ಬಿಸಿ ಬಿಸಿ ಸುದ್ದಿ

ಬೀದಿ ಬದಿ ಜೀವನ ನಡೆಸುತ್ತಿದ್ದ ಕುಟುಂಬಕ್ಕೆ ಎಬಿವಿಪಿ ನೆರವು

ಸುರಪುರ: ನಗರದ ರಂಗಂಪೇಟೆಯ ಹಸನಾಪುರದ ಶ್ರೀ ಮರೆಮ್ಮ ದೇವಾಲಯದ ಪಕ್ಕದಲ್ಲಿ ಕಳೆದ ಅನೇಕ ತಿಂಗಳುಗಳಿಂದ ಹೊನ್ನಪ್ಪ ತಳವಾರ ಮತ್ತವರ ಪತ್ನಿ ಹಾಗು ಮೂವರು ಮಕ್ಕಳೊಂದಿಗೆ ರಸ್ತೆ ಪಕ್ಕದಲ್ಲಿ ಚಿಕ್ಕದಾದ ಸೆಡ್ಡೊಂದನ್ನು ನಿರ್ಮಿಸಿಕೊಂಡು ಯಾವುದೇ ರೀತಿಯ ಆಶ್ರಯವಿಲ್ಲದೆ ಜೀವನ ನಡೆಸುತ್ತಿದೆ.

ಈ ಕುಟುಂಬದ ಸ್ಥಿತಿಯನ್ನು ಕಂಡು ಮರುಗಿದ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಕಲಬುರ್ಗಿ ವಿಭಾಗಿಯ ಸಹ ಪ್ರಮುಖರಾದ ಉಪನ್ಯಾಸಕ ಡಾ: ಉಪೇಂದ್ರ ನಾಯಕ ಸುಬೇದಾರ ಅವರು,ಇಂತಹ ಚಳಿಗಾಲದಲ್ಲಿ ರಸ್ತೆ ಬದಿ ಜೀವನ ನಡೆಸುವುದಕ್ಕೆ ಮರುಗಿ ತಮ್ ಸ್ವಂತ ಹಣದಲ್ಲಿ ನಿತ್ಯದ ಉಪಜೀವನಕ್ಕೆ ಬೇಕಾದ ಅಕ್ಕಿ ಬೇಳೆ ಅಡುಗೆ ಎಣ್ಣೆ ಸೇರಿದಂತೆ ಅಗತ್ಯ ವಸ್ತುಗಳ ನೆರವು ನೀಡುವ ಮೂಲಕ ಕುಟುಂಬಕ್ಕೆ ನೆರವಾಗಿದ್ದಾರೆ.

ಅಲ್ಲದೆ ಈ ಸಂದರ್ಭದಲ್ಲಿ ಡಾ: ಉಪೇಂದ್ರ ನಾಯಕ ಸುಬೇದಾರ ಮಾತನಾಡಿ,ಸರಕಾರಗಳು ಉಳ್ಳವರಿಗೆ ಏನೆಲ್ಲ ಸೌಲಭ್ಯಗಳನ್ನು ನೀಡುತ್ತದೆ ಆದರೆ ಇಂತಹ ಬಡ ಜನರತ್ತ ಕಣ್ಣು ಹಾಯಿಸದಿರುವುದು ನೋವಿನ ಸಂಗತಿಯಾಗಿದೆ.ಸರಕಾರ ಹಾಗು ನಗರಸಭೆ ಈ ಕುಟುಂಬಕ್ಕೆ ಒಂದು ಆಶ್ರಯ ಮನೆಯನ್ನು ನೀಡುವ ಮೂಲಕ ನೆರವಾಗಬೇಕು ಮತ್ತು ಸ್ಥಳಿಯ ಜನಪ್ರತಿನಿಧಿಗಳು ಈ ಕುಟುಂಬಕ್ಕೆ ನೆರವಿಗೆ ಬರಬೇಕೆಂದು ಮನವಿ ಮಾಡಿದ್ದಾರೆ.ಈ ಸಂದರ್ಭದಲ್ಲಿ ಮುಖಂಡರಾದ ನಾಗರಾಜ ಮಕಾಶಿ ಕ್ಯಾತಪ್ಪ ಮೇದಾ ಸೇರಿದಂತೆ ಇತರರಿದ್ದರು.

emedialine

Recent Posts

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮ

ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…

4 hours ago

ಶೋಷಿತ ಜನಜಾಗೃತಿ ವೇದಿಕೆ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ

ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…

4 hours ago

ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರು: ಡಾ. ಎಸ್.ಎಸ್. ಗುಬ್ಬಿ ಬೇಸರ

ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…

4 hours ago

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…

4 hours ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

4 hours ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

4 hours ago