ಬಿಸಿ ಬಿಸಿ ಸುದ್ದಿ

ತೊಗರಿಗೆ ಪ್ರೋತ್ಸಾಹ ಧನ ಪ್ರಕಟಿಸಿ, ಉಸ್ತುವಾರಿ ಸಚಿವರು ಕಲಬುರಗಿಗೆ ಬರಲಿ: ಕಾಂಗ್ರೆಸ್

ಕಲಬುರಗಿ: ತೊಗರಿಗೆ ರಾಜ್ಯ ಸರ್ಕಾರ ಕೇಂದ್ರದ ಬೆಂಬಲ ಬೆಲೆಗೆ ತನ್ನ ಪ್ರೋತ್ಸಾಹ ನೀಡುತ್ತಾ ಬಂದಿದೆ, ಆದರೆ ಪ್ರಸಕ್ತವಾಗಿ ನಯಾಪೈಸೆ ನೀಡದೇ ಶೋಷಣೆ ಎಸಗಲಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ, ಜೇವರ್ಗಿ ಶಾಸಕ ಡಾ. ಅಜಯಸಿಂಗ್ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ್ ನೆಲೋಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಬಲ ಬೆಲೆಯಲ್ಲಿ ಖರೀದಿ ಆರಂಭವಾದ ವರ್ಷದಿಂದ ರಾಜ್ಯ ಸರ್ಕಾರ ಪ್ರೋತ್ಸಾಹ ಧನ ನೀಡುತ್ತಾ ಬಂದಿದೆ. ಆದರೆ ರೈತರ ಸರ್ಕಾರ ಎನ್ನುವ ರಾಜ್ಯ ಬಿಜೆಪಿ ಸರ್ಕಾರವೇ ರೈತರಿಗೆ ಬರೆ ಎಳೆದಿದೆ. ಪ್ರಸಕ್ತವಾಗಿ ಮೊದಲೇ ಶತಮಾನದ ಮೇಘಸ್ಫೋಟದಿಂದ ಅರ್ಧಕ್ಕಿಂತ ಹೆಚ್ಚಿನ ತೊಗರಿ ಹಾನಿಯಾಗಿದೆ. ಇಂತಹುದರಲ್ಲಿ ಪ್ರೋತ್ಸಾಹ ಧನ ನೀಡದೇ ಇರುವ ಧೋರಣೆಯಿಂದ ಹೊರ ಬಂದು ಈ ಕೂಡಲೇ ಕನಿಷ್ಟ 1500 ರೂ ಪ್ರೋತ್ಸಾಹ ಧನ ನಿಗದಿ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ತೊಗರಿ ಖರೀದಿ ಕೇಂದ್ರ ಆರಂಭ ಎನ್ನಲಾಗಿದೆ. ಆದರೆ ಎಲ್ಲೂ ಖರೀದಿಯೇ ಆರಂಭವಾಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರಂತು ಕಲಬುರಗಿಯನ್ನೇ ಮರೆತ್ತಿದ್ದಾರೆ. ಹೊಸ ವರ್ಷದಂದು ಬರ್ತಾರೆಂದು ಹೇಳಲಾಗುತ್ತಿದೆ. ಕಲಬುರಗಿ ಗೆ ಬರುವಾಗ ಪ್ರೋತ್ಸಾಹ ಧನ ಪ್ರಕಟಿಸಿಯೇ ಬರಬೇಕು. ಖಾಲಿ ಕೈಯಲ್ಲಿ ಬರುವುದಾದರೆ ಬರದಿರುವುದೇ ಒಳಿತು. ಏನಾದರೂ ಜಿಲ್ಲೆ ಹಾಗೂ ತೊಗರಿ  ಮೇಲೆ ಕಾಳಜಿಯಿದ್ದರೆ ತೊಗರಿ ಕ್ವಿಂಟಾಲ್ ಗೆ 7500 ರೂ.ದಲ್ಲಿ ಖರೀದಿ ಮಾಡಲಿ ಎಂದು ಡಾ. ಅಜಯಸಿಂಗ್, ಅಲ್ಲಮಪ್ರಭು ಪಾಟೀಲ್ ಆಗ್ರಹಿಸಿದ್ದಾರೆ.

ಬಾಯಿ ಬಿಡದ ಬಿಜೆಪಿಗರು: ತೊಗರಿಗೆ ಪ್ರೋತ್ಸಾಹ ಧನ ನೀಡದಿರುವ ರಾಜ್ಯ ಸರ್ಕಾರದ ನಿರ್ಲಕ್ಷ್ಯ ವಿರುದ್ಧ ಬಿಜೆಪಿಯ ಯಾವೊಬ್ಬ ಜನಪ್ರತಿನಿಧಿ ಬಾಯಿ ಬಿಡ್ತಾ ಇಲ್ಲ. ಇದನ್ನು ನೋಡಿದರೆ ರೈತರ ಹಿತಾಸಕ್ತಿ ಬೇಕಿಲ್ಲ ಎಂಬುದಾಗಿ ನಿರೂಪಿಸುತ್ತದೆ ಎಂದಿದ್ದಾರೆ.

ಅತಿವೃಷ್ಟಿ ಹಾನಿಗೆ ಪರಿಹಾರ ಕೊಡುವುದಾಗಿ ಸರ್ಕಾರ ಹೇಳುತ್ತಿದೆ. ಆದರೆ ನಯಾ ಪೈಸೆ ಪರಿಹಾರ ನೀಡಿಲ್ಲ. ಕಿಸಾನ ಸಮ್ಮಾನ್ ಯೋಜನೆ ಅಡಿ ನೀಡಲಾಗಿವ 2000ರೂ ಪ್ರೋತ್ಸಾಹ ಧನಕ್ಕೆ ಅಬ್ಬರದ ಪ್ರಚಾರ ಮಾಡಲಾಗುತ್ತಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ರೈತ ವಿರೋಧಿ ಧೋರಣೆ ವಿರುದ್ದ ರೈತರು, ಕೃಷಿ ಕೂಲಿ ಕಾರ್ಮಿಕರು ಹಾಗೂ ಜನರು ತಿರುಗಿ ಬಿದ್ದಿದ್ದರಿಂದ ಸರ್ಕಾರಗಳಿಗೆ ದಿಕ್ಕೇ ತೋಚುತ್ತಿಲ್ಲ ಎಂದಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ ತೊಗರಿ ಪ್ರೋತ್ಸಾಹ ಧನಕ್ಕಾಗಿ ಸಿಎಂ ಬಳಿ ನಿಯೋಗ ಹೋಗುವುದಾಗಿ ಹೇಳಿದ್ದಾರೆ.ಜವಾಬ್ದಾರಿಯಿಂದ ನುಣುಚಿಕೊಳ್ಳಲು ನಿಯೋಗದ ನೆಪ ಹೇಳಿದ್ದಾರೆ.

ಪ್ರತಿವರ್ಷ ತೊಗರಿಗೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ ಧನ ನೀಡುತ್ತಾ ಬರಲಾಗಿದೆ. ಆದರೆ ಇದೇ ವರ್ಷ ನೀಡ್ತಾ ಇಲ್ಲ. ಹೀಗಾಗಿ ನೀಡಲೇಬೇಕೆಂದು ಸಿಎಂಗೆ ಹಾಗೂ ಕೃಷಿ ಸಚಿವರಿಗೆ ಹತ್ತು ದಿನಗಳ ಹಿಂದೆಯೇ ಭೇಟಿಯಾಗಬೇಕಿತ್ತು. ಬಿಜೆಪಿ ಶಾಸಕರಿಗೆ ರೈತರ ಹಿತಾಸಕ್ತಿ ಬೇಕಿಲ್ಲ. ಏನಿದ್ದರೂ ವೈಯಕ್ತಿಕ ಲಾಭದ ಕಡೆ ಆಸಕ್ತಿ ಕಡೆ ಲಕ್ಷ್ಯ ವಹಿಸಿದ ಪರಿಣಾಮ ಕಲ್ಯಾಣ ಕರ್ನಾಟಕ ಸಮಸ್ಯೆ ಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎನ್ನುವಂತಾಗಿದೆ ಎಂದಿದ್ದಾರೆ.

ದಿವಾಳಿ ಸರ್ಕಾರ: ರಾಜ್ಯ ಸರ್ಕಾರ ದಿವಾಳಿಯಾಗಿದ್ದರಿಂದಲೇ ತೊಗರಿಗೆ ಪ್ರೋತ್ಸಾಹ ಧನ ನೀಡುತ್ತಿಲ್ಲ. ಅದೇ ರೀತಿ ಇತರ ಯೋಜಬೆಗಳಿಗೆ ಅನುದಾನ ನೀಡುತ್ತಿಲ್ಲ. ಚುನಾವಣೆಗಳಿಗೆ ತೋರುವ ಕಾಳಜಿ ಅಭಿವೃದ್ಧಿ ಕಾರ್ಯಗಳಿಗೆ ಆಸಕ್ತಿ ತೋರುತ್ತಿಲ್ಲ ಎಂದಿದ್ದಾರೆ.

emedialine

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 hour ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 hour ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

1 hour ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

1 hour ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

1 hour ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

2 hours ago