ಬಿಸಿ ಬಿಸಿ ಸುದ್ದಿ

ಸರ್ಕಾರದ ಮಲತಾಯಿ ಧೋರಣೆ: ಪ್ರತ್ಯೇಕ ರಾಜ್ಯ ಕೂಗಿಗೆ ಕುಮಕ್ಕು

ಕಲಬುರಗಿ: ರಾಜ್ಯ ಸರ್ಕಾರ ಮೂಗಿಗೆ ತುಪ್ಪ ವರಸುವಂತೆ ನಮ್ಮ ಪ್ರದೇಶಕ್ಕೆ ಹೆಸರಿಗೆ ಮಾತ್ರ ಕಲ್ಯಾಣ ಕರ್ನಾಟಕ ನಾಮಕರಣ ಮಾಡಿ ಇದಕ್ಕೆ ಪೂರಕವಾಗಿ ಸಮರೋಪಾದಿಯ ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ರಾಜ್ಯ ಸರಕಾರ ವಿಪರೀತವಾಗಿ ಮಲಧೋರಣೆ ಅನಸರಿಸುತ್ತಿರುವದು ನೋಡಿದರೆ, ಸರ್ಕಾರವೇ ಪ್ರತ್ಯೇಕ ರಾಜ್ಯ ಕೇಳಿರಿ ಎಂಬುದಕ್ಕೆ ಪೂರಕವಾಗಿ ವರ್ತಿಸುತ್ತಿದೆ ಎಂದು ಹೈದ್ರಾಬಾದ ಕರ್ನಾಟಕ ಜನಪರ ಸಂಫರ್ಷ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಅಸಮಧಾನ ಹೊರಹಾಕಿದ್ದಾರೆ.

ಸರ್ಕಾರ  ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ  ಮಂತ್ರಿ ಮಂಡದಲ್ಲಿ ಪ್ರಾತಿನಿದಿತ್ವ ನೀಡಿಲ್ಲ, ನೀಡಬೇಕಾದ ಅನುವಾದದಲ್ಲಿ ಕಡಿತ ಮಾಡಿದೆ, ನಾಮಕವಾಸ್ತೆ ಉಸ್ತುವಾರಿ ಸಚಿವರುಗಳನ್ನು ನೇಮಕ ಮಾಡಿದೆ, ಭರವಸೆ ನೀಡಿದಂತೆ ವಿಶೇಷ ಸ್ಥಾನಮಾನದ ಪರಿಣಾಮಕಾರಿ ಅನುಷ್ಠಾನಕ್ಕೆ ಪ್ರತ್ಯೇಕ ಮಂತ್ರಾಲಯ ಸ್ಥಾಪನೆ ಮಾಡಿಲ್ಲ, 371j ಕಲಂನ ವಿಶೇಷ ಕೋಶ ಕಛೇರಿಯ ಪ್ರಾದೇಶಿಕ ಕಛೇರಿ ಕಲಬುರಗಿಯಲ್ಲಿ ಅಸ್ತಿತ್ವಕ್ಕೆ ತಂದಿಲ್ಲ, ಕಲಂ ತಿದ್ದುಪಡಿಯ ನಿಯಮಗಳಲ್ಲಿರುವ ದೋಷಗಳ ನಿವಾರಣೆ ಮಾಡಿಲ್ಲ,  ಆದರೆ ಈಗ ಇದಕ್ಕೆ ವಿರುದ್ಧವಾಗಿ ನಮ್ಮಲ್ಲಿರುವ ಪ್ರಾದೇಶಿಕ ಮಟ್ಟದ ಕಛೇರಿಗಳು ಬೇರೆ ವಿಭಾಗಕ್ಕೆ ಸ್ಥಳಾಂತರ ಮಾಡುತ್ತಿರುವದು ನೋಡಿದರೆ ಸರ್ಕಾರ ನಮ್ಮ ಪ್ರದೇಶಕ್ಕೆ ರಾಜಾರೋಷವಾಗಿ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಲವು ದಿನಗಳ ಹಿಂದೆ ಇಂಧನ ಪ್ರಾದೇಶಿಕ ಕಛೇರಿ ಬೇರೆಡೆಗೆ ಸ್ಥಳಾಂತರ ಮಾಡಿ ಈಗ ಆಹಾರ ಪ್ರಯೋಗಾಲಯ ಕೇಂದ್ರ ಸ್ಥಳಾಂತರ ಮಾಡುತ್ತಿರುವದು ನೋಡಿದರೆ ಸರ್ಕಾರದ ಅಸಲಿ  ನಿಯತ್ತು ಎನೆಂಬುವದು ಗೂತ್ತಾಗುತ್ತಿದೆ ಎಂದು ಶಂಶಯ ಹೊರಹಾಕಿದ್ದಾರೆ.

ಇಂತಹ ಗಂಭೀರವಾದ ವಿಷಯಗಳಿಗೆ  ಭಾಗದ ಸಂಸದರು, ಶಾಸಕರು ಸವಾಲಾಗಿ ಸ್ವೀಕರಿಸಿ ಸ್ಥಳಾಂತರ ಮಾಡುತ್ತಿರುವ ಕಛೇರಿಗಳು ಯಥಾ ಸ್ಥಿತಿಯಾಗಿ ಇಲ್ಲಿಯೆ ಮುಂದುವರಿಸಲು ತಕ್ಷಣ ಸ್ಪಂದಿಸಿ ಕ್ರಮಕೈಗೊಳ್ಳಬೇಕು ಇಲ್ಲದಿದ್ದರೆ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

12 mins ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

19 mins ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

2 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

2 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

3 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

3 hours ago