ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಜಿಲ್ಲೆಯ ಶ್ರವಣದೋಷವುಳ್ಳ ವಿಕಲಚೇತನರಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆಯಂತ್ರ ವಿತರಿಸಲಾಗುತ್ತಿದೆ. ಇದಕ್ಕಾಗಿ ಶ್ರವಣದೋಷವುಳ್ಳ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಶ್ರವಣದೋಷವುಳ್ಳ ವ್ಯಕ್ತಿಗಳು ಭಾರತದ ಪ್ರಜೆಯಾಗಿರಬೇಕು. ಕರ್ನಾಟಕದಲ್ಲಿ ಕನಿಷ್ಠ ಹಿಂದಿನ 10 ವರ್ಷಗಳ ನಿವಾಸಿಯಾಗಿರಬೇಕು. ಶ್ರವಣದೋಷವುಳ್ಳ ವ್ಯಕ್ತಿಯು ಕನಿಷ್ಠ ಎಸ್.ಎಸ್.ಎಲ್.ಸಿ. ವ್ಯಾಸಂಗ ಮಾಡಿರಬೇಕು ಹಾಗೂ ವೃತ್ತಿಗೆ ಸಂಬಂಧಿಸಿದಂತೆ ಪ್ರಮಾಣಪತ್ರ ಸಲ್ಲಿಸಬೇಕು.
ಈ ಯೋಜನೆಯಡಿ ಸೌಲಭ್ಯ ಪಡೆಯಲು ಯಾವುದೇ ಆದಾಯ ಮಿತಿ ಇರುವುದಿಲ್ಲ. ವಿಕಲಚೇತನದ ಪ್ರಮಾಣ ಶೇ. 40 ಅಥವಾ ಅದಕ್ಕಿತ ಹೆಚ್ಚಾಗಿರಬೇಕು. ಕಡ್ಡಾಯವಾಗಿ ಸಂಬಂಧಪಟ್ಟ ತಹಶೀಲ್ದಾರರಿಂದ ಪಡೆದ ವಾಸಸ್ಥಳದ ದೃಢೀಕರಣ ಪತ್ರ ನೀಡಬೇಕು.
ಶ್ರವಣದೋಷವುಳ್ಳ ವಿಕಲಚೇತನರು ಭರ್ತಿ ಮಾಡಿದ ಅರ್ಜಿಯನ್ನು 2021ರ ಜನವರಿ 20ರೊಳಗಾಗಿ ಸಲ್ಲಿಸಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಚಂದ್ರಶೇಖರ ಪಾಟೀಲ ಕ್ರೀಡಾಂಗಣ ಎದುರಿಗೆಯಿರುವ ವಿಕಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಸಂಪರ್ಕಿಸಲು ಕೋರಲಾಗಿದೆ.