ಬೆಂಗಳೂರು: ವಿಶೇಷ ನ್ಯಾಯಾಲಯದ ದಿನಾಂಕ: ೨೩-೧೨-೨೦೨೦ ರ ಆದೇಶದನ್ವಯ ಐಎಂಎ ದಲ್ಲಿ ಹಣ ಹೂಡಿರುವವರು ತಮ್ಮ ಹಣವನ್ನು ಮರುಪಾವತಿ ಪಡೆಯುವಲ್ಲಿ ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕವನ್ನು ೦೩-೦೧-೨೦೨೦ ರವರೆಗೆ ವಿಸ್ತರಿಸಲಾಗಿದೆ.
ಐಎಂಎ ಸಂಸ್ಥೆಯಲ್ಲಿ ಹಣ ಹೂಡಿರುವವರ ಬಳಿ ಬ್ಯಾಂಕ್ ಖಾತೆ, ಆಧಾರ್ ಸಂಖ್ಯೆ ಅಥವಾ ಐಎಂಎ ಸಂಸ್ಥೆಯವರು ನೀಡಿರುವ ಗುರುತಿನ ಚೀಟಿ ಇಲ್ಲದೆಯೂ ಸಹ ತಮ್ಮ ಹಣವನ್ನು ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸೆಕ್ಷನ್ ೭ (೩) ರ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ಅಧಿನಿಯಮ (೨೦೦೪) ರ ಪ್ರಕಾರ ನಿಗದಿಪಡಿಸಿದ ಕೊನೆಯ ದಿನದ ಒಳಗಾಗಿ ಅರ್ಜಿ ಸಲ್ಲಿಸದಿದ್ದರೆ ನಂತರ ಯಾವುದೇ ಕ್ಲೇಮುಗಳನ್ನು ಸ್ವೀಕರಿಸಲಾಗುವುದಿಲ್ಲ.
ಈ ಕುರಿತು ಹೆಚ್ಚಿನ ವಿವರಗಳಿಗೆ ಅರ್ಜಿದಾರರು ಕಾಲ್‌ಸೆಂಟರ್ ಸಂಖ್ಯೆ 080-46885959 ಗೆ ಬೆಳಿಗ್ಗೆ ೮.೦೦ ಗಂಟೆಯಿಂದ ರಾತ್ರಿ ೮.೦೦ ಗಂಟೆ ವರೆಗೆ ಕರೆ ಮಾಡಬಹುದು ಅಲ್ಲದೆ ವೆಬ್‌ಸೈಟ್ ” imaclaims.karnataka.gov.in ಇ-ಮೇಲ್- splocaima20@gmail.com ವಾಟ್ಸ್‌ಆಪ್ ಸಂಖ್ಯೆ: ೭೯೭೫೫೬೮೮೮೦ ಅಥವಾ ಚಾಟ್‌ಬಾಕ್ಸ್ ಲಿಂಕ್ https://bot.v-connect.in/ ಅಥವಾ ಸಮಕ್ಷಮ ಪ್ರಾಧಿಕಾರದ ಕಚೇರಿ, ೨ನೇ ಮಹಡಿ, ಬಿ.ಎಂ.ಟಿ.ಸಿ. ಕಾಂಪ್ಲೆಕ್ಸ್, ಶಾಂತಿನಗರ, ಬೆಂಗಳೂರು-೫೬೦ ೦೨೭ ಇಲ್ಲಿ ಪಡೆಯಬಹುದಾಗಿದೆ ಎಂದು ಐಎಂಎ ಪ್ರಕರಣದ ವಿಶೇಷ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…