ಇಂದು ವಿಶ್ವ ರಕ್ತದಾನಿಗಳ ದಿನ: ರಕ್ತದಾನ ಮಹಾದಾನ…

0
101

ರಕ್ತದಾನ ಮಹಾದಾನ. ಅಪಘಾತ, ಅವಘಡ ಸಂಭವಿಸಿದವರಿಗೆ, ವಿವಿಧ ಕಾಯಿಲೆಯಿಂದ ಬಳಲುತ್ತಿರುವವರಿಗೆ, ಹೃದಯ, ಮೆದುಳು, ಹೆರಿಗೆಯಂಥ ಪ್ರಮುಖ ಶಸ್ತ್ರಚಿಕಿತ್ಸೆ ಮಾಡುವ ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಇರುತ್ತದೆ. ಇಂಥ ಸಂದರ್ಭದಲ್ಲಿ ರಕ್ತ ದಾನ ಮಾಡುವುದರಿಂದ ಸಾವಿನ ಜತೆ ಹೋರಾಡುವ ವ್ಯಕ್ತಿಗಳನ್ನು ಬದುಕಿಸಿ ಪ್ರಾಣಾಪಾಯದಿಂದ ಪಾರು ಮಾಡಬಹುದು. ರಕ್ತದಾನ ಮಾಡುವುದರಿಂದ ಉಂಟಾಗುವ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಹಾಗೂ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವುದಕ್ಕೆ ಪ್ರೇರೇಪಿಸುವ ಸಲುವಾಗಿ ಪ್ರತಿವರ್ಷ ಜೂನ್‌ 14ರಂದು ಭಾರತ ಸೇರಿದಂತೆ ವಿಶ್ವದಾದ್ಯಂತ ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಅದರ ಸಹ ಸಂಸ್ಥೆಗಳ ವತಿಯಿಂದ ವಿಶ್ವ ರಕ್ತದಾನಿಗಳ ದಿನ ಆಚರಿಸಲಾಗುತ್ತದೆ.

Contact Your\'s Advertisement; 9902492681

ಈ ದಿನವನ್ನು 2004ರಲ್ಲಿ ಮೊದಲ ಬಾರಿಗೆ ಆಚರಿಸಲಾಯಿತು. ರಕ್ತವನ್ನು ಎ, ಬಿ, ಎಬಿ ಮತ್ತು ಒ ಎಂಬ ಗುಂಪುಗಳ್ನನಾಗಿ ವಿಂಗಡಿಸುವ ಬಗೆಯನ್ನು ಕಂಡು ಹಿಡಿದ ವಿಜ್ಞಾನಿ ಕಾರ್ಲ್‌ ಲ್ಯಾಂಡ್‌ ಸ್ಟೀರ್ನ್‌ ಅವರು 1868 ಜೂನ್‌ 14 ರಂದು ಜನಿಸಿದರು. ಅವರ ಜನ್ಮ ದಿನದ ನೆನಪಿಗಾಗಿ ಜೂನ್‌ 14ರಂದು ವಿಶ್ವದ ರಕ್ತ ದಾನಿಗಳ ದಿನವನ್ನಾಗಿ ಆಚರಿಸಲಾಗುತ್ತಿದೆ. ವಿಶ್ವದ ಅನೇಕ ರಾಷ್ಟ್ರಗಳಲ್ಲಿ ರಕ್ತದ ಕೊರತೆ ಇದೆ. ಈ ಕೊರತೆಯನ್ನು ನೀಗಿಸುವುದು ರಕ್ತದಾನಿಗಳ ದಿನ ಆಚರಣೆಯ ಬಹು ಮುಖ್ಯ ಉದ್ದೇಶ.

ರಕ್ತಕ್ಕೆ ಪರ್ಯಾಯವಾದ ವಸ್ತುವಿಲ್ಲ. ರಕ್ತವನ್ನು ಕೃತಕವಾಗಿ ತಯಾರಿಸಲೂ ಸಾಧ್ಯವಿಲ್ಲ. ಹಾಗಾಗಿ ತುರ್ತು ಪರಿಸ್ಥಿತಿಗಳಲ್ಲಿ ದಾನಿಯಿಂದ ಸ್ವೀಕರಿಸಿದ ರಕ್ತವಷ್ಟೇ ರೋಗಿಯ ಜೀವ ಉಳಿಸಲು ಸಾಧ್ಯ. ಈ ದಿನದಂದು ಸರ್ಕಾರ ಮತ್ತು ಸರ್ಕಾರೇತರ ಆರೋಗ್ಯ ಸಂಸ್ಥೆಗಳು ರಕ್ತದಾನ ಶಿಬಿರ ಹಾಗೂ ರಕ್ತದಾನ ಕುರಿತ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತವೆ.

(ಮಾಹಿತಿ ಸಂಗ್ರಹ:- ಶರಣು ರೇವಡಿ)

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here