ಕಲಬುರಗಿ: ಇದೇ ಜನವರಿ ಅಂತ್ಯದೊಳಗೆ ಅತಿವೃಷ್ಟಿಯಿಂದ ಹಾನಿಗೊಳಗಾದ ಎಲ್ಲಾ ರೈತರಿಗೆ ಶೇ. 100ಕ್ಕೆ ನೂರರಷ್ಟು ಬೆಳೆ ಪರಿಹಾರ ನೀಡಲಾಗುವುದು ಎಂದು ಉಪಮುಖ್ಯಮಂತ್ರಿಗಳು, ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ಗುಲಬರ್ಗಾ ವಿಶ್ವವಿದ್ಯಾಲಯದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಶುಕ್ರವಾರ ಕೆಡಿಪಿ ಸಭೆಯ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಅಕ್ಟೋಬರ್ 13 ರಿಂದ 21 ವರೆಗೆ ಉಂಟಾದ ಅತಿವೃಷ್ಟಿಯಿಂದಾಗಿ 13,125 ಮನೆಗಳು ಹಾನಿಯಾಗಿವೆ. 13,12,50,000 ರೂ.ಗಳ ಪರಿಹಾರವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ ಹಾಗೂ ಪ್ರವಾಹದಿಂದ ಹಾಳಾದ ಮನೆಗಳನ್ನು ದುರಸ್ತಿ ಮಾಡಲಾಗುವುದು ಹಾಗೂ ಸಂಪೂರ್ಣವಾಗಿ ಹಾಳಾಗಿ ಕುಸಿದು ಬಿದ್ದಿರುವ ಮನೆಗಳನ್ನು ಕಟ್ಟಲು ಮೊದಲ ಕಂತಿನ ಹಣವನ್ನು ಈಗಾಗಲೇ ಸರ್ಕಾರವು ಅವರ ಖಾತೆಗೆ ಜಮಾ ಮಾಡಿದೆ ಎಂದು ತಿಳಿಸಿದರು.
ಪ್ರವಾಹದಿಂದ 2.92 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಸರ್ಕಾರದ ವತಿಯಿಂದ ಎನ್.ಡಿ.ಆರ್.ಎಫ್ ಹಾಗೂ ಎಸ್.ಡಿ.ಆರ್.ಎಫ್. ಮಾರ್ಗಸೂಚಿ ಪ್ರಕಾರ 1,04,044 ರೈತರಿಗೆ ಪ್ರತಿ ಹೆಕ್ಟರ್‍ಗೆ 10 ಸಾವಿರ ರೂ.ಗಳ ಪೆÇ್ರೀತ್ಸಾಹಧನÀ ನೀಡಲಾಗಿದ್ದು, ಇನ್ನುಳಿದ 1.92 ಲಕ್ಷ ರೈತರಿಗೆ ಆದಷ್ಟು ಬೇಗ ನೀಡಲಾಗುವುದು ಎಂದರು.
ಪ್ರವಾಹದಲ್ಲಿ ಜಾನುವಾರುಗಳು ಕೊಚ್ಚಿ ಹೋಗಿದ್ದು, ಈ ಕುರಿತು 870 ಪ್ರಕರಣಗಳು ದಾಖಲಾಗಿವೆ. ಈ ಸಂಬಂಧ 36.16 ಲಕ್ಷ ರೂ.ಗಳ ಪರಿಹಾರ ವಿತರಿಸಲಾಗಿದೆ ಎಂದು ಅವರು ಹೇಳಿದರು.
ಅತಿವೃಷ್ಟ್ಟಿ ಹಾಗೂ ಪ್ರವಾಹದಿಂದ ರಸ್ತೆಗಳು ಹಾಗೂ ಸೇತುವೆಗಳು, ಅಂಗನವಾಡಿ ಕೇಂದ್ರಗಳು ಸೇರಿ ಅನೇಕ ಕಟ್ಟಡಗಳು ಹಾನಿಗೊಳಗಾಗಿದ್ದು, ಅದಕ್ಕಾಗಿ 28.53 ಕೋಟಿ ರೂ.ಗಳ ತಕ್ಷಣದ ಪರಿಹಾರ ನೀಡಲಾಗಿದೆ. ಹೆಚ್ಚಿನ ಹಣವನ್ನು ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ರಾಜ್ಯ ಸರ್ಕಾರ ಜುಲೈ 2019 ರಿಂದ ವಿವಿಧ ಇಲಾಖೆಯಿಂದ ಜಿಲ್ಲೆಗೆ 35 ಇಲಾಖೆಗೆ 10,732 ಕೋಟಿ ರೂ.ಗಳ ಅನುದಾನ ನೀಡಿದ್ದು, ಇದರಲ್ಲಿ 10,105 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಇನ್ನುಳಿದ 626 ಕೋಟಿ ರೂ.ಗಳನ್ನು ಮುಂದಿನ ದಿನಗಳಲ್ಲಿ ವಿವಿಧ ಕಾಮಗಾರಿಗಳಿಗಾಗಿ ಬಳಸಲಾಗುವುದು ಎಂದು ಅವರು ವಿವರಿಸಿದರು.
ಈಗಾಗಲೇ ಬೆಂಬಲ ಬೆಲೆ ಯೋಜನೆಯಡಿ 173 ತೊಗರಿ ಕೇಂದ್ರಗಳು ಆರಂಭವಾಗಿದ್ದು, 23 ಸಾವಿರ ರೈತರು ನೋಂದಣಿ ಮಾಡಿಕೊಂಡಿದ್ದು, ಈ ತಿಂಗಳ ಪೂರ್ತಿ ಖರೀದಿ ಪ್ರಕ್ರಿಯೆ ಜರುಗಲಿದೆ ಎಂದರು.
ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ಸಿ. ರೇವೂರ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣ ಹೆಚ್. ಮಾಲಾಜಿ, ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ, ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ, ಜಿಲ್ಲಾ ಪೊಲೀಸ್ ವರಿμÁ್ಠಧಿಕಾರಿ ಡಾ. ಸಿಮಿ ಮರಿಯಮ್ ಜಾರ್ಜ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ.ರಾಜಾ, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ ಅವರು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…