ಮೈಸೂರು: ಇಂದು ನಗರದ ಇಂದಿರಾ ಗಾಂಧಿ ಕಾಂಗ್ರೆಸ್ ಭವನದಲ್ಲಿ 135 ನೇ ಭಾರತಿಯ ರಾಷ್ಟ್ರೀಯ ಕಾಂಗ್ರೆಸ್ ಸಂಸ್ಥಾಪನಾ ದಿನ, ಸಮರ್ಪಣಾ ದಿವಸ್ ಆಚರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು ಮಾತನಾಡಿದ ಹಲವಾರು ಗಣ್ಯರು ನಮ್ಮ ಭಾರತಿಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವೂ 135 ವರ್ಷಗಲಿಂದಲೂ ಈ ದೇಶದಲ್ಲಿ ಎಲ್ಲಾ ವರ್ಗದ ಜನಸಮುದಾಯಗಳಿಗೆ ಮೂಲಭೂತ ಸೌಕರ್ಯಗಳನ್ನು, ಮೀಸಲಾತಿ, ಅವಕಾಶಗಳನ್ನು, ಅಭಿವೃದ್ಧಿ ಕಾರ್ಯವನ್ನು ನೀಡಿದ ಪಕ್ಷ ಏಕೈಕ ಪಕ್ಷ ನಮ್ಮ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ , ಇತಿಹಾಸ ಪುಟದಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆಗಳು , ಅನುಷ್ಠಾನಗಳು ವಿವಿಧ ಬಗೆಯ ಅನ್ವೇಷಣೆಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪಾತ್ರ ಅವಿಸ್ಮರಣೀಯ ಎಂದು ತಮ್ಮದೇ ಆದ ಅನುಭವದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಗ್ರಾಮಾಂತರ ಅಧ್ಯಕ್ಷರಾದ ಡಾ. ಬಿಜೆವಿ, ಕೆ.ಆರ್ ಕ್ಷೇತ್ರದ ಮಾಜಿ ಶಾಸಕರಾದ ಎಂ.ಕೆ. ಸೋಮಶೇಖರ್, ನಗರ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ. ಶಿವಣ್ಣ, ದೇವರಾಜ್ ಅರಸು ಪ್ರತಿಷ್ಠನ ಸಮಿತಿಯ ಅಧ್ಯಕ್ಷರಾದ ಜಾಕಿರ್ ಹುಸೇನ್, ಮೈಸೂರು ನಗರ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಡೈರಿ ವೆಂಕಟೇಶ್ ಹಾಗೂ ಇನ್ನು ಅನೇಕರು ಉಪಸ್ಥಿತರಿದ್ದರು.