ಬಿಬಿಎಂಪಿಯಲ್ಲಿ ಅವ್ಯವಹಾರಗಳ ಬಗ್ಗೆ ಸಿಎಜಿ ವರದಿಯಲ್ಲಿ ಉಲ್ಲೇಖ: ಕ್ರಮಕೈಆಗ್ರಹ

ಬೆಂಗಳೂರು: ನಾವು ಓಟು ಹಾಕಿ ಗೆಲ್ಲಿಸಿರುವ ಜನಪ್ರತಿನಿಧಿಗಳು ನಮ್ಮ ನೋಟು ನುಂಗುತ್ತಿದ್ದಾರೆ‌. ಬೇರೆ ಬೇರೆ ರೂಪದಲ್ಲಿ ಹಣ ಖರ್ಚು ಮಾಡಿ ನಮ್ಮನ್ನೆಲ್ಲ ದೋಚುತ್ತಿದ್ದಾರೆ, ಆದರೂ ನಾವುಗಳು ದನಿ ಎತ್ತದೆ ಮೌನವಾಗಿದ್ದೇವೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದರು.

ಸೋಮವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, 27.7 ಕೋಟಿಗೆ ಖರೀದಿಸಿದ ಮೆಕ್ಯಾನಿಕಲ್ ಸ್ವೀಪಿಂಗ್ ಯಂತ್ರಗಳ ಬಳಕೆ, ಸ್ಟಾಕ್ ಪುಸ್ತಕಗಳ ನಿರ್ವಹಣೆಯಲ್ಲಿನ ವ್ಯತ್ಯಾಸ, ನಗದು ಪುಸ್ತಕದ ಅಸಮರ್ಪಕ ನಿರ್ವಹಣೆ, ಪ್ರಯಾಣಿಕರ ವಾಹನದ ನೋಂದಣಿ ಹೊಂದಿರುವ ವಾಹನವನ್ನು ಕಸ ಸಾಗಿಸುವ ಲಾರಿ ಎಂದು ನೀಡಿರುವ ತಪ್ಪು ಪಾವತಿ, ಹೆಚ್ಚುವರಿ ಡೀಸೆಲ್ ಬಿಲ್‌ಗಳನ್ನು ಪಾವತಿ, ಕಾಂಪ್ಯಾಕ್ಟರ್ ವಾಹನಗಳ ರಿಪೇರಿ ಮತ್ತು ನಿರ್ವಹಣೆಗೆ ಎಂದು 70 ಲಕ್ಷ ಹಣವನ್ನು ವ್ಯವ ಮಾಡಿರುವ ಬಗ್ಗೆ ಲೆಕ್ಕಪರಿಶೋಧನಾ ವರದಿಯನ್ನು ಸರ್ಕಾರಕ್ಕೆ ನೀಡಲಾಗಿದ್ದರೂ, ಇಲ್ಲಿಯವರೆಗೆ, ಅಕ್ರಮ ಎಸಗಿದ ವ್ಯಕ್ತಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲವೇಕೆ ಎಂದು ಪ್ರಶ್ನಿಸಿದರು.

ಪ್ರಸ್ತುತ ಲೆಕ್ಕ ಪರಿಶೋಧನೆಯನ್ನು ಪಶ್ಚಿಮ ವಲಯದಲ್ಲಿ ನಡೆಸಲಾಗಿದೆ ಮುಖ್ಯವಾಗಿ ಮಲ್ಲೇಶ್ವರಂ ಮತ್ತು ಗೋವಿಂದರಾಜನಗರ ವಿಧಾನಾಸಭಾ ಕ್ಷೇತ್ರಗಳಲ್ಲಿ ಮಾತ್ರ ಪರಿಶೋಧನೆ ನಡೆಸಿದ್ದು ಈ ಎರಡೂ ಕ್ಷೇತ್ರಗಳು ಬಿಜೆಪಿಯವರ ಕೈಯಲ್ಲೆ ಇವೆ. ಮಲ್ಲೇಶ್ವರಂ ಶಾಸಕರೂ, ಉಪಮುಖ್ಯಮಂತ್ರಿಗಳಾದ ಅಶ್ವತ್ಥ ನಾರಾಯಣ ಅವರ ಮೂಗಿನ ಕೆಳಗೆ ನಡೆದಿರುವ ಈ ಅವ್ಯವಹಾರ ಅತ್ಯಂತ ನಾಚಿಕೆಗೇಡಿನ ಸಂಗತಿ. ಎಲ್ಲಾ ವಾರ್ಡಿನ ಕಾರ್ಪೋರೇಟರ್‌ಗಳ ಪಾತ್ರದ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಸಂಪೂರ್ಣ ತನಿಖೆ ಮುಗಿಯುವ ತನಕ ಈ ಅವ್ಯವಹಾರಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ತಕ್ಷಣ ಅಮಾನತು ಮಾಡಬೇಕು, ನಷ್ಟಕ್ಕೆ ಕಾರಣರಾದ ವ್ಯಕ್ತಿಗಳಿಂದ ಹಣವನ್ನು ವಸೂಲಿ ಮಾಡಬೇಕು. ಬೆಂಗಳೂರಿನ ಎಲ್ಲಾ ವಿಭಾಗಗಳು ಮತ್ತು 198 ವಾರ್ಡ್‌ಗಳಲ್ಲಿಯೂ ಇದೇ ರೀತಿಯ ಲೆಕ್ಕಪರಿಶೋಧನೆ ನಡೆಸಬೇಕು ಎಂದು ಆಗ್ರಹಿಸಿದರು.

ಈ ಕೂಡಲೇ ಸರ್ಕಾರ ಈ ಹಗರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ದ ಸೂಕ್ತ ಕ್ರಮ ತೆಗೆದುಕೊಳ್ಳದಿದ್ದರೆ, ಆಮ್ ಆದ್ಮಿ ಪಕ್ಷವು ಈ ಭ್ರಷ್ಟಾಚಾರದ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುತ್ತದೆ ಹಾಗೂ ಜನತಾ ನ್ಯಾಯಾಲಯದ ಎದುರು ಹೋಗುತ್ತೇವೆ ಎಂದು  ಎಚ್ಚರಿಕೆ ನೀಡಿದರು.

ಪತ್ರಿಕಾ ಗೋಷ್ಠಿಯಲ್ಲಿ ಪಕ್ಷದ ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಲಕ್ಷ್ಮಿಕಾಂತ್ ರಾವ್ ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

9 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

11 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

11 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

11 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

12 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420