ಸಿಡಿಲಿನಿಂದ ಸಾಯುವವರಲ್ಲಿ ಹೆಚ್ಚಿನವರು ರೈತರು. ಸಿಡಿಲನ್ನು ತಪ್ಪಿಸಲಾಗದು. ಆದರೆ. ಅದರಿಂದಾಗುವ ಸಾವು ನೋವು ಗಳನ್ನು ತಪ್ಪಿಸಬಹುದು.
ರಕ್ಷಣೆ_ಹೇಗೆ……?
ಗುಡುಗು-ಮಿಂಚು ಬರಲಿದೆ ಎಂದು ಗೊತ್ತಾದಾಗ ನೀವು ಬಯಲಿನಲ್ಲಿದ್ದರೆ. ತಕ್ಷಣವೇ ಇರುವುದರಲ್ಲಿ ತಗ್ಗು ಪ್ರದೇಶಕ್ಕೆ ಹೋಗಿ ಕುಳಿತುಕೊಳ್ಳಿ. ನಿಲ್ಲ ಬೇಡಿ, ತಗ್ಗು ಪ್ರದೇಶ ಇಲ್ಲದೆ ಬಯಲಿನಲ್ಲೆ ಇರಬೇಕಾದರೆ. ನಿಮ್ಮ ತಲೆಯನ್ನು ಮೊಣಕಾಲುಗಳ ನಡುವೆ ಹುದುಗಿಸಿಕೊಳ್ಳಿ, ಇದು ಮಿಂಚಿನಿಂದ ಮೆದುಳಿಗೂ,ಹೃದಯಕ್ಕೂ ಆಗುವ ಹಾನಿಯನ್ನು ತಪ್ಪಿಸುತ್ತದೆ.
ಮರಗಳಿದ್ದ ಪ್ರದೇಶದಲ್ಲಿ ನೀವು ಇದ್ದರೆ, ಅಲ್ಲಿಂದ ಬೇಗನೆ ಹೊರಬರುವುದು ಒಳ್ಳೆಯದು.(ಯಾಕೆಂದರೆ ಸಿಡಿಲು ಮೋಡದಿಂದ ಭೂಮಿಗೆ ಹರಿಯಲು ಮರದಂತಹ ಹಸಿ, ಒದ್ದೆ ವಸ್ತುವನ್ನೇ ಆರಿಸಿಕೊಳ್ಳುತ್ತದೆ.) ಎತ್ತರದ ಗುಡ್ಡದ ಮೇಲಿದ್ದರೆ ತಗ್ಗಿಗೆ ಇಳಿರಿ – ಕುರಿ ಮಂದೆ ಅಥವಾ ಜಾನುವಾರುಗಳ ಮಧ್ಯ ನಿಂತಿದ್ದರೆ, ಅವುಗಳ ಮಧ್ಯದಲ್ಲಿ ಬಗ್ಗಿ ಕುಳಿತುಕೊಳ್ಳಿ, ( ಯಾಕೆಂದರೆ ಮಿಂಚು ಪ್ರಾಣಿಗಳಿಗಿಂತ ಎತ್ತರವಿರುವ ಮನುಷನನ್ನೇ ಆರಿಸಿಕೊಳ್ಳುತ್ತದೆ.) -ಕೆರೆಯಲ್ಲಿ ಈಜುವುದು,ಸ್ನಾನ ಮಾಡುವುದು ಬೇಡ, ನೀರಿನಲ್ಲಿದ್ದರೆ ತಕ್ಷಣ ಹೊರಬನ್ನಿ.
ವಿದ್ಯುತ್ ಕಂಬ, ಎಲಕ್ಟ್ರಿಕಲ್ ಟವರ್, ಮೊಬೈಲ್ ಟವರ್, ಟ್ರಾನ್ಸ್ ಫಾರ್ಮರ್ ಮುಂತಾದವುಗಳ ಹತ್ತಿರವೂ ಇರಬೇಡಿ. ತಂತಿಬೇಲಿ,ಭಟ್ಟ ಒಣಹಾಕುವ ತಂತಿ, ಇವುಗಳಿಂದ ದೊರವಿರಿ, ಮಳೆ ಬರುವ ಸಮಯದಲ್ಲಿ ಮನೆಯ ಟೆರೇಸನ್ನು ಸ್ವಚ್ಛ ಮಾಡುವ ಸಾಹಸ ಬೇಡ.
ಮನೆಯ ಕಿಟಕಿಯ ಬಳಿ ನಿಲ್ಲುವುದಕ್ಕಿಂತಲೂ ಮನೆಯ ಮಧ್ಯದಲ್ಲಿರುವುದು ಸುರಕ್ಷಿತ. ಗುಡುಗು-ಸಿಡಿಲಿನ ಸಂದರ್ಭದಲ್ಲಿ ಫೋನ್ ಮಾಡಬೇಡಿ. ಅದನ್ನು ಚಾರ್ಜ್ ಮಾಡುವ ಸಹಸವೂ ಬೇಡ. ಕಾರಿನಲ್ಲಿ ಪ್ರಯಾಣಿಸುತ್ತಿದ್ದರೆ ಗಾಜನ್ನು ಮುಚ್ಚಿಕೊಳ್ಳಿ. ಕಾರಿನ ಬಾಡಿಯನ್ನು ಸಾಧ್ಯವಾದಷ್ಟು ಸ್ಪರ್ಶಿಸದೆ ಮಧ್ಯದಲ್ಲಿ ಕುಳಿತುಕೊಳ್ಳುವುದು ಒಳ್ಳೆಯದು.
ಕಂಪ್ಯೂಟರ್ ಗಳಿಂದ ದೂರ ಇರಿ, ಮನೆಯ ಕಾoಕ್ರೇಟ್ ಗೋಡೆಗಳನ್ನು ಸ್ಪೆರ್ಶಿಸದೆ.ಕೋಣೆಯ ಮಧ್ಯದಲ್ಲಿದ್ದರೆ ಹೆಚ್ಚು ಸುರಕ್ಷಿತ.
ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ
ಕಂದಾಯ ಇಲಾಖೆ
ಕರ್ನಾಟಕ ಸರ್ಕಾರ
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…