ಕಲಬುರಗಿ: ಯಡ್ರಾಮಿ, ಜೇವರ್ಗಿ ತಾಲ್ಲೂಕಿನ ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲು ಪಕ್ಷದ ರಾಜ್ಯ ಸಮಿತಿ ಒಪ್ಪಿಗೆ ನೀಡಿದೆ ಎಂದು ಆಮ್ ಆದ್ಮಿ ಪಕ್ಷದ ತಾಲ್ಲೂಕು ಸಂಚಾಲಕ ಈರಣ್ಣಗೌಡ ಪಾಟೀಲ ಗುಳ್ಯಾಳ ತಿಳಿಸಿದರು.
ಪಕ್ಷದ ಆದೇಶದಂತೆ ತಾಲ್ಲೂಕಿನಲ್ಲಿ ಎಲ್ಲಾ ಸಿದ್ಧತೆಯನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ ಅವರು ತಾಲ್ಲೂಕಿನಲ್ಲಿ ನಡೆಯುತ್ತಿರುವ ಹೊಂದಾಣಿಕೆ ರಾಜಕೀಯ ದಿಂದ ಅಭಿವೃದ್ಧಿ ಕಾರ್ಯ ಕುಂಠಿತ ಗೊಂಡಿದ್ದು, ಭ್ರಷ್ಟಾಚಾರ ತಾಂಡವಾತ್ತಿದೆ ಇದನ್ನೆಲ್ಲ ಜನಸಾಮಾನ್ಯರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು.
ಜೇವರ್ಗಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ಉದ್ಯಾನವನ ಉಳಿವಿಗಾಗಿ ಪಕ್ಷವು ಸುಮಾರು 65 ದಿನಗಳ ಕಾಲ ಹಗಲು ರಾತ್ರಿ ಹೋರಾಟ ನಡೆಸಿ ಒಂದು ಸಾವಿರ ಕೋಟಿ ರೂಪಾಯಿ ಬೆಲೆ ಬಾಳುವ ಸರ್ಕಾರಿ ಆಸ್ತಿ ಕಾಪಾಡುವ ಮೂಲಕ ಜನರ ವಿಶ್ವಾಸ ಗಳಿಸಿದ್ದು, ಪಕ್ಷ tp ZP ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆ.ಡಿ.ಎಸ್ ಪಕ್ಷಗಳನ್ನು ತಿರಸ್ಕರಿಸಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲಿಸಲಿದ್ದಾರೆ ಎಂದು ಈರಣ್ಣಗೌಡ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪಕ್ಷದಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಛಿಸಿರುವ ಪ್ರಾಮಾಣಿಕ ಅಭ್ಯರ್ಥಿ ಗಳು 9538812777 ಸಂಖ್ಯೆ ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಿದ್ದಾರೆ.