ಕಲಬುರಗಿ: ಗ್ರಾಮೀಣ ಭಾಗದ ಜನತೆಯ ಆಶಯಗಳಿಗೆ ಸ್ಪಂಧಿಸುವ ಮೂಲಕ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ದಿಶೆಯಲ್ಲಿ ಕಾರ್ಯ ನಿರ್ವಹಿಸುವುದು ಅತ್ಯಗತ್ಯವಾಗಿದ್ದು, ಈ ದಿಶೆಯಲ್ಲಿ ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯತ ಸದಸ್ಯರು ಹಗಲಿರುಳು ಕೆಲಸ ಮಾಡಿ ಜನತೆಯ ಪ್ರೀತಿಗೆ ಪಾತ್ರರಾಗುವಂತೆ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕರಾದ ಬಸವರಾಜ ಮತ್ತಿಮೂಡ ಕರೆ ನೀಡಿದರು.
ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಸದಸ್ಯರಿಗೆ ಆಯೋಜಿಸಿದ ಸತ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಶಕ್ತ ಭಾರತ ನಿರ್ಮಾಣವಾಗಲು ಗ್ರಾಮಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದರ ಮೂಲಕ ಹಳ್ಳಿಗರ ಬದುಕು ಹಸನಾಗುವ ದಿಶೆಯಲ್ಲಿ ಕೆಲಸ ಮಾಡುವಂತೆ ಅವರು ಒತ್ತಿ ಹೇಳಿದರು.
ಇಂದಿಗೂ ಅನೇಕ ಹಳ್ಳಿಗಳು ಮೂಲಭೂತ ಸಮಸ್ಯೆಗಳಿಂದ ವಂಚಿತವಾಗಿದ್ದು ತಾವು ಶಾಸಕರಾಗಿ ಆಯ್ಕೆಯಾದ ಮೇಲೆ ಮತಕ್ಷೇತ್ರದ ಕಟ್ಟಕಡೆಯ ಹಳ್ಳಿಗೂ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದು ಕ್ಷೇತ್ರದ ಅಭಿವೃದ್ಧಿಗಾಗಿ ತಮ್ಮ ಜೊತೆಗೆ ಸದಾ ಇರುವೆನೆಂದು ನೂತನ ಸದಸ್ಯರಿಗೆ ಅಭಯ ಹಸ್ತ ನೀಡಿದ ಅವರು ಗ್ರಾಮೀಣ ಮತಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತವನ್ನಾಗಿ ಮಾಡುವ ದಿಶೆಯಲ್ಲಿ ತಾವು ಸಂಕಲ್ಪ ಹೊಂದಿದ್ದು ಈ ದಿಶೆಯಲ್ಲಿ ಈಗಾಗಲೇ ಕ್ಷೇತ್ರದಲ್ಲೇ ಭರದಿಂದ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು ಅಭಿವೃದ್ಧಿ ಕಾರ್ಯಕ್ಕೆ ಎಲ್ಲರ ಸಹಕಾರ ಅತ್ಯಗತ್ಯ ಎಂದು ನುಡಿದರು.
ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀ ಗುರು ಚಿಕ್ಕವೀರೇಶ್ವರ ಸಂಸ್ಥಾನ ಹಿರೇಮಠದ ಪೀಠಾಧಿಪತಿಗಳಾದ ಪೂಜ್ಯ ಡಾ. ರೇವಣಸಿದ್ದ ಶಿವಾಚಾರ್ಯರು ಮಾತನಾಡಿ ಸರಕಾರದ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಯಾಗಲು ಸರಕಾರದ ಜೊತೆಗೆ ಜನರ ಸಹಕಾರ ಅಗತ್ಯವಾಗಿದ್ದು ಸ್ವಚ್ಛತೆ ಮತ್ತು ಸುಂದರ ಪರಿಸರ ನಿರ್ಮಾಣ ಮಾಡಿಕೊಳ್ಳಲು ಮನೆಯೊಂದಿಗೆ ಸುತ್ತಮುತ್ತಲಿನ ವಾತಾವರಣವೂ ಸಹ ಸ್ವಚ್ಛತೆಯಿಂದ ಇಟ್ಟುಕೊಳ್ಳುವಂತೆ ಕಿವಿ ಮಾತು ಹೇಳಿದ ಅವರು ನೂತನ ಜನಪ್ರತಿನಿಧಿಗಳು ಜನರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂಧಿಸುವ ಮೂಲಕ ಜನಮುಖಿ ಕೆಲಸ ಮಾಡುವಂತೆ ಕರೆ ನೀಡಿದರು.
ಕಲಬುರಗಿ ಲೋಕಸಬಾ ಸದಸ್ಯರಾದ ಶ್ರೀ ಡಾ. ಉಮೇಶ ಜಾಧವ, ಮಾಜಿ ಶಾಸಕರಾದ ವಿಶ್ವನಾಥ ಪಾಟೀಲ ಹೆಬ್ಬಾಳ, ಭಾರತೀಯ ಜನತಾ ಪಕ್ಷದ ಮುಖಂಡರಾದ ರವಿ ಬಿರಾದಾರ ಕಮಲಾಪೂರ, ಕಲಬುರಗಿ ಗ್ರಾಮೀಣ ಮಂಡಲ ಉಪಾಧ್ಯಕ್ಷರಾದ ಶ್ರೀ ವಿನೋದ ಕುಮಾರ ಪಾಟೀಲ, ತಾಲೂಕಾ ಪಂಚಾಯತ ಮಾಜಿ ಅಧ್ಯಕ್ಷರಾದ ಶ್ರೀ ಸಂಗಮೇಶ ನಾಗನಳ್ಳಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ಶ್ರೀಮತಿ ಸುಶಿಲಾಬಾಯಿ ರಾಠೋಡ, ಮುಖಂಡರಾದ ಮಂಜು ರೆಡ್ಡಿ,
ಆರ್.ಎಂ.ಸಿ.ರಾಜು, ಬಾಬು ಪವಾರ, ಕರ್ನಾಟಕ ರಾಜ್ಯ ಅಲ್ಪ ಸಂಖ್ಯಾತರ ಅಬಿವೃದ್ಧಿ ನಿಗಮದ ನಿರ್ದೇಶಕರಾದ ಶ್ರೀ ಸುರೇಶ ತಂಗಾ, ಸಂಜುಕುಮಾರ ಟೆಂಗೆ, ಅಶೋಕ ಬಬಲಾದ, ವಾಲ್ಮಿಕಿ ರಾಠೋಡ, ವೀರಭದ್ರಯ್ಯ ಸ್ವಾಮಿ ಹದನೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ಸಂಗಯ್ಯ ಹಿರೇಮಠ, ನಿಂಗಣ್ಣಗೌಡ ಪಾಟೀಲ, ಶರಣಗೌಡ ಬಿರಾದಾರ, ಮೈನೋದ್ದೀನ ಕಲ್ಯಾಣಿ, ನಾಗಪ್ಪ ಕಿಳ್ಳಿ, ಶಾಮಲಿಂಗ ವಡ್ಡರ, ರಮೇಶ ಮೀಸಿ, ರಾಮರಾಯ ಆಡೆ, ಉಮಾಕಾಂತ ಆಡೆ, ಅಣ್ಣಪ್ಪ ನಾಟಿಕಾರ ಸೇರಿದಂತೆ ಗ್ರಾಮದ ಸಾವಿರಾರು ಜನರು ಭಾಗವಹಿಸಿದ್ದರು.
ಗ್ರಾಮದ ಪ್ರಮುಖ ಬೀದಿಗಳಲ್ಲಿ ತೆರೆದ ವಾಹನದಲ್ಲಿ ಭವ್ಯವಾದ ಮೆರವಣಿಗೆ ಜರುಗಿತು. ಸಂತೋಷ ಆಡೆ ಸ್ವಾಗತಿಸಿದರು, ನಾಗಲಿಂಗಯ್ಯ ಮಠಪತಿ ನಿರೂಪಿಸಿದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…