ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯಿಂದ 2018-19ನೇ ಸಾಲಿನ ಎಸ್.ಎಫ್.ಸಿ. (ಮುಕ್ತ ನಿಧಿ) ಅನುದಾನದ ಶೇ.24.10 ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಹಾಗೂ ಎಸ್.ಸಿ.ಪಿ./ಟಿ.ಎಸ್.ಪಿ. ಅನುದಾನದಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರಿಗೆ ಈ ಕೆಳಕಂಡ ಯೋಜನೆಗಳಡಿ ಸಹಾಯಧನ ನೀಡಲಾಗುತ್ತಿದೆ. ಇದಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತೆ ಬಿ. ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ.
ಪೌರ ಕಾರ್ಮಿಕರ ಕಲ್ಯಾಣಕ್ಕಾಗಿ ಎಂ.ಬಿ.ಬಿ.ಎಸ್., ಬಿ.ಇ., ಬಿ.ಕಾಂ., ಎಂ.ಕಾಂ., ಬಿ.ಎಸ್ಸಿ, ಎಂ.ಎಸ್ಸಿ. ಎಂ.ಬಿ.ಎ. ಹಾಗೂ ಇತರೆ ತಾಂತ್ರಿಕ ಪದವಿ ವ್ಯಾಸಂಗ ಮಾಡುತ್ತಿರುವ (ಪ.ಜಾ./ಪ.ಪಂ.) ಪೌರಕಾರ್ಮಿಕರ ಮಕ್ಕಳಿಗೆ ಮಾತ್ರ ಲ್ಯಾಪ್ ಟಾಪ್ ಖರೀದಿಗಾಗಿ ಸಹಾಯಧನ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಪೌರಕಾರ್ಮಿಕರಿಗೆ ಪಕ್ಕಾ ಮನೆ ನಿರ್ಮಾಣ ಮಾಡಲು ಸಹಾಯಧನ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪೌರಕಾರ್ಮಿಕರ ಮಕ್ಕಳಿಗೆ ಸಣ್ಣ ಉದ್ದಿಮೆ ಸ್ಥಾಪಿಸಲು (ಬ್ಯಾಂಕ್ ಮುಖಾಂತರ) ಸಹಾಯಧನ ನೀಡಲಾಗುತ್ತಿದೆ.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಜನರ ಯೋಜನೆಗಳ ವಿವರ ಇಂತಿದೆ. ಸಣ್ಣ ಉದ್ದಿಮೆ ಸ್ಥಾಪಿಸಲು (ಬ್ಯಾಂಕ್ ಮುಖಾಂತರ) ಸಹಾಯಧನ, ಕ್ರೀಡಾಕೂಟದಲ್ಲಿ ಸ್ಪರ್ಧಿಸಿದವರಿಗೆ ಸಹಾಯಧನ (ತಾಲೂಕು, ಜಿಲ್ಲಾ, ರಾಜ್ಯ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ) ಹಾಗೂ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಇತರೆ ವೃತ್ತಿಪರ ತರಗತಿ, ಪ್ಯಾರಾ ಮೆಡಿಕಲ್ ಕೋರ್ಸ್, ಡಿಪ್ಲೋಮಾ, ಡಿಇಡಿ, ಸಿಪಿಇಡಿ, ಇತರೆ ತಾಂತ್ರಿಕ ತರಗತಿ, ಬಿ.ಎ., ಬಿ.ಎಸ್ಸಿ, ಬಿ.ಕಾಂ., ಬಿಬಿಎ, ಬಿಬಿಎಂ, ಬಿಸಿಎ, ಇತರೆ ಪದವಿ, ಎಂ.ಎ, ಎಂ.ಎಸ್ಸಿ, ಎಂ.ಎಸ್.ಡಬ್ಲ್ಯೂ, ಎಂ.ಬಿ.ಎ., ಎಂ.ಡಿ., ಎಂಪಿಇಡಿ, ಬಿ.ಎ., ಎಂಬಿಬಿಎಸ್, ಬಿಡಿಎಸ್, ಎಂ.ಟೆಕ್, ಎಂ.ಎ, ಎ.ಇಡಿ, ಎಂ.ಎಸ್., ಪಿಹೆಚ್‌ಡಿ, ಪೊಸ್ಟ್ ಡಾಕ್ಟರೇಟ್, ಇತರೆ ಯಾವುದೇ ಸ್ನಾತಕೋತ್ತರ ಪದವಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ನೀಡಲಾಗುತ್ತಿದೆ.
ಅರ್ಹ ಫಲಾನುಭವಿಗಳು ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ ಮಹಾನಗರ ಪಾಲಿಕೆಯ ಆವಕ ಶಾಖೆಯಿಂದ 2019ರ ಜೂನ್ 13 ರಿಂದ 30 ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲೆಗಳೊಂದಿಗೆ ಅರ್ಜಿಯನ್ನು 2019ರ ಜೂನ್ 30ರ ಸಂಜೆ 5.30 ಗಂಟೆಯೊಳಗಾಗಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಹಾನಗರ ಪಾಲಿಕೆಯ ಶೇ. 24.10ರ ಶಾಖೆಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…