ಯಾದಗಿರಿ: ಜಿಲ್ಲೆಯ ವಡಗೇರಾ ಪಟ್ಟಣದ ಹಳೆ ಪೊಲೀಸ್ ಠಾಣೆ ಹಿಂಭಾಗದಲ್ಲಿ ಡಾ|| ಬಿ.ಆರ್. ಅಂಬೇಡ್ಕರ್ ಪುತ್ಥಳಿ ನಿರ್ಮಿಸಲಾಗಿದ್ದು ಇದನ್ನು ಪೊಲೀಸರು ತೆರವುಗೊಳಿಸಲು ಹುನ್ನಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದವು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರಿಗೆ ಜಮಾಯಿಸಿದ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಹಾಗೂ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ಕಾರ್ಯಕರ್ತರು ಡಿಸಿ ಗೆ ಮನವಿ ಸಲ್ಲಿಸಿದರು.
ಗ್ರಾಮದಲ್ಲಿ ಜನರ ಒಪ್ಪಿಗೆ ಪಡೆದು ಅಂಬೇಡ್ಕರ್ ನಾಮಫಲಕ ಅಳವಡಿಸಲಾಗಿದೆ ಆದರೆ ಕೆಲವು ಪಟ್ಟ ಭದ್ರ ಹಿತಾಸಕ್ತಿಗಳು ವಿನಾಕಾರಣ ಇದು ಪೊಲೀಸ್ ಠಾಣೆ ಜಾಗೆ ಎಂದು ತಕರಾರು ಎತ್ತಿದ್ದು ಫಲಕ ತೆರವು ಮಾಡಲು ಪೊಲೀಸರಿಗೆ ಕುಮ್ಮಕ್ಕು ನೀಡಿದ್ದಾರೆ ಇದರಿಂದಾಗಿ ಪೊಲೀಸರು ಅಂಬೇಡ್ಕರ್ ಫಲಕ ತೆರವು ಮಾಡುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದರು.
ಸಂವಿಧಾನ ಶಿಲ್ಪಿಗೆ ಗೌರವ ಕೊಡುವ ಕೆಲಸ ಮಾಡಬೇಕು ಎಂದು ಅವರು ಆಗ್ರಹಿಸಿದರು. ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾದ್ಯಕ್ಷ ಕಾಶಿನಾಥ ನಾಟೇಕರ್,ದಸಂಸ ಜಿಲ್ಲಾ ಸಂಚಾಲಕ ಶಿವಪುತ್ರ ಜವಳಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಂದಪ್ಪ ಕಟ್ಟಿಮನಿ, ದೇವಪ್ಪ ರಾಖಾ, ಸಂತೋಷ ಪೂಜಾರಿ, ಗುರುನಾಥ ನಾಟೇಕರ್, ರಘುಪತಿ, ಅಯ್ಯಪ್ಪ, ಹಂಪಯ್ಯ ಶೇಂಗಿನೋರ್, ಸಾಬಣ್ಣ ಕಟಗಿ ಶಹಾಪೂರ ದಸಂಸ ಮುಖಂಡರಾದ ಚಂದಪ್ಪ ಮುನಿಯಪ್ಪನೋರ್, ತಿಪ್ಪಣ್ಣ ಲಂಡನಕರ್, ಶಿವಲಿಂಗ ಹಸನಾಪುರ, ಶಿವಶರಣ, ಬಾಲರಾಜ ಖಾನಾಪೂರ ಇನ್ನಿತರರು ಇದ್ದರು.
ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಮೂಢನಂಬಿಕೆ, ಅನಿಷ್ಟ ಪದ್ಧತಿ, ಸಂವಿಧಾನದ ಆಶಯ ಈಡೇಸುವ ನಿಟ್ಟಿನಲ್ಲಿ ಜನ್ಮ ತಾಳಿದ ಮಾನವ ಬಂಧುತ್ವ…
ಕಲಬುರಗಿ: ನಗರದ ಸೆಂಟ್ ಮೇರಿ ಶಾಲೆಯಲ್ಲಿ 5 ರಿಂದ 9 ನೇ ತರಗತಿಯ 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ…
ಜೇವರ್ಗಿ: ತಾಲೂಕಿನ ಜನರ ಸೇವೆಗಾಗಿ ಕಲಬುರಗಿಯ ಇಸ್ಲಾಮಾಬಾದ ಕಾಲೋನಿಯ ಅಲ್ ಶಿಫಾ ಆಸ್ಪತ್ರೆಯ ಮುಖ್ಯಸ್ಥರು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು…
ಕಲಬುರಗಿ: ನಗರದ ಕೋರಮಂಗಲದಲ್ಲಿರುವ ಒಳಾಂಗಣ ಕ್ರೀಡಾಂಣದಲ್ಲಿ ಯುನೈಟೆಡ್ ಕೌನ್ಸಿಲ್ ಫಾರ್ ಎಜುಕೇಷನ್ ಆ್ಯಂಡ್ ಕಲ್ಟರ್ ಹಾಗೂ ಮೆಹೆಫಿಲ್-ಎ- ನಿಸಾ ಸಂಘಟನೆ…
ಕಲಬುರಗಿ: ನಗರದ ಹೊರವಲಯದಲ್ಲಿ ಇರುವ ಶರಣ ಸಿರಸಗಿ ಅಂಬೇಡ್ಕರ್ ನಗರದಲ್ಲಿ ಧಮ್ಮ ಮೈತ್ರಿ ಫೌಂಡೆಶನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾತೆ…
ಜೇವರ್ಗಿ: ನೆಲೋಗಿ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಡಾ. ಬಿ.ಆರ್.ಅಂಬೇಡ್ಕರ ಸಮುದಾಯ ಭವನದಲ್ಲಿ ರಮಾಬಾಯಿ ಅಂಬೇಡ್ಕರ್…