ಸುರಪುರ: ಜಿಲ್ಲೆಯಾದ್ಯಂತ ರೈತರ ತೊಗರಿ ಮಾರಾಟಕ್ಕಾಗಿ ಹೆಸರು ನೊಂದಾಯಿಸಿಕೊಳ್ಳಲು ಈಗಾಗಲೆ ಡಿಸೆಂಬರ್ 18 ರಿಂದಲೇ ಆರಂಭಿಸಲಾಗಿದ್ದು ಇದೇ 30ರ ವರೆಗೆ ಸರಕಾರ ಅವಕಾಶ ನೀಡಿದೆ ರೈತರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಜಿಲ್ಲಾ ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕ ಎಮ್.ಭೀಮರಾಯ ತಿಳಿಸಿದರು.
ನಗರದ ಹಸನಾಪುರ ಗಂಜ್‍ನಲ್ಲಿಯ ಕೃಷಿ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಕಚೇರಿಯಲ್ಲಿನ ತೊಗರಿ ಖರೀದಿ ಕೇಂದ್ರದಲ್ಲಿನ ರೈತರು ಹೆಸರು ನೊಂದಣಿ ಕಚೇರಿಗೆ ಜಿಲ್ಲಾಧಿಕಾರಿಗಳೊಂದಿಗೆ ಭೇಟಿ ನೀಡಿ ನಂತರ ಮಾತನಾಡಿ,ಜಿಲ್ಲೆಯ ರೈತರು ತೊಗರಿ ಮಾರಾಟಕ್ಕೆ ಹೆಸರು ನೊಂದಣಿಗೆ ಇದೇ ಡಿಸೆಂಬರ್ 30ರ ವರೆಗೆ ಅವಕಾಶವಿರುವುದರಿಂದ ಎರಡು ದಿನದಲ್ಲಿ ಹೇಗೆ ನೊಂದಣಿ ಮಾಡಿಸುವುದು ಎಂದು ಚಿಂತಿಸಬೇಕಿಲ್ಲ,ಸರಕಾರ ಹೆಸರು ನೊಂದಣಿಗೆ ಕೊನೆಯ ದಿನವನ್ನು ಮುಂದೂಡಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.
ಜಿಲ್ಲೆಯಾದ್ಯಂತ ಅನೇಕ ಗ್ರಾಮಗಳಲ್ಲಿನ ರೈತರು ಗ್ರಾಮ ಪಂಚಾಯತಿ ಚುನಾವಣೆ ಅಂಗವಾಗಿ ಹೆಸರು ನೊಂದಾಯಿಸಲು ಸಾಧ್ಯವಾಗಿಲ್ಲ,ಆದ್ದರಿಂದ ಎರಡು ದಿನದಲ್ಲಿ ಹೆಸರು ನೊಂದಾಯಿಸಿಕೊಳ್ಳಲು ಹೇಗೆ ಸಾಧ್ಯ ಎಂದು ತಮ್ಮ ಬೇಸರ ವ್ಯಕ್ತಪಡಿಸಿರುವುದು ಗಮನಕ್ಕೆ ಬಂದಿದ್ದು,ರೈತರ ಬೇಡಿಕೆಯನ್ನು ಈಗಾಗಲೆ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ,ಸರಕಾರವು ನೊಂದಣಿಗೆ ಹೆಚ್ಚಿನ ಕಾಲವಕಾಶ ನೀಡಲಿದೆ.ಆದ್ದರಿಂದ ರೈತರು ಆತಂಕ ಪಡದೆ ತಮ್ಮ ಸೂಕ್ತ ದಾಕಲಾತಿಗಳೊಂದಿಗೆ ನೊಂದಣಿ ಕೇಂದ್ರದಲ್ಲಿ ಹೆಸರು ನೊಂದಾಯಿಸಿಕೊಳ್ಳುವಂತೆ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಟಿಎಪಿಸಿಎಮ್‍ಎಸ್ ಕಾರ್ಯದರ್ಶಿ ಶಿವರುದ್ರ ಉಳ್ಳಿ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಗದ್ದೆಪ್ಪ ರೋಡಲಬಂಡ ಇತರರಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…