಸದಸ್ಯರು ಗ್ರಾಮದ ಹಿರಿಯ ಕಿರಿಯ ಮುಖಂಡರು ಹಾಜರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…