ಕಲಬುರಗಿ: ಮಹಾಮಾರಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಶೀಘ್ರದಲ್ಲಿಯೆ ಲಸಿಕೆ ಬರುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಜನಸಾಮಾನ್ಯರ ಮೇಲೆ ಲಸಿಕೆ ಪ್ರಯೋಗ ಮಾಡುವ ಮುನ್ನ ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರ ಮೇಲೆ ಪ್ರಯೋಗ ಮಾಡಲು ಉದ್ದೇಶಿಸಿದ್ದು, ಇದಕ್ಕಾಗಿ ಜನವರಿ 2 ರಂದು ಕಲಬುರಗಿ ಜಿಲ್ಲೆಯಾದ್ಯಂತ ಮೂರು ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕೆ ನೀಡುವ ವಿಧಾನದ ಕುರಿತು “ಡ್ರೈ ರನ್” ನಡೆಸಲಾಗುತ್ತಿದೆ ಎಂದು ಜಿಲ್ಲಾ ಆರ್.ಸಿ.ಹೆಚ್.ಓ. ಅಧಿಕಾರಿ ಡಾ.ಪ್ರಭುಲಿಂಗ ಮಾನಕರ ತಿಳಿಸಿದ್ದಾರೆ.
ಕೊರೋನಾ ಲಸಿಕೆ ಬಂದ ಕೂಡಲೆ ಪ್ರಥಮ ಹಂತದಲ್ಲಿ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರು ಎಲ್ಲಾ ಹಂತದ ವೈದ್ಯ ಮತ್ತು ವೈದ್ಯೇತರ ಸಿಬ್ಬಂದಿ, ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಲಸಿಕೆ ನೀಡಲು ಉದ್ದೇಶಿಸಿ ಇವರ ವಿವರವನ್ನು ಈಗಾಗಲೆ ಕೋವಿಡ್ ವೆಬ್ ಪೋರ್ಟಲ್‍ನಲ್ಲಿ ಮಾಹಿತಿ ಅಪಲೋಡ್ ಮಾಡಲಾಗಿದ್ದು, ಇದಕ್ಕೆ ಪೂರ್ವ ಸಿದ್ಧತೆಯಾಗಿ ಶನಿವಾರ ಡ್ರೈ ರನ್ ಮಾಡಲಾಗುತ್ತಿದೆ.
ಡ್ರೈ ರನ್ ನಡೆಸಲು ರಾಜ್ಯದಲ್ಲಿ ಕಲಬುರಗಿ, ಬೆಳಗಾವಿ, ಮೈಸೂರು, ಬೆಂಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳು ಆಯ್ಕೆಯಾಗಿದ್ದು, ಶನಿವಾರ ಈ ಜಿಲ್ಲೆಗಳಲ್ಲಿ ಡ್ರೈ ರನ್ ನಡೆಯಲಿದೆ.
ಪ್ರತಿ ಜಿಲ್ಲೆಯಲ್ಲಿ ಮೂರು ಆರೋಗ್ಯ ಕೇಂದ್ರದಲ್ಲಿ ಡ್ರೈ ರನ್ ಆಯೋಜಿಸುವಂತೆ ರಾಜ್ಯ ಸರ್ಕಾರದ ಸೂಚನೆಯಂತೆ ಕಲಬುರಗಿ ನಗರದ ಅಶೋಕ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಕಲಬುರಗಿ ತಾಲೂಕಿನ ಅವರಾದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಜೇವರ್ಗಿ ತಾಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿನ ಆರೋಗ್ಯ ಕಾರ್ಯಕರ್ತೆಯರಿಗೆ ಲಸಿಕೆ ನೀಡುವ ವಿಧಾನದ ಬಗ್ಗೆ ಪೂರ್ವಭ್ಯಾಸ ಮಾಡಲಾಗುತ್ತಿದೆ ಎಂದು ತಿಳಿಸಿರುವ ಆರ್.ಸಿ.ಹೆಚ್.ಓ. ಡಾ.ಪ್ರಭುಲಿಂಗ ಮಾನಕರ್ ಅವರು ಲಸಿಕೆ ನೀಡುವವರೊಂದಿಗೆ ನಾಲ್ಕು ಜನ ಸಹಾಯಕ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ ಎಂದಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…