ಕಲಬುರಗಿ: ಜಿಲ್ಲೆಯ ಮೂರು ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕೆ ನೀಡುವ ವಿಧಾನದ ಕುರಿತು ಶನಿವಾರ “ಡ್ರೈ ರನ್” ನಡೆಸಲಾಯಿತು.
ಕಲಬುರಗಿ ನಗರದ ಅಶೋಕ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಕಲಬುರಗಿ ತಾಲೂಕಿನ ಅವರಾದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಜೇವರ್ಗಿ ತಾಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿನ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡುವ ವಿಧಾನದ ಬಗ್ಗೆ ಪೂರ್ವಭ್ಯಾಸ ನಡೆಸಲಾಯಿತು.
ಕಲಬುರಗಿ ನಗರದ ಅಶೋಕ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ಭೇಟಿ ನೀಡಿ ಡ್ರೈ ರನ್ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜಶೇಖರ ಮಾಲಿ, ಆರ್.ಸಿ.ಹೆಚ್ ಅಧಿಕಾರಿ ಡಾ.ಪ್ರಭುಲಿಂಗ ಮಾನಕರ ಸೇರಿದಂತೆ ಮತ್ತಿತರರು ಇದ್ದರು.
ಮಹಾಮಾರಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಶೀಘ್ರದಲ್ಲಿಯೇ ಲಸಿಕೆ ಬರುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಜನಸಾಮಾನ್ಯರ ಮೇಲೆ ಲಸಿಕೆ ಪ್ರಯೋಗ ಮಾಡುವ ಮುನ್ನ ಮೊದಲ ಹಂತದಲ್ಲಿ ಕೊರೋನಾ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಕಾರ್ಯಕರ್ತೆಯರಿಗೆ, ನಂತರದ ಪೊಲೀಸ್ ಇಲಾಖೆ ಸೇರಿದಂತೆ ಪೌರ ಕಾರ್ಮಿಕರು, ಯೋಧರ ಮೇಲೆ ಲಸಿಕೆ ಪ್ರಯೋಗಿಸಿ ಬಳಿಕ 50 ವರ್ಷದೊಳಗಿನ ಮಧುಮೇಹ, ಹೃದಯ ಸಂಬಂಧಿ ಕಾಯಿಲೆ, ಕ್ಯಾನ್ಸರ್, ಹೆಚ್‍ಐವಿ ಕಾಯಿಲೆ ಇರುವವರಿಗೆ ಲಸಿಕೆ ನೀಡಲಾಗುತ್ತದೆ. ಇದಲ್ಲದೇ 50 ವರ್ಷ ಮೇಲ್ಪಟ್ಟ ವೃದ್ಧರಿಗೆ ಹಾಗೂ ಕೊನೆಯಲ್ಲಿ ಇತರೆ ಜನಸಾಮಾನ್ಯರ ಮೇಲೆ ಲಸಿಕೆ ಪ್ರಯೋಗ ಮಾಡಲು ಉದ್ದೇಶಿಸಲಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…