ಬಿಸಿ ಬಿಸಿ ಸುದ್ದಿ

ಕೇಂದ್ರದ ಬಿಜೆಪಿ ಸರ್ಕಾರದ ಜನವಿರೋಧಿ ಕಾಯ್ದೆ ಹಿಂಪಡೆಯಬೇಕೆಂದು ಆಗ್ರಹಿಸಿ ರೈತ ಕೃಷಿ ಕಾರ್ಮಿಕ ಸಂಘಟನೆಯಿಂದ ಪ್ರತಿಜ್ಞೆ ವಿಧಿ

ಶಹಾಬಾದ: ಕೇಂದ್ರದ ಬಿ.ಜೆ.ಪಿ. ಸರ್ಕಾರದ ರೈತವಿರೋಧಿ, ಕಾರ್ಮಿಕ ವಿರೋಧಿ ಸೇರಿದಂತೆ ಎಪಿಎಂಸಿ ತಿದ್ದುಪಡಿ ಕಾಯ್ದೆ,ಬೆಲೆ ಭರವಸೆ ಕೃಷಿ ಸೇವೆಗಳ ಕಾಯ್ದೆ,ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ,ರಾಜ್ಯದಲ್ಲಿ ಎ.ಪಿ.ಎಂ.ಸಿ. ತಿದ್ದುಪಡಿ ಕಾಯ್ದೆ, ಭೂ ಸ್ವಾಧೀನ ತಿದ್ದುಪಡಿ ಕಾಯ್ದೆಗಳು ಕಾರ್ಪೋರೇಟ್ ಮನೆತನಗಳಿಗಾಗಿ ಜಾರಿಗೊಳಿಸುತ್ತಿರುವುದನ್ನು ವಿರೋಧಿಸಿ ಇವುಗಳನ್ನು ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿ ಹೊಸ ಕೃಷಿ ಕಾಯ್ದೆಗಳ ವಿರುದ್ಧ ದೇಶದಾದ್ಯಂತ ರೈತ ಸಂಘಟನೆಗಳು ನಡೆಸುತ್ತಿರುವ ಬೃಹತ್ ಆಂದೋಲನಕ್ಕೆ ಅಖಿಲ ಭಾರತ ಕಿಸಾನ ಸಂಘರ್ಷ ಸಮನ್ವಯ ಸಮಿತಿಗೆ ಬೆಂಬಲಿಸಿ ರೈತ ಕೃಷಿ ಕಾರ್ಮಿಕ ಸಂಘಟನೆಯಿಂದ ತಾಲೂಕಿನ ಹೊನಗುಂಟ,ಮುತ್ತಗಾ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಪ್ರತಿಜ್ಞೆ ವಿಧಿ ಮಾಡಿಸಲಾಯಿತು.

ಈ ಸಂಧರ್ಭದಲ್ಲಿ ಗ್ರಾಮದ ರೈತರನ್ನು ಉದ್ದೇಶಿಸಿ ರೈತ ಸಂಘಟನಾಕಾರ ತುಳಜರಾಮ.ಎನ್.ಕೆ ಮಾತನಾಡಿ, ದೆಹಲಿಯ ಕೊರೆಯುವ ಚಳಿಯಲ್ಲಿ ಕಳೆದ ಇಪ್ಪತ್ತೈದು ದಿನಗಳಿಂದ ಬಿಡಾರ ಹೂಡಿರುವ ಉತ್ತರ ಭಾರತದ ಸುಮಾರು ಎರಡು ಕೋಟಿಗೂ ಅಧಿಕ ರೈತರು ಕೇಂದ್ರ ಸಕರ್ಾರದ ಕರಾಳ ರೈತ ವಿರೋಧಿ ಮಸೂದೆಗಳ ವಿರುದ್ಧ ಧಿರೋದಾತ್ತವಾಗಿ ಹೋರಾಡುತ್ತಿದ್ದಾರೆ. ಈ ಹೋರಾಟವನ್ನು ಮುರಿಯಲು ಒಂದೆಡೆ ಕೇಂದ್ರ ಸರಕಾರವು ಹರಸಾಹಸವನ್ನು ಮಾಡುತ್ತಾ ಎಲ್ಲಾ ಪ್ರಜಾತಾಂತ್ರಿಕ ರೂಢಿಗಳನ್ನು ಮಣ್ಣು ಮಾಡಿ ರೈತರ ಮೇಲೆ ದೌರ್ಜನ್ಯವೆಸುತ್ತಿದ್ದರೆ ಇನ್ನೊಂದೆಡೆ ಮೊನ್ನೆ ಸುಪ್ರಿಂ ಕೋರ್ಟ ರೈತರ ಹೋರಾಟದ ಕುರಿತು ತನ್ನ ಅನುಕಂಪವನ್ನು ವ್ಯಕ್ತಪಡಿಸಿ ರೈತರ ಹೋರಾಟದ ಹಕ್ಕನ್ನು ಎತ್ತಿಹಿಡಿದಿದೆ. ಸರಕಾರವು ರೈತ ನಾಯಕರೊಂದಿಗೆ 6 ಸುತ್ತಿನ ಮಾತುಕತೆಯ ನಂತರ ತನ್ನ ಬಂಡವಾಳಶಾಹಿಗಳ ಪರವಾದ ನಿಷ್ಠೆಯನ್ನು ಮುಂದುವರೆಸುತ್ತಾ ರೈತರೊಂದಿಗಿನ ಮೊಂಡುತನವನ್ನು ಪ್ರದರ್ಶಿಸಿದೆ. ಅಲ್ಲದೆ ದೇಶಪ್ರೇಮಿ ರೈತರಿಗೆ ಕಳಂಕ ಹಚ್ಚುವ ಅನೈತಿಕ ಕೆಲಸವನ್ನು ಮಾಡುತ್ತಿದೆ. ಆದರೂ ಧೀರ ರೈತ ಹೋರಾಟಗಾರರು ಸರಕಾರದ ಎಲ್ಲಾ ಪ್ರಯತ್ನಗಳನ್ನು ವಿಫಲಗೊಳಿಸಿ ತಮ್ಮ ಐಕ್ಯತೆಯನ್ನು ಹಾಗೂ ತಮ್ಮ ಪ್ರಬಲ ವಿರೋಧವನ್ನು ಪ್ರದರ್ಶಿಸುತ್ತಿದ್ದಾರೆ. ಧೀರ ರೈತ ಹೋರಾಟಗಾರರೊಂದಿಗೆ ನಾವು ಇದ್ದೆವೆ ಹಾಗೂ ರೈತರಿಗೆ ಗೆಲುವು ಸಿಗುವವರೆಗೂ ನಾವು ನಿಮ್ಮೊಂದಿಗೆ ಹೋರಾಡುತ್ತೆವೆಂದು ಗ್ರಾಮಸ್ತರು ಪ್ರತಿಜ್ಞೆಯನ್ನು ಕೈಗೊಂಡರು.

ನೀಲಕಂಠ.ಎಮ್.ಹುಲಿ, ರಘು ಪವಾರ, ರಮೇಶ ದೇವಕರ್, ಕಿರಣ್.ಜಿ.ಮಾನೆ ಸೇರಿದಂತೆ ವಿವಿಧ ಹಳ್ಳಿಯ ನೂರಾರು ರೈತರು ಭಾಗವಹಿಸಿದರು.

emedia line

Recent Posts

ಪೂರ್ವ ಪೀಠಿಕೆ ಓದುವ ಮೂಲಕ ಸಂವಿಧಾನ ದಿನ ಆಚರಣೆ

ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…

2 hours ago

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

13 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

24 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

1 day ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 day ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 day ago