ಕಲಬುರಗಿ: ತಾಲ್ಲೂಕಿನ ಪಾಳಾ ಸುಭಾಷಚಂದ್ರ ಪಾಟೀಲ್ ಸ್ಮಾರಕ ಜನಕಲ್ಯಾಣ್ ಟ್ರಸ್ಟ್ ವತಿಯಿಂದ ಕೊಡಮಾಡುವ ನಾಲ್ಕನೇ ವರ್ಷದ ಗೌಡ ಪ್ರಶಸ್ತಿ ಪ್ರದಾನ ಸಮಾರಂಭವು ನಗರದ ಕನ್ನಡ ಭವನದಲ್ಲಿ ಡಿಸೆಂಬರ್ ೨೭ರಂದು ಬೆಳಿಗ್ಗೆ ೧೦-೩೦ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಶರಣಗೌಡ ಪಾಟೀಲ್ ಪಾಳಾ ಅವರು ತಿಳಿಸಿದ್ದಾರೆ.
ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ. ಸತೀಶ್ ಹೊಸಮನಿಅವರಿಗೆ ಚಿನ್ನದ ಪದಕ ಹಾಗೂ ಅಕ್ಕಮಹಾದೇವಿ ಆಶ್ರಮದ ಪ್ರಭುದೇವ್ ಆಶ್ರಮದ ಪ್ರಭುಶ್ರೀ ತಾಯಿ ಅವರಿಗೆ ಬೆಳ್ಳಿ ಪದಕದೊಂದಿಗೆ ಗೌಡ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ಹೇಳಿಕೆಯಲ್ಲಿ ಘೋಷಿಸಿದ್ದಾರೆ.
ಪತ್ರಕರ್ತರಾದ ಬಾಲಾಜಿ ಜೆ. ಚಿತ್ತೇಕರ್, ಶಂಕರ್ ಕೋಡ್ಲಾ, ಜಯತೀರ್ಥ ಪಾಟೀಲ್, ಸಾಹಿತಿಗಳಾದ ಡಾ. ಎಸ್.ಎಸ್. ಗುಬ್ಬಿ, ರತ್ನಾ ಕಾಳೇಗೌಡ, ಡಾ. ನಾಗಪ್ಪ ಗೋಗಿ, ಜೇವರ್ಗಿಯ ಶಮಸುದ್ದೀನ್ ಗುಂಡಗುರ್ತಿ, ವೀರೇಶ್ ಕಂದಗಲ್ ಹಾಗೂ ಬಸವರಾಜ್ ಮಾಹೂರ್, ಪ್ರಶಾಂತ್ ಗೋಲ್ಡ್ ಸ್ಮಿತ್ ಅವರೆಲ್ಲರಿಗೂ ಬೆಳ್ಳಿ ಪದಕದೊಂದಿಗೆ ಗೌಡ ಪ್ರಶಸ್ತಿ ಪುರಸ್ಕಾರ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ಇದೇ ವೇಳೆಯಲ್ಲಿ ಕಲ್ಯಾಣದ ಕಣ್ಮಣಿ, ಅವಿಸ್ಮರಣೀಯರು, ಗೌಡ ಕೃತಿಗಳ ಲೋಕಾರ್ಪಣೆ ಸಮಾರಂಭ ಸಹ ಜರುಗಲಿದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…