ಡಿ. 31 ರಂದು ವಿವಿಧ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ

0
385

ಕಲಬುರಗಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಕೆಳಕಂಡ ಕಂಪನಿಗಳಲ್ಲಿ ವಿವಿಧ ಹುದ್ದೆಗಳ ಭರ್ತಿಗಾಗಿ ಕಲಬುರಗಿ ನಗರದ ಸರ್ಕಾರಿ ಐಟಿಐ ಕಾಲೇಜಿನ ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಡಿಸೆಂಬರ್ 31 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಕಲಬುರಗಿಯ ಸ್ವತಂತ್ರ ಮೈಕ್ರೋಫೈನಾನ್ಸ್‍ದಲ್ಲಿ ಫಿಲ್ಡ್ ಆಫೀಸರ್ ಹುದ್ದೆಗೆ ಪಿ.ಯು.ಸಿ. ಮತ್ತು ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 20 ರಿಂದ 26 ವರ್ಷದೊಳಗಿರಬೇಕು. ಬೆಂಗಳೂರಿನ ಕ್ವೆಸ್ ಕಾರ್ಪ್ ಲಿಮಿಟೆಡ್‍ದಲ್ಲಿ ಸೆಲ್ಸ್ ಪ್ರಮೋಟರ್, ಪ್ರೋಡಕ್ಷನ್ ಇಂಜಿನಿಯರ್, ಕ್ವಾಲಿಟಿ ಇಂಜಿನಿಯರ್, ಸೇಲ್ಸ್ ಡೆಮೋನ್ಸಟ್ರೆಟ್, ಟೆಲಿ ಕಾಲರ್, ಸಿ.ಆರ್.ಓ. ಹಾಗೂ ಇತರೆ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು. ಬೆಂಗಳೂರಿನ ಎನ್.ಟಿ.ಟಿ.ಎಫ್. ದಲ್ಲಿ ಓಜೆಟಿ ಹುದ್ದೆಗೆ ಐಟಿಐ (ಫಿಟ್ಟರ್, ಟರ್ನರ್, ಮಶಿನಿಸ್ಟ್), ಪಿ.ಯು.ಸಿ. ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 25 ವರ್ಷದೊಳಗಿರಬೇಕು.

Contact Your\'s Advertisement; 9902492681

ಆಸಕ್ತ ಅಭ್ಯರ್ಥಿಗಳು ತಮ್ಮ (ರೆಸ್ಯೂಮ್) ಬಯೋಡಾಟಾ ಹಾಗೂ ಆಧಾರ ಕಾರ್ಡ್ ದಾಖಲೆಗಳೊಂದಿಗೆ ಮೇಲ್ಕಂಡ ದಿನದಂದು ಸಂದರ್ಶನಕ್ಕೆ ಹಾಜರಾಗಬೇಕು. ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846 ಗೆ ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here