ಬಿಸಿ ಬಿಸಿ ಸುದ್ದಿ

ದೇಶ ಕಂಡ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ-ಮೇತ್ರೆ

ಶಹಾಬಾದ:ವೈಚಾರಿಕ ಚಿಂತನೆ ಮತ್ತು ತ್ಯಾಗ ಮನೋಭಾವನೆಯಿಂದ ಭಾರತೀಯ ಸಮಾಜವನ್ನು ಸಮೃದ್ಧಗೊಳಿಸಿದ ಸಾವಿತ್ರಿಬಾಯಿ ಫುಲೆಯವರು ದೇಶ ಕಂಡ ಮಹಾನ್ ಮಹಿಳೆ ಹಾಗೂ ದೇಶ ಕಂಡ ಮೊದಲ ಮಹಿಳಾ ಶಿಕ್ಷಕಿ ಎಂದು ದಲಿತ ವಿದ್ಯಾರ್ಥಿ ಒಕ್ಕೂಟ ಸಮಿತಿಯ ತಾಲೂಕಾ ಸಂಚಾಲಕ ಪೂಜಪ್ಪ ಮೇತ್ರೆ ಹೇಳಿದರು.

ಅವರು ರವಿವಾರ ನಗರದ ಕನ್ನಡ ಭವನದಲ್ಲಿ ದಸಂಸ ವತಿಯಿಂದ ಆಯೋಜಿಸಲಾದ ಸಾವಿತ್ರಿಬಾಯಿ ಫುಲೆಯವರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೇವಲ 13ನೇ ವಯಸ್ಸಿನಲ್ಲಿಯೇ ಮದುವೆಯಾದ ಸಾವಿತ್ರಿಬಾಯಿಗೆ ಅಕ್ಷರ,ಪುಸ್ತಕ ಜ್ಞಾನವಿರಲಿಲ್ಲ. ಆದರೆ ವಿದ್ಯೆ ಕಲಿಯಬೇಕೆಂಬ ಆಸೆ ಇತ್ತು.ಇವರ ಆಸೆಗೆ ಒತ್ತಾಸೆಯಾಗಿ ನಿಂತವರು ಆ ಕಾಲಕ್ಕೆ ಪ್ರಗತಿಪರ ಚಿಂತನೆಯ ಪತಿ ಜ್ಯೋತಿಬಾ ಪುಲೆಯವರು.ಇವರ ಪ್ರೋತ್ಸಾಹ ಮತ್ತು ಪ್ರೇರಣೆಯಿಂದ ಶಿಕ್ಷಣ ಪಡೆದರು. ಆಗಿನ ಬ್ರಿಟಿಷರ ಆಳ್ವಿಕೆಯ ಭಾರತದಲ್ಲಿ ಮೊದಲ ಶಿಕ್ಷಕಿಯ ತರಬೇತಿ ಪಡೆದು 17ನೇ ವಯಸ್ಸಿಗೆ ಶಿಕ್ಷಕಿಯಾದರು.ನಂತರಮಹಿಳೆ ಸಬಲಳಾಗಬೇಕೆಂದರೆ ಅವಳಿಗೆ ಶಿಕ್ಷಣ ನೀಡುವುದು ಅಗತ್ಯವೆಂದು ಅರಿತು ಶಿಕ್ಷಣ ನೀಡಲು ಪ್ರಾರಂಭಿಸಿದರು.ಆಗ ಪಟಭದ್ರಿಗೆ, ಸಂಪ್ರದಾಯಸ್ಥರಿಗೆ ಇದನ್ನು ಇವರ ಕಾರ್ಯ ಸಹಿಸಲಾಗದೇ ಕಾಟ ನೀಡಲು ಪ್ರಾರಂಭಿಸಿದರು.ಆದರೂ ಎದೆಗುಂದದೆ ಬಿಡೇವಾಡದಲ್ಲಿ ಭಾರತದಲ್ಲಿಯೇ ಮೊದಲ ಬಾರಿಗೆ ನಿರ್ಲಕ್ಷಿತ ಬಾಲಕಿಯರಿಗೆ,ಅವಕಾಶ ವಂಚಿತ ಹೆಣ್ಣು ಮಕ್ಕಳಿಗಾಗಿ ಹಾಗೂ ದಿಕ್ಕೆಟ್ಟ ಸ್ತ್ರೀಯರಿಗೆ ಶಾಲೆ ಆರಂಭಿಸಿ ಹೊಸ ಇತಿಹಾಸವನ್ನೇ ಬರೆದರು. ತಳವರ್ಗದ ಅನಕ್ಷರಸ್ಥ ಸಾವಿತ್ರಿಬಾಯಿ ಅಕ್ಷರ ಕಲಿತು, ಶಿಕ್ಷಣವಂಚಿತ ಮಹಿಳೆಯರಿಗೆ ಅಕ್ಷರ ಕಲಿಸಿದ ಕರುಣಾಮಯಿ ಎಂದು ಹೇಳಿದರು.

ಕಸಾಪ ಕಲಬುರಗಿ ಗ್ರಾಮೀಣ ಅಧ್ಯಕ್ಷ ಶರಣಗೌಡ ಪಾಟೀಲ, ನಗರಾಧ್ಯಕ್ಷ ಮಲ್ಲಿಕಾರ್ಜುನ ಪೂಜಾರಿ ಮಾತನಾಡಿದರು. ದಸಂಸ ತಾಲೂಕಾ ಸಂಘಟನಾ ಸಂಚಾಲಕ ಮಲ್ಲಣ್ಣ ಮಸ್ಕಿ, ಜಯಶ್ರೀ ಜಾಯಿ, ಅರುಣ ಜಾಯಿ,ಮಲ್ಲಿಕಾರ್ಜುನ ಹಳ್ಳಿ, ಮಲ್ಲಿಕಾರ್ಜುನಶೆಟ್ಟಿ, ರಾಘವೇಂದ್ರ ಗುಡೂರ, ಸಚಿನ್ ಗಿರೇನೂರ್, ಅರ್ಜುನ ಮೇತ್ರೆ, ನಿಂಗಪ್ಪ ನ್ಯಾವನಿ, ಮಲ್ಲಿಕಾರ್ಜುನ  ಹುಗ್ಗಿ ಇತರರು ಇದ್ದರು.

emedia line

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

11 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

22 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

22 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

24 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

24 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

1 day ago