ಮತ ಎಣಿಕೆ ಕಾರ್ಯದಲ್ಲಿ ಯಾವುದೇ ಲೋಪ ಆಗದಂತೆ ನಿಗಾವಹಿಸಿ: ಜಿಲ್ಲಾಧಿಕಾರಿ ಡಾ: ರಾಗಪ್ರಿಯ

0
25

ಸುರಪುರ: ಇದೇ 30 ರಂದು ನಡೆಯುವ ಗ್ರಾಮ ಪಂಚಾಯತಿ ಚುನಾವಣೆಯ ಮತ ಎಣಿಕೆ ಸಂದರ್ಭದಲ್ಲಿ ಯಾವುದೇ ರೀತಿಯ ಲೋಪಗಳಾಗದಂತೆ ನಿಗಾವಹಿಸಿ ಮತ ಎಣಿಕೆ ಕಾರ್ಯ ನಡೆಸುವಂತೆ ಜಿಲ್ಲಾಧಿಕಾರಿ ಡಾ:ರಾಗಪ್ರಿಯ ಆರ್ ತಿಳಿಸಿದರು.

ನಗರದ ತಹಸೀಲ್ ಕಚೇರಿಯ ಸಭಾಂಗಣದಲ್ಲಿ ಸಿಬ್ಬಂದಿಗಳಿಗೆ ಹಮ್ಮಿಕೊಂಡಿದ್ದ ಮತ ಎಣಿಕೆ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ,ಮತ ಎಣಿಕೆ ಸಂದರ್ಭದಲ್ಲಿ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಎಚ್ಚರವಹಿಸಿ ಪುನಃ ಮತ ಎಣಿಕೆಗೆ ಅವಕಾಶ ನೀಡದ ರೀತಿಯಲ್ಲಿ ಕಾರ್ಯನಿರ್ವಹಿಸಿ ಹಾಗು ಮತ ಎಣಿಕೆ ಕೇಂದ್ರದಿಂದ ಯಾವುದೇ ರೀತಿಯ ಸಂದೇಶಗಳನ್ನು ಕಳುಹಿಸುವುದು ಅಪರಾಧವಾಗಿದ್ದು ಯಾರೂ ಮೊಬೈಲ್ ಮೂಲಕ ಸಂದೇಶ ಕಳುಹಿಸುವುದಕ್ಕೆ ಹೋಗಬೇಡಿ ಎಂದು ಎಚ್ಚರಿಕೆ ನೀಡಿದರು.

Contact Your\'s Advertisement; 9902492681

ಮತ ಎಣಿಕೆ ಕೇಂದ್ರದ ಬಳಿಯಲ್ಲಿ ಯಾವುದೇ ರೀತಿಯ ಗದ್ದಲಗಳಿಗೆ ಅವಕಾಶವಿರದಂತೆ ನೋಡಿಕೊಳ್ಳಿ ಹೊರಗಡೆ ಪೊಲೀಸ್ ನಿಯೋಜಿಸಿ ಗದ್ದಲಗಳಿಗೆ ಅವಕಾಶ ನೀಡದಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ ಸುಬ್ಬಣ್ಣ ಜಮಖಂಡಿ ಸುರಪುರ ತಾಲೂಕು ನೋಡಲ್ ಪ್ರಭಾಕರ್ ಗ್ರೇಡ್-2 ತಹಸೀಲ್ದಾರ ಸೂಫಿಯಾ ಸುಲ್ತಾನ ಚುನಾವಣೆ ಸಿರಸ್ತೆದಾರ ಅಶೋಕ ಸುರಪುರ ಮಾಸ್ಟರ್ ಟ್ರೈನರ್ ಸಿದ್ರಾಮ ಹಾಗು ಹಣಮಂತ ಪೂಜಾರಿ ಸೇರಿದಂತೆ ಎಲ್ಲಾ ಸಿಬ್ಬಂದಿಗಳಿದ್ದರು.

ಒಟ್ಟು 62 ಟೇಬಲ್‍ಗಳಿದ್ದು 186 ಜನ ಸಿಬ್ಬಂದಿಗಳು ಎಣಿಕೆ ಕಾರ್ಯದಲ್ಲಿ ಇರಲಿದ್ದಾರೆ.ಅದರಲ್ಲಿ 62 ಜನ ಮೇಲ್ವಿಚಾರಕರು ಹಾಗು 124 ಜನ ಮತ ಎಣಿಕೆ ಸಹಾಯಕರು ಕೆಲಸ ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ: ರಾಗಪ್ರಿಯ ಮಾಹಿತಿ ನೀಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here