ಕಲಬುರಗಿ: ಕೋವಿಡ್-19 ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಂಗಳವಾರ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನದ ಪ್ರಯುಕ್ತ ವಿಶ್ವಮಾನವ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.
ಕಲಬುರಗಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ವೀರಭದ್ರಪ್ಪ ಸಿಂಪಿ ಹಾಗೂ ಸಾಹಿತಿಗಳಾದ ಡಾ. ಸ್ವಾಮಿರಾವ ಕುಲಕರ್ಣಿ, ಡಾ. ಚಿ.ಸಿ. ಸಿಂಗಣ್ಣ, ಸುರೇಶ ಬಡಿಗೇರ, ಸಂಗಮನಾಥ ರೇವಂತಗಾಂವ, ವೆಂಕಟೇಶ ನೀರಳಗಿ, ಡಾ. ಶ್ರೀಶೈಲ್ ನಾಗೋಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶಹಾಬಾದ: ಮಾನವೀಯ ಮೌಲ್ಯಗಳು ವಿದ್ಯಾರ್ಥಿ ಯುವಜನರ ಬೆಳೆಸಿಕೊಂಡು ಉತ್ತಮ ನಾಗರಿಕರಾಗಬೇಕೆಂದು ಎಸ್ಎಸ್ ಮರುಗೋಳ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಕೆ.ಬಿ. ಬಿಲ್ಲವ…
ಶಹಾಪುರ : 26 : ಚಿಕ್ಕ ವಯಸ್ಸಿನಲ್ಲಿಯೆ ಹಿರಿದಾದ ಜ್ಞಾನವನ್ನು ಹೊಂದಿದ್ದ ಚೆನ್ನಬಸವಣ್ಣ ಷಟಸ್ಥಲ ಜ್ಞಾನಿ ಎಂದು ಕರೆಯಿಸಿಕೊಂಡರು. ಬಸವಣ್ಣನವರ…
ಶಹಾಬಾದ: ನಗರಸಭೆಯ ವಾರ್ಡ ನಂ.3 ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಾಜೀದ್ ಖಾನ್ ಜಮಾದಾರ ಅವರು ಗೆಲುವು ಸಾಧಿಸಿದ್ದಾರೆ. ನಗರದ…
ಶಹಾಬಾದ: ಜಾತಿ-ಬೇಧ ಎನ್ನದೇ ಸರ್ವರಿಗೂ ಮೂಲಭೂತ ಹಕ್ಕನ್ನು ಒದಗಿಸಿ, ಬದುಕುವ ವಾತಾವರಣ ಸೃಷ್ಠಿಸಿದ್ದೇ ಡಾ. ಬಿ .ಆರ್. ಅಂಬೇಡ್ಕರ್ ಬರೆದ…
ಶಹಾಬಾದ: ಸಂವಿಧಾನದ ಆಶೋತ್ತರಗಳು, ಮೌಲ್ಯಗಳನ್ನು ಅರಿತು ಅದರಂತೆ ಎಲ್ಲರೂ ನಡೆದರೆ ನಮ್ಮ ದೇಶ ಜಗತ್ತಿನಲ್ಲಿಯೇ ಉನ್ನತ ಸ್ಥಾನದಲ್ಲಿರುತ್ತದೆ ಎಂದು ಬಿಜೆಪಿ…
ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಇ.ಪಿ.ಎಫ್ ಕ್ಷೇತ್ರೀಯ ಕಾರ್ಯಾಲಯದಲ್ಲಿ ಮಂಗಳವಾರ 69ನೇ ಕನ್ನಡ ರಾಜ್ಯೋತ್ಸವವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಕಲ್ಯಾಣ…