ಕಲಬುರಗಿ: ಗ್ರಾಮ ಪಂಚಾಯಿತಿಯ ಸಾರ್ವತ್ರಿಕ-2020ರ ಚುನಾವಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ ಐದು ತಾಲೂಕುಗಳಲ್ಲಿ ಎರಡನೇ ಹಂತದ ಮತದಾನವು ರವಿವಾರ ಶಾಂತಿಯುತವಾಗಿ ನಡೆದಿದ್ದು, ಒಟ್ಟು ಶೇ. 74.55 ರಷ್ಟು ಮತದಾನವಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವಿ.ವಿ. ಜೋತ್ಸ್ನಾ ಅವರು ತಿಳಿಸಿದ್ದಾರೆ.
ಜೇವರ್ಗಿ ತಾಲೂಕು ಶೇ. 77.65 ರಷ್ಟು, ಚಿತ್ತಾಪುರ ಶೇ. 66.20 ರಷ್ಟು, ಸೇಡಂ 82.39 ಶೇ.ರಷ್ಟು, ಚಿಂಚೋಳಿ ಶೇ. 76.85 ರಷ್ಟು ಹಾಗೂ ಯಡ್ರಾಮಿ ಶೇ.69.65 ರಷ್ಟು ಮತದಾನವಾಗಿದೆ.
ಮತ ಚಲಾಯಿಸುವ ಹಕ್ಕು ಹೊಂದಿದ ಒಟ್ಟು 5,63,006 ಮತದಾರರ ಪೈಕಿ 4,24,673 ಮತದಾರರು ಮತ ಚಲಾಯಿಸಿದ್ದು, ಇದರಲ್ಲಿ 2,16,066 ಪುರುಷರು ಹಾಗೂ 2,08,607 ಮಹಿಳಾ ಮತದಾರರು ಇದ್ದಾರೆ.
ಎರಡನೇ ಹಂತದಲ್ಲಿ ಒಟ್ಟು 116 ಗ್ರಾಮ ಪಂಚಾಯಿತಿಗಳ 1953 ಸ್ಥಾನಗಳಿಗೆ ಚುನಾವಣೆ ನಡೆಯಬೇಕಿತ್ತು. ಆದರೆ 242 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ 1711 ಸ್ಥಾನಗಳಿಗೆ ಮತದಾನ ನಡೆಯಿತು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…